< ಯೆರೆಮೀಯನು 29 >
1 ೧ ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
Estas são as palavras da carta que o profeta Jeremias enviou de Jerusalém ao restante dos anciãos levados cativos, como também aos sacerdotes e aos profetas, e a todo o povo, que Nabucodonosor havia transportado de Jerusalém para a Babilônia,
2 ೨ ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.
Depois da saída do rei Jeconias, da rainha-mãe, dos príncipes de Judá e Jerusalém, e dos carpinteiros e ferreiros de Jerusalém,
3 ೩ ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
[Enviada] pela mão de Elasá, filho de Safã, e de Gemarias, filho de Hilquias, os quais Zedequias rei de Judá enviou a Nabucodonosor rei da Babilônia, dizendo:
4 ೪ ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
Assim diz o SENHOR dos exércitos, Deus de Israel, a todos os levados cativos, os quais fiz transportar de Jerusalém à Babilônia:
5 ೫ ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.
Edificai casas, e [nelas] habitai; plantai hortas, e comei o fruto delas.
6 ೬ ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.
Tomai esposas, e gerai filhos e filhas, e tomai esposas para vossos filhos, e dai vossas filhas a homens, para que gerem filhos e filhas; e ali multiplicai-vos, e não vos diminuais.
7 ೭ ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ, ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.
E buscai a paz da cidade para onde eu vos levei, e orai por ela ao SENHOR; porque na paz dela vós tereis paz.
8 ೮ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
Porque assim diz o SENHOR dos exércitos, Deus de Israel: Os vossos profetas, que há entre vós, e vossos adivinhos não vos enganem; nem escutais a vossos sonhos, que vós sonhais.
9 ೯ ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
Pois eles vos profetizam falsamente em meu nome; eu não os enviei, diz o SENHOR.
10 ೧೦ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
Porque assim diz o SENHOR: Certamente que, quando se cumprirem setenta anos na Babilônia, eu vos visitarei; e cumprirei sobre vós minha boa palavra, trazendo-vos de volta a este lugar.
11 ೧೧ ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
Porque eu sei os pensamentos que penso quanto a vós, diz o SENHOR, pensamentos de paz, e não de mal, para vos dar um futuro com esperança.
12 ೧೨ ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
Então me invocareis, e ireis, e orareis a mim, e eu vos ouvirei;
13 ೧೩ ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
E vós me buscareis e achareis, quando me buscardes de todo o vosso coração.
14 ೧೪ ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
E serei achado por vós, diz o SENHOR, e vos restauarei de vosso infortúnio, e vos ajuntarei de todas as nações, e de todos os lugares para onde eu vos lancei, diz o SENHOR; e vos farei voltar ao lugar de onde vos fiz serdes levados cativos.
15 ೧೫ ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.
Visto que dizeis: “O SENHOR tem nos levantado profetas na Babilônia”,
16 ೧೬ ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
por isso assim diz o SENHOR acerca do rei que se assenta sobre o trono de Davi, e de todo o povo que mora nesta cidade, os vossos irmãos que não saíram convosco ao cativeiro;
17 ೧೭ “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
Assim diz o SENHOR dos exércitos: Eis que enviarei contra eles espada, fome, e pestilência; e farei deles como a figos podres, que de tão ruins não podem ser comidos.
18 ೧೮ ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
E os perseguirei com espada, com fome e com pestilência; e os farei de horror a todos os reinos da terra, de maldição e de espanto, e de assovio e de humilhação entre todas a nações às quais eu os tiver lançado;
19 ೧೯ ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”
Porque não deram ouvidos às minhas palavras, diz o SENHOR, que lhes enviei por meus servos os profetas, insistindo em os enviar; próem não escutastes, diz o SENHOR.
20 ೨೦ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.
Vós, pois, ouvi a palavra do SENHOR, todos os do cativeiro que enviei de Jerusalém à Babilônia.
21 ೨೧ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
Assim diz o SENHOR dos exércitos, Deus de Israel, quanto a Acabe filho de Colaías, e quanto a Zedequias filho de Maaseias, que vos profetizam falsamente em meu nome: Eis que os entregarei na mão de Nabucodonosor rei da Babilônia, e ele os ferirá diante de vossos olhos.
22 ೨೨ ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.
E todos os exilados de Judá que estão na Babilônia, os usarão como objeto de maldição, dizendo: Que o SENHOR faça a ti como a Zedequias e como a Acabe, aos quais o rei de Babilônia assou no fogo;
23 ೨೩ ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
porque fizeram loucura em Israel, e cometeram adultério com as mulheres de seus próximos; e falaram falsamente em meu nome palavra que não lhes mandei; e disso eu sei, e sou testemunha, diz o SENHOR.
24 ೨೪ ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು, ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು,
E a Semaías o neelamita falarás, dizendo:
25 ೨೫ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,
Assim diz o SENHOR dos exércitos, Deus de Israel, dizendo: Enviaste em teu nome cartas a todo o povo que está em Jerusalém, e a Sofonias, filho do sacerdote Maaseias, e a todos os sacerdotes, dizendo:
26 ೨೬ “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
O SENHOR te pôs por sacerdote em lugar do sacerdote Joiada, para que sejas supervisor na casa do SENHOR sobre todo homem furioso e profetizante, para o lançares na prisão e no tronco.
27 ೨೭ ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?
Agora, pois, por que não repreendeste a Jeremias de Anatote, que vos profetiza?
28 ೨೮ ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”
Porque por isso ele nos mandou dizer na Babilônia: [O cativeiro] será duradouro; edificai casas, e [nelas] morai; plantai hortas, e comei o fruto delas.
29 ೨೯ ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.
E o sacerdote Sofonias leu esta carta aos ouvidos do profeta Jeremias.
30 ೩೦ ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.
Então veio a palavra do SENHOR a Jeremias, dizendo:
31 ೩೧ ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
Manda dizer a todos os do cativeiro: Assim diz o SENHOR quanto a Semaías, o neelamita: Visto que Semaías vos profetizou, sem que eu tenha o enviado, e vos fez confiar em mentiras;
32 ೩೨ ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
Portanto assim diz o SENHOR: Eis que castigarei Semaías o neelamita, e a sua descendência; ele não terá ninguém que habite entre este povo, nem verá o bem que eu farei a meu povo, diz o SENHOR; pois ele falou rebelião contra o SENHOR.