< ಯೆರೆಮೀಯನು 24 >

1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
و بعد از آنکه نبوکدرصر پادشاه بابل یکنیا ابن یهویاقیم پادشاه یهودا را باروسای یهودا و صنعتگران و آهنگران ازاورشلیم اسیر نموده، به بابل برد، خداوند دو سبدانجیر را که پیش هیکل خداوند گذاشته شده بودبه من نشان داد۱
2 ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
که در سبد اول، انجیر بسیار نیکومثل انجیر نوبر بود و در سبد دیگر انجیر بسیار بدبود که چنان زشت بود که نمی شود خورد.۲
3 ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.
وخداوند مرا گفت: «ای ارمیا چه می‌بینی؟» گفتم: «انجیر. اما انجیرهای نیکو، بسیار نیکو است وانجیرهای بد بسیار بد است که از بدی آن رانمی توان خورد.»۳
4 ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
و کلام خداوند به من نازل شده، گفت:۴
5 “ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
«یهوه خدای اسرائیل چنین می‌گوید: مثل این انجیرهای خوب همچنان اسیران یهودا را که ایشان را از اینجا به زمین کلدانیان برای نیکویی فرستادم منظور خواهم داشت.۵
6 ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
و چشمان خودرا بر ایشان به نیکویی خواهم‌انداخت و ایشان را به این زمین باز خواهم آورد و ایشان را بنا کرده، منهدم نخواهم ساخت و غرس نموده، ریشه ایشان را نخواهم کند.۶
7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
و دلی به ایشان خواهم بخشید تا مرا بشناسند که من یهوه هستم و ایشان قوم من خواهند بود و من خدای ایشان خواهم بود، زیرا که به تمامی دل بسوی من بازگشت خواهند نمود.»۷
8 ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
خداوند چنین می‌گوید: «مثل انجیرهای بدکه چنان بد است که نمی توان خورد، البته همچنان صدقیا پادشاه یهودا و روسای او و بقیه اورشلیم را که در این زمین باقی‌مانده‌اند و آنانی راکه در مصر ساکن‌اند تسلیم خواهم نمود.۸
9 ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
وایشان را در تمامی ممالک زمین مایه تشویش وبلا و در تمامی مکان هایی که ایشان را رانده‌ام عارو ضرب‌المثل و مسخره و لعنت خواهم ساخت.۹
10 ೧೦ ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.
و در میان ایشان شمشیر و قحط و وبا خواهم فرستاد تا از زمینی که به ایشان و به پدران ایشان داده‌ام نابود شوند.»۱۰

< ಯೆರೆಮೀಯನು 24 >