< ಯೆರೆಮೀಯನು 31 >
1 ೧ ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.
in/on/with time [the] he/she/it utterance LORD to be to/for God to/for all family Israel and they(masc.) to be to/for me to/for people
2 ೨ ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,
thus to say LORD to find favor in/on/with wilderness people survivor sword to go: come to/for to rest him Israel
3 ೩ ‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,
from distant LORD to see: see to/for me and love forever: enduring to love: lover you upon so to draw you kindness
4 ೪ ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
still to build you and to build virgin Israel still to adorn tambourine your and to come out: come in/on/with dance to laugh
5 ೫ ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.
still to plant vineyard in/on/with mountain: mount Samaria to plant to plant and to profane/begin: fruit
6 ೬ ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.
for there day to call: call out to watch in/on/with mountain: hill country Ephraim to arise: rise and to ascend: rise Zion to(wards) LORD God our
7 ೭ ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
for thus to say LORD to sing to/for Jacob joy and to cry out in/on/with head: leader [the] nation to hear: proclaim to boast: praise and to say to save LORD [obj] people your [obj] remnant Israel
8 ೮ ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
look! I to come (in): bring [obj] them from land: country/planet north and to gather them from flank land: country/planet in/on/with them blind and lame pregnant and to beget together assembly great: large to return: return here/thus
9 ೯ ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
in/on/with weeping to come (in): come and in/on/with supplication to conduct them to go: walk them to(wards) torrent: river water in/on/with way: road upright not to stumble in/on/with her for to be to/for Israel to/for father and Ephraim firstborn my he/she/it
10 ೧೦ ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,
to hear: hear word LORD nation and to tell in/on/with coastland from distance and to say to scatter Israel to gather him and to keep: guard him like/as to pasture flock his
11 ೧೧ ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.
for to ransom LORD [obj] Jacob and to redeem: redeem him from hand strong from him
12 ೧೨ ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
and to come (in): come and to sing in/on/with height Zion and to flow to(wards) goodness LORD upon grain and upon new wine and upon oil and upon son: young animal flock and cattle and to be soul: life their like/as garden watered and not to add: again to/for to languish still
13 ೧೩ ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.
then to rejoice virgin in/on/with dance and youth and old together and to overturn mourning their to/for rejoicing and to be sorry: comfort them and to rejoice them from sorrow their
14 ೧೪ ಯಾಜಕರನ್ನು ಮೃಷ್ಟಾನ್ನಭೋಜನದಿಂದ ತೃಪ್ತಿಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.”
and to quench soul [the] priest ashes and people my [obj] goodness my to satisfy utterance LORD
15 ೧೫ ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”
thus to say LORD voice in/on/with Ramah to hear: hear wailing weeping bitterness Rachel to weep upon son: child her to refuse to/for to be sorry: comfort upon son: child her for nothing he
16 ೧೬ ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.
thus to say LORD to withhold voice your from weeping and eye your from tears for there wages to/for wages your utterance LORD and to return: return from land: country/planet enemy
17 ೧೭ ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.
and there hope to/for end your utterance LORD and to return: return son: child to/for border: area their
18 ೧೮ ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
to hear: hear to hear: hear Ephraim to wander to discipline me and to discipline like/as calf not to learn: teach to return: return me and to return: rescue for you(m. s.) LORD God my
19 ೧೯ ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”
for after to return: repent I to be sorry: relent and after to know I to slap upon thigh be ashamed and also be humiliated for to lift: bear reproach youth my
20 ೨೦ ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.
son: child precious to/for me Ephraim if: surely yes youth delight for from sufficiency to speak: speak I in/on/with him to remember to remember him still upon so to roar belly my to/for him to have compassion to have compassion him utterance LORD
21 ೨೧ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
to stand to/for you signpost to set: make to/for you signpost to set: consider heart your to/for highway way: road (to go: went *Q(K)*) to return: return virgin Israel to return: return to(wards) city your these
22 ೨೨ ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”
till how to turn away [emph?] [the] daughter [the] backsliding for to create LORD new in/on/with land: country/planet female to turn: surround great man
23 ೨೩ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
thus to say LORD Hosts God Israel still to say [obj] [the] word [the] this in/on/with land: country/planet Judah and in/on/with city his in/on/with to return: rescue I [obj] captivity their to bless you LORD pasture righteousness mountain: mount [the] holiness
24 ೨೪ ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.
and to dwell in/on/with her Judah and all city his together farmer and to set out in/on/with flock
25 ೨೫ ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.
for to quench soul faint and all soul to languish to fill
26 ೨೬ ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.
upon this to awake and to see: see and sleep my to please to/for me
27 ೨೭ ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.
behold day to come (in): come utterance LORD and to sow [obj] house: household Israel and [obj] house: household Judah seed man and seed animal
28 ೨೮ ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.
and to be like/as as which to watch upon them to/for to uproot and to/for to tear and to/for to overthrow and to/for to perish and to/for be evil so to watch upon them to/for to build and to/for to plant utterance LORD
29 ೨೯ ‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.
in/on/with day [the] they(masc.) not to say still father to eat unripe grape and tooth son: child be blunt
30 ೩೦ ಸಾಯತಕ್ಕವನು ತನ್ನ ತನ್ನ ದೋಷದಿಂದ ಸಾಯುವನು. ಹುಳಿದ್ರಾಕ್ಷಿಯನ್ನು ತಿನ್ನುವವನ ಹಲ್ಲುಗಳೇ ಚಳಿತುಹೋಗುವವು” ಎಂದು ಹೇಳುತ್ತಾನೆ.
that if: except if: except man: anyone in/on/with iniquity: crime his to die all [the] man [the] to eat [the] unripe grape be blunt tooth his
31 ೩೧ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಮತ್ತು ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
behold day to come (in): come utterance LORD and to cut: make(covenant) with house: household Israel and with house: household Judah covenant new
32 ೩೨ ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
not like/as covenant which to cut: make(covenant) with father their in/on/with day to strengthen: hold I in/on/with hand their to/for to come out: send them from land: country/planet Egypt which they(masc.) to break [obj] covenant my and I rule: to marry in/on/with them utterance LORD
33 ೩೩ ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
for this [the] covenant which to cut: make(covenant) with house: household Israel after [the] day [the] they(masc.) utterance LORD to give: put [obj] instruction my in/on/with entrails: among their and upon heart their to write her and to be to/for them to/for God and they(masc.) to be to/for me to/for people
34 ೩೪ ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
and not to learn: teach still man: anyone [obj] neighbor his and man: anyone [obj] brother: male-sibling his to/for to say to know [obj] LORD for all their to know [obj] me to/for from small their and till great: large their utterance LORD for to forgive to/for iniquity: crime their and to/for sin their not to remember still
35 ೩೫ ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
thus to say LORD to give: give sun to/for light by day statute moon and star to/for light night to disturb [the] sea and to roar heap: wave his LORD Hosts name his
36 ೩೬ “ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ, ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.”
if to remove [the] statute: decree [the] these from to/for face: before my utterance LORD also seed: children Israel to cease from to be nation to/for face: before my all [the] day: always
37 ೩೭ ಯೆಹೋವನು, “ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಾನು ಆ ವಂಶವನ್ನು ನಿರಾಕರಿಸಿಬಿಡುವೆನು” ಎಂದು ಹೇಳುತ್ತಾನೆ.
thus to say LORD if to measure heaven from to/for above [to] and to search foundation land: country/planet to/for beneath also I to reject in/on/with all seed: children Israel upon all which to make: do utterance LORD
38 ೩೮ ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.
behold (day to come (in): come *Q(K)*) utterance LORD and to build [the] city to/for LORD from (Hananel) Tower (Tower of) Hananel gate [the] Corner (Gate)
39 ೩೯ ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.
and to come out: come still (line *Q(K)*) [the] measure before him upon hill Gareb and to turn: turn Goah [to]
40 ೪೦ ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
and all [the] valley [the] corpse and [the] ashes and all ([the] field *Q(K)*) till torrent: valley Kidron till corner gate [the] Horse (Gate) east [to] holiness to/for LORD not to uproot and not to overthrow still to/for forever: enduring