< ಯೆರೆಮೀಯನು 22 >
1 ೧ ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,
主はこう言われる、「ユダの王の家に下り、その所にこの言葉をのべて、
2 ೨ ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
言いなさい、『ダビデの位にすわるユダの王よ、あなたと、あなたの家臣、および、この門からはいるあなたの民は主の言葉を聞きなさい。
3 ೩ ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
主はこう言われる、公平と正義を行い、物を奪われた人を、しえたげる者の手から救い、異邦の人、孤児、寡婦を悩まし、しえたげてはならない。またこの所に、罪なき者の血を流してはならない。
4 ೪ “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
もしあなたがたがこの言葉を真実に行うならば、ダビデの位にすわる王とその家臣、およびその民は、車と馬に乗って、この家の門にはいることができる。
5 ೫ ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.
しかしあなたがたがこの言葉を聞かないならば、わたしは自身をさして誓うが、この家は荒れ地となると、主は言われる。
6 ೬ ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
主はユダの王の家についてこう言われる、あなたはわたしに対してギレアデのようであり、レバノンの頂のようである。しかし、わたしは必ずあなたを荒れ地にし、人の住まない町にする。
7 ೭ ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
わたしは滅ぼす者を設けて、あなたを攻めさせる、彼らはおのおのその武器をとり、あなたの麗しい香柏を切り倒し、火に投げ入れる。
8 ೮ ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
多くの国の人はこの町を過ぎ、互に語って、「なぜ主はこの大いなる町をこのようにされたのか」と言うとき、
9 ೯ ‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”
人は答えて、「これは彼らがその神、主の契約を捨てて他の神々を拝し、これに仕えたからである」と言うであろう』」。
10 ೧೦ ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
死んだ者のために泣くことなく、またそのために嘆いてはならない。捕え移されてゆく者のために、激しく泣け。彼はふたたび帰ってきて、その故郷を見ることがないからである。
11 ೧೧ ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
ユダの王ヨシヤの子シャルムは父ヨシヤについで王となったが、ついにこの所から出て行った。主は彼についてこう言われる、「彼は再びここに帰らない。
12 ೧೨ ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ.
彼はその捕え行かれた所で死に、再びこの地を見ない」。
13 ೧೩ ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
「不義をもってその家を建て、不法をもってその高殿を造り、隣り人を雇って何をも与えず、その賃金を払わない者はわざわいである。
14 ೧೪ ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
彼は言う、『わたしは自分のために大きな家を建て、広い高殿を造ろう』と。そしてこれがために窓を造り、香柏の鏡板でおおい、それを朱で塗る。
15 ೧೫ ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
あなたは競って香柏を用いることによって、王であると思うのか。あなたの父は食い飲みし、公平と正義を行って、幸を得たのではないか。
16 ೧೬ ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
彼は貧しい人と乏しい人の訴えをただして、さいわいを得た。こうすることがわたしを知ることではないかと主は言われる。
17 ೧೭ ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
しかし、あなたは目も心も、不正な利益のためにのみ用い、罪なき者の血を流そうとし、圧制と暴虐を行おうとする」。
18 ೧೮ ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
それゆえ、主はユダの王ヨシヤの子エホヤキムについてこう言われる、「人々は『悲しいかな、わが兄』、『悲しいかな、わが姉』と言って、彼のために嘆かない。また『悲しいかな、主君よ』、『悲しいかな、陛下よ』と言って嘆かない。
19 ೧೯ ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.
ろばが埋められるように、彼は葬られる。引かれて行って、エルサレムの門の外に投げ捨てられる」。
20 ೨೦ ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
「レバノンに登って呼ばわり、バシャンにあなたの声をあげ、アバリムから呼ばわれ。あなたの愛する者がみな滅ぼされるからだ。
21 ೨೧ ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
あなたの栄えていた時、わたしはあなたに語ったが『聞きたくはない』と言った。あなたがわたしの声に聞き従わないことは、あなたの幼い時からの、ならわしであった。
22 ೨೨ ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.
あなたの牧者はみな、風に追い立てられ、あなたの愛する者は捕え移される。その時、あなたは自分のもろもろの悪のために、恥じ、うろたえる。
23 ೨೩ ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!
レバノンに住み、香柏の中に巣をつくっている者よ、子を産む女に臨む苦しみのような苦痛があなたに臨むとき、あなたはどんなに嘆くことであろうか」。
24 ೨೪ ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
「主は言われる、わたしは生きている。ユダの王エホヤキムの子コニヤが、わたしの右手の指輪であっても、わたしはあなたを抜き取る。
25 ೨೫ ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
あなたの命を求める者の手、あなたがその顔を恐れる者の手、すなわちバビロンの王ネブカデレザルの手と、カルデヤびとの手にあなたを渡す。
26 ೨೬ ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.
わたしは、あなたと、あなたを産んだ母を、あなたがたの生れた国でない他の国に追いやる。あなたがたはそこで死ぬ。
27 ೨೭ ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ.
彼らが帰りたいとせつに願う国に、彼らは再び帰ることができない」。
28 ೨೮ ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
この人コニヤは卑しむべき、こわれたつぼであろうか、だれも心に留めない器であろうか。なぜ彼とその子孫は追いやられて、知らない地に投げやられるのか。
29 ೨೯ ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
ああ、地よ、地よ、地よ、主の言葉を聞けよ。
30 ೩೦ ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.
主はこう言われる、「この人を、子なき人として、またその一生のうち、栄えることのない人として記録せよ。その子孫のうち、ひとりも栄えて、ダビデの位にすわり、ユダを治めるものが再び起らないからである」。