< ಯೆರೆಮೀಯನು 30 >
1 ೧ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
Реч која дође Јеремији од Господа говорећи:
2 ೨ “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ನೀನು ಗ್ರಂಥವಾಗಿ ಬರೆ.
Овако вели Господ Бог Израиљев говорећи: Напиши у књигу све речи које ти говорих.
3 ೩ ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.
Јер ево иду дани, говори Господ, кад ћу повратити робље народа свог Израиља и Јуде, говори Господ, и довешћу их натраг у земљу коју сам дао оцима њиховим, и држаће је.
4 ೪ ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
И ово су речи које рече Господ за Израиља и Јуду.
5 ೫ “ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;
Јер овако вели Господ: Чусмо вику од препадања, страха, а мира нема.
6 ೬ ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?
Питајте и видите, еда ли мушко рађа? Зашто, дакле, видим где се сваки човек држи рукама својим за бедра своја као породиља и у свих се променила лица и побледела?
7 ೭ ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
Јаох! Јер је велик овај дан, није било таквог, и време је муке Јаковљеве, ипак ће се избавити из ње.
8 ೮ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
Јер у тај дан, говори Господ над војскама, сломићу јарам његов с врата твог, и свезе твоје покидаћу; и неће га више туђини нагонити да им служи.
9 ೯ ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
Него ће служити Господу Богу свом и Давиду цару свом, ког ћу им подигнути.
10 ೧೦ ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”
Ти се дакле не бој, Јакове слуго мој, говори Господ, и не плаши се, Израиљу; јер, ево, ја ћу те избавити из далеке земље, и семе твоје из земље ропства твог, и Јаков ће се вратити и почивати, и биће миран, и нико га неће плашити.
11 ೧೧ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”
Јер сам ја с тобом, говори Господ, да те избавим; и учинићу крај свим народима, међу које сам те расејао, али теби нећу учинити краја, него ћу те покарати с мером, а нећу те оставити са свим без кара.
12 ೧೨ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
Јер овако вели Господ: Смртан је полом твој и рана твоја љута.
13 ೧೩ ನಿನ್ನ ಪಾಲಿಗೆ ಯಾರೂ ಇಲ್ಲ, ನಿನ್ನ ಹುಣ್ಣಿಗೆ ಔಷಧವಿಲ್ಲ, ನಿನಗೆ ವಾಸಿಯಾಗುವುದಿಲ್ಲ.
Нема никога који би се примио твоје ствари да те лечи, нема лека који би ти помогао.
14 ೧೪ ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
Сви који те љубе заборавише те, не траже те, јер те ударих ударцем непријатељским, каром жестоким, за мноштво безакоња твог, за силне грехе твоје.
15 ೧೫ ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
Зашто вичеш ради ране своје, смртног бола свог? За мноштво безакоња твог, за силне грехе твоје чиним ти то.
16 ೧೬ ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
Али сви који те прождиру, прождреће се, и непријатељи твоји свиколики отићи ће у ропство, и који те газе, биће погажени, и све који те плене, даћу их да се оплене.
17 ೧೭ ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”
Јер ћу те исцелити, и ране ћу ти излечити, говори Господ, јер те зваше отераном: Сионом, ког нико не тражи.
18 ೧೮ ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.
Овако вели Господ: Ево, ја ћу повратити из ропства шаторе Јаковљеве и смиловаћу се на станове његове; и град ће се сазидати на месту свом, и двор ће стајати на свој начин.
19 ೧೯ ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.
И из њих ће излазити хвале и глас људи веселих, јер ћу их умножити, и неће се умањивати, и узвисићу их, и неће се понизити.
20 ೨೦ ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.
И синови ће његови бити као пре, и збор ће његов бити утврђен преда мном, и походићу све који му чине силу.
21 ೨೧ ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”
И кнез ће њихов бити од њих, и владалац ће њихов излазити исред њих; и даћу му да приступа, и приступаће к мени; јер ко је тај који се усуђује приступити к мени? Говори Господ.
22 ೨೨ ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
И бићете ми народ, и ја ћу вам бити Бог.
23 ೨೩ ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು.
Гле, вихор Господњи, гнев, изићи ће, вихор, који не престаје, пашће на главу безбожницима.
24 ೨೪ ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು, ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.
Неће се повратити жестоки гнев Господњи докле не учини и изврши шта је наумио у срцу свом; на послетку ћете разумети то.