< ಯೆರೆಮೀಯನು 26 >
1 ೧ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
Au début du règne de Joïakim, fils de Josias, roi de Juda, la parole que voici arriva de la part de l’Eternel:
2 ೨ “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
Ainsi parle l’Eternel: "Tiens-toi dans la cour de la maison de l’Eternel, et adresse aux gens de toutes les villes de Juda qui sont venus se prosterner dans la maison de l’Eternel toutes les paroles que je t’ordonne de leur adresser; n’en retranche pas un mot.
3 ೩ ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Peut-être écouteront-ils, se repentiront-ils chacun de leur mauvaise conduite et pourrai-je révoquer le malheur que je me propose de leur infliger à cause de la perversité de leurs actes.
4 ೪ ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
Tu leur diras donc: Ainsi parle l’Eternel: Si vous refusez de m’écouter, de suivre ma doctrine que j’ai promulguée devant vous,
5 ೫ ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
d’obéir aux paroles de mes serviteurs les prophètes que sans cesse et dès la première heure j’envoie vers vous, sans que vous leur prêtiez attention,
6 ೬ ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
je traiterai cette maison pareillement à silo, et de cette ville je ferai un objet de malédiction pour tous les peuples de la terre."
7 ೭ ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
Or, les prêtres, les prophètes et tout le peuple entendirent Jérémie prononcer ces paroles dans la maison de Dieu.
8 ೮ ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
Et quand Jérémie eut achevé de dire ce que l’Eternel lui avait ordonné de dire à tout le peuple, les prêtres, les prophètes et tout le peuple se saisirent de lui en s’écriant: "Il faut que tu meures!
9 ೯ ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
Pourquoi as-tu prophétisé au nom de l’Eternel en disant: Cette maison deviendra semblable à silo, et cette ville sera ruinée, privée d’habitants?" Tout le peuple s’attroupa autour de Jérémie dans la maison de Dieu.
10 ೧೦ ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
Lorsque les grands de Juda eurent connaissance de ces faits, ils se rendirent du palais du roi au Temple de l’Eternel et prirent place à l’entrée de la porte Neuve de l’Eternel.
11 ೧೧ ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
Alors les prêtres et les prophètes dirent aux grands et à tout le peuple: "Cet homme mérite la mort, car il a prophétisé contre cette ville, comme vous l’avez entendu de vos propres oreilles."
12 ೧೨ ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
Jérémie, s’adressant à tous les grands et au peuple entier, leur dit: "C’Est l’Eternel qui m’a envoyé pour prophétiser contre cette maison et contre cette ville toutes les paroles que vous avez entendues.
13 ೧೩ ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Or, donc, améliorez votre conduite et vos oeuvres, écoutez la voix de l’Eternel, votre Dieu, pour que l’Eternel révoque le malheur qu’il a décrété contre vous.
14 ೧೪ ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
Quant à moi, je suis en votre pouvoir, traitez-moi comme il vous paraîtra bon et équitable.
15 ೧೫ ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
Toutefois, sachez bien que si vous me faites mourir, c’est du sang innocent que vous répandez sur vous, sur cette ville et ses habitants; car, en vérité, c’est l’Eternel qui m’a envoyé vers vous, pour faire entrer dans vos oreilles tous ces discours que je tiens."
16 ೧೬ ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
Alors les grands et tout le peuple dirent aux prêtres et aux prophètes: "Cet homme ne mérite pas la mort, car c’est au nom de l’Eternel, notre Dieu, qu’il nous a parlé."
17 ೧೭ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
Puis, quelques-uns parmi les anciens du pays se levèrent et s’adressèrent en ces termes à toute l’assemblée du peuple:
18 ೧೮ “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
"Michée, de Moréchet, prophétisait du temps d’Ezechias, roi de Juda, et voici ce qu’il disait à tout le peuple de Juda: Ainsi a parlé l’Eternel-Cébaoth: Sion sera labourée comme un champ, Jérusalem deviendra un monceau de ruines et la montagne du Temple une hauteur boisée.
19 ೧೯ ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
Ezéchias, roi de Juda, et tout le peuple de Juda l’ont-ils condamné à mourir? N’A-t-on pas craint l’Eternel et cherché à apaiser sa colère? Aussi l’Eternel révoqua-t-il le mal qu’il avait décrété contre eux; et nous, nous chargerions nos âmes d’un si grand crime!"
20 ೨೦ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
Il y eut encore un homme qui prophétisait au nom de l’Eternel: c’était Ouria, fils de Chemaya, de Kiriat-Yearim. II prophétisait contre cette ville et contre ce pays exactement dans les mêmes termes que Jérémie.
21 ೨೧ ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
Le roi Joïakim eut connaissance de ses discours ainsi que tous ses hommes de guerre et tous les grands, et il chercha à le mettre à mort. Ouria en fut informé, il prit peur, s’enfuit et se rendit en Egypte.
22 ೨೨ ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
Alors le roi Joïakim envoya des gens en Egypte: c’était Elnathan, fils d’Akhbor, et quelques autres avec lui pour l’accompagner en Egypte.
23 ೨೩ ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Ils firent sortir Ouria hors d’Egypte et l’amenèrent au roi Joïakim, qui le fit périr par le glaive et ordonna de jeter son cadavre parmi les tombes du bas peuple.
24 ೨೪ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
Toutefois, Ahi’kam, fils de Chafan, protégea Jérémie et empêcha qu’il ne fût livré au pouvoir du peuple et mis à mort.