< ಯೆರೆಮೀಯನು 26 >

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
Tia paht tukun Jehoiakim, wen natul Josiah, el tokosrala lun Judah,
2 “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.
LEUM GOD El fahk nu sik, “Tu in kalkal lun Tempul ac sulkakin ma nukewa nga sapkin nu sum in fahkak nu sin mwet su tuku liki siti lun Judah in alu we. Nimet kom sisla siefanna kas.
3 ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Sahp mwet uh ac porongo ac forla liki ouiya koluk lalos. Elos fin oru ouinge, na nga fah ekulla nunak luk ac tia kunauselosla oana ke nga tuh akoo in oru ke sripen orekma koluk nukewa lalos.”
4 ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,
LEUM GOD El fahk nu sik in fahk nu sin mwet uh, “Nga, LEUM GOD, fahk mu kowos enenu in akosyu, ac fahsr tukun mwe luti nga sot nu suwos,
5 ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,
ac lohang nu ke kas lun mwet kulansap luk mwet palu, su nga nuna supu nu yuruwos. Kowos tiana akos ma elos fahk.
6 ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
Kowos fin oeoelana in seakos, na nga ac oru nu ke Tempul se inge oana ma nga tuh oru nu ke Shiloh, ac mutunfacl nukewa fin faclu fah orekmakin inen siti se inge oana sie mwe selnga.”
7 ಯೆರೆಮೀಯನು ಯೆಹೋವನ ಆಲಯದಲ್ಲಿ ಹೀಗೆ ಮಾತನಾಡುವುದನ್ನು ಯಾಜಕರೂ, ಪ್ರವಾದಿಗಳು ಮತ್ತು ಸಕಲ ಜನರೂ ಕೇಳಿದರು.
Mwet tol, mwet palu, ac mwet nukewa lohng ke nga fahk ma inge in Tempul,
8 ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
na tukunna nga fahkla tari ma nukewa ma LEUM GOD El sapkin ngan fahk, elos sruokyuwi ac wowo ac fahk, “Kom enenu na in anwuki!
9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
Efu kom ku fahk ke Inen LEUM GOD mu Tempul se inge ac fah oana Shiloh, ac siti se inge ac fah kunausyukla ac wangin mwet ac fah muta we?” Na mwet uh rireni rauniyula.
10 ೧೦ ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
Ke mwet kol lun Judah lohng ma sikyak inge, elos sulaklak tuku liki inkul fulat sin tokosra nu ke Tempul, ac muta ke acn selos ke Mutunpot Sasu.
11 ೧೧ ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
Na mwet tol ac mwet palu fahk nu sin mwet kol ac nu sin mwet uh, “Mwet se inge fal in anwuki, mweyen el kaskas lain siti sesr uh. Kowos sifacna lohng ma el fahk inge.”
12 ೧೨ ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
Na nga fahk, “LEUM GOD El supweyume in sulkakin ma nukewa ma kowos lohng nga fahk lain Tempul se inge ac lain siti se inge.
13 ೧೩ ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Kowos enenu in ekulla ouiyen moul lowos ac ma kowos oru, ac enenu in akos LEUM GOD lowos. Kowos fin oru ouinge, El ac ekulla pwapa in kunausten ma El akoo in oru nu suwos.
14 ೧೪ ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವುದನ್ನು ನನಗೆ ಮಾಡಿರಿ.
Ac funu keik, nga oasr inpouwos! Oru kutena ma kowos nunku mu fal ku suwohs.
15 ೧೫ ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
Tusruktu kowos in arulana etu lah kowos fin uniyuwi, kowos uniya sie mwet wangin mwata, na oasr mwatuwos ac mwet in siti se inge ke akmas, mweyen LEUM GOD pa supweyume in fahk ma inge in sensenkakin kowos.”
16 ೧೬ ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
Na mwet kol ac mwet uh fahk nu sin mwet tol ac mwet palu, “Mwet se inge kaskas nu sesr ke Inen LEUM GOD lasr. Tia fal in anwuki el.”
17 ೧೭ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,
Tukun ma ine, kutu sin mwet matu tuyak ac fahk nu sin mwet su tukeni,
18 ೧೮ “ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
“Ke pacl se Hezekiah el tuh tokosra lun Judah, mwet palu Micah lun Moresheth el fahkang nu sin walil sac nufon lah LEUM GOD Kulana El fahk mu, ‘Zion ac fah pukpukyak oana sie ima. Jerusalem fah oana sie yol in ma kulawi, Ac inging in Tempul fah ekla oana insak uh!’
19 ೧೯ ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
Tokosra Hezekiah ac mwet Judah tuh tiana unilya Micah, a Hezekiah el tuh akfulatye LEUM GOD ac kwafe tuh Elan pakoten nu sel. Na LEUM GOD El aolla nunak lal liki kunausten ma El tuh fahk mu El ac use nu faclos. Ac inge, kut apkuran in sifacna use sie kunausten lulap nu facsr.” (
20 ೨೦ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
Tuh oasr pac mukul se, pangpang Uriah wen natul Shemaiah in acn Kiriath Jearim, su tuh kaskas ke Inen LEUM GOD lain siti se inge ac mutunfacl se inge, oana ke Jeremiah el oru.
21 ೨೧ ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.
Ke Tokosra Jehoiakim, ac mwet mweun ac mwet fulat lal lohng ma Uriah el tuh fahk, na tokosra el tuh srike in sang elan anwuki. Tusruktu Uriah el lohngak, oru el sangeng ac kaingla nu Egypt.
22 ೨೨ ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
Na Tokosra Jehoiakim el supwalla Elnathan wen natul Achbor, ac kutu pac mukul nu Egypt in usalu Uriah.
23 ೨೩ ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.
Elos folokunulma nu yorol Tokosra Jehoiakim, su sap in anwuki el, ac manol sisiyang nu in kulyuk lun mwet pusisel.)
24 ೨೪ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
Tusruktu ke sripen kasru lal Ahikam wen natul Shaphan, elos tia eisyuyang nu inpoun mwet uh in anwuki nga.

< ಯೆರೆಮೀಯನು 26 >