< ಯೆರೆಮೀಯನು 27 >
1 ೧ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
犹大王约西亚的儿子约雅敬登基的时候,有这话从耶和华临到耶利米说:
2 ೨ “ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,
“耶和华对我如此说:你做绳索与轭,加在自己的颈项上,
3 ೩ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
借那些来到耶路撒冷见犹大王西底家的使臣之手,把绳索与轭送到以东王、摩押王、亚扪王、泰尔王、西顿王那里,
4 ೪ ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’
且嘱咐使臣,传与他们的主人说,万军之耶和华—以色列的 神如此说:
5 ೫ ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
我用大能和伸出来的膀臂,创造大地和地上的人民、牲畜。我看给谁相宜,就把地给谁。
6 ೬ ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
现在我将这些地都交给我仆人巴比伦王尼布甲尼撒的手,我也将田野的走兽给他使用。
7 ೭ ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
列国都必服事他和他的儿孙,直到他本国遭报的日期来到。那时,多国和大君王要使他作他们的奴仆。
8 ೮ ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
“无论哪一邦哪一国,不肯服事这巴比伦王尼布甲尼撒,也不把颈项放在巴比伦王的轭下,我必用刀剑、饥荒、瘟疫刑罚那邦,直到我借巴比伦王的手将他们毁灭。这是耶和华说的。
9 ೯ ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
至于你们,不可听从你们的先知和占卜的、圆梦的、观兆的,以及行邪术的;他们告诉你们说:‘你们不致服事巴比伦王。’
10 ೧೦ ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
他们向你们说假预言,要叫你们迁移,远离本地,以致我将你们赶出去,使你们灭亡。
11 ೧೧ ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”
但哪一邦肯把颈项放在巴比伦王的轭下服事他,我必使那邦仍在本地存留,得以耕种居住。这是耶和华说的。”
12 ೧೨ ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.
我就照这一切的话对犹大王西底家说:“要把你们的颈项放在巴比伦王的轭下,服事他和他的百姓,便得存活。
13 ೧೩ ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.
你和你的百姓为何要因刀剑、饥荒、瘟疫死亡,正如耶和华论到不服事巴比伦王的那国说的话呢?
14 ೧೪ ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
不可听那些先知对你们所说的话;他们说:‘你们不致服事巴比伦王’,其实他们向你们说假预言。
15 ೧೫ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’”
耶和华说:‘我并没有打发他们,他们却托我的名说假预言,好使我将你们和向你们说预言的那些先知赶出去,一同灭亡。’”
16 ೧೬ ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.
我又对祭司和这众民说:“耶和华如此说:你们不可听那先知对你们所说的预言。他们说:‘耶和华殿中的器皿快要从巴比伦带回来’;其实他们向你们说假预言。
17 ೧೭ ಅವರ ಕಡೆಗೆ ಕಿವಿಗೊಡಲೇ ಬಾರದು; ಬಾಬೆಲಿನ ಅರಸನ ಅಡಿಯಾಳಾಗಿರಿ, ಬದುಕುವಿರಿ.
不可听从他们,只管服事巴比伦王便得存活。这城何致变为荒场呢?
18 ೧೮ ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
他们若果是先知,有耶和华的话临到他们,让他们祈求万军之耶和华,使那在耶和华殿中和犹大王宫内,并耶路撒冷剩下的器皿,不被带到巴比伦去。(
19 ೧೯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನ ಸಮಸ್ತ ಪ್ರಧಾನರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಉಪಕರಣಗಳನ್ನು ತೆಗೆದುಕೊಳ್ಳಲಿಲ್ಲವಲ್ಲಾ.
因为万军之耶和华论到柱子、铜海、盆座,并剩在这城里的器皿,
20 ೨೦ ಆ ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಈ ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,
就是巴比伦王尼布甲尼撒掳掠犹大王约雅敬的儿子耶哥尼雅,和犹大、耶路撒冷一切贵胄的时候所没有掠去的器皿。)
21 ೨೧ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ,
论到那在耶和华殿中和犹大王宫内,并耶路撒冷剩下的器皿,万军之耶和华—以色列的 神如此说:
22 ೨೨ ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’”
必被带到巴比伦存在那里,直到我眷顾以色列人的日子。那时,我必将这器皿带回来,交还此地。这是耶和华说的。”