< ಯೆರೆಮೀಯನು 33 >

1 ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಯೆಹೋವನು ಈ ಎರಡನೆಯ ವಾಕ್ಯವನ್ನು ಅನುಗ್ರಹಿಸಿದನು.
וַיְהִ֧י דְבַר־יְהוָ֛ה אֶֽל־יִרְמְיָ֖הוּ שֵׁנִ֑ית וְהוּא֙ עֹודֶ֣נּוּ עָצ֔וּר בַּחֲצַ֥ר הַמַּטָּרָ֖ה לֵאמֹֽר׃
2 “ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,
כֹּֽה־אָמַ֥ר יְהוָ֖ה עֹשָׂ֑הּ יְהוָ֗ה יֹוצֵ֥ר אֹותָ֛הּ לַהֲכִינָ֖הּ יְהוָ֥ה שְׁמֹֽו׃
3 ‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
קְרָ֥א אֵלַ֖י וְאֶעֱנֶ֑ךָּ וְאַגִּ֧ידָה לְּךָ֛ גְּדֹלֹ֥ות וּבְצֻרֹ֖ות לֹ֥א יְדַעְתָּֽם׃ ס
4 ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,
כִּי֩ כֹ֨ה אָמַ֤ר יְהוָה֙ אֱלֹהֵ֣י יִשְׂרָאֵ֔ל עַל־בָּתֵּי֙ הָעִ֣יר הַזֹּ֔את וְעַל־בָּתֵּ֖י מַלְכֵ֣י יְהוּדָ֑ה הַנְּתֻצִ֕ים אֶל־הַסֹּלְלֹ֖ות וְאֶל־הֶחָֽרֶב׃
5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.
בָּאִ֗ים לְהִלָּחֵם֙ אֶת־הַכַּשְׂדִּ֔ים וּלְמַלְאָם֙ אֶת־פִּגְרֵ֣י הָאָדָ֔ם אֲשֶׁר־הִכֵּ֥יתִי בְאַפִּ֖י וּבַחֲמָתִ֑י וַאֲשֶׁ֨ר הִסְתַּ֤רְתִּי פָנַי֙ מֵהָעִ֣יר הַזֹּ֔את עַ֖ל כָּל־רָעָתָֽם׃
6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
הִנְנִ֧י מַעֲלֶה־לָּ֛הּ אֲרֻכָ֥ה וּמַרְפֵּ֖א וּרְפָאתִ֑ים וְגִלֵּיתִ֣י לָהֶ֔ם עֲתֶ֥רֶת שָׁלֹ֖ום וֶאֱמֶֽת׃
7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.
וַהֲשִֽׁבֹתִי֙ אֶת־שְׁב֣וּת יְהוּדָ֔ה וְאֵ֖ת שְׁב֣וּת יִשְׂרָאֵ֑ל וּבְנִתִ֖ים כְּבָרִֽאשֹׁנָֽה׃
8 ಅವರು ನನ್ನ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡೆಸಿರುವ ಅಪರಾಧಗಳನ್ನೆಲ್ಲಾ ಕ್ಷಮಿಸುವೆನು.
וְטִ֣הַרְתִּ֔ים מִכָּל־עֲוֹנָ֖ם אֲשֶׁ֣ר חָֽטְאוּ־לִ֑י וְסָלַחְתִּ֗י לְכֹול־ (לְכָל)־עֲוֹנֹֽותֵיהֶם֙ אֲשֶׁ֣ר חָֽטְאוּ־לִ֔י וַאֲשֶׁ֖ר פָּ֥שְׁעוּ בִֽי׃
9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”
וְהָ֣יְתָה לִּ֗י לְשֵׁ֤ם שָׂשֹׂון֙ לִתְהִלָּ֣ה וּלְתִפְאֶ֔רֶת לְכֹ֖ל גֹּויֵ֣י הָאָ֑רֶץ אֲשֶׁ֨ר יִשְׁמְע֜וּ אֶת־כָּל־הַטֹּובָ֗ה אֲשֶׁ֤ר אָֽנֹכִי֙ עֹשֶׂ֣ה אֹתָ֔ם וּפָחֲד֣וּ וְרָֽגְז֗וּ עַ֤ל כָּל־הַטֹּובָה֙ וְעַ֣ל כָּל־הַשָּׁלֹ֔ום אֲשֶׁ֥ר אָֽנֹכִ֖י עֹ֥שֶׂה לָּֽהּ׃ ס
10 ೧೦ ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
כֹּ֣ה ׀ אָמַ֣ר יְהוָ֗ה עֹוד֮ יִשָּׁמַ֣ע בַּמָּקֹום־הַזֶּה֒ אֲשֶׁר֙ אַתֶּ֣ם אֹֽמְרִ֔ים חָרֵ֣ב ה֔וּא מֵאֵ֥ין אָדָ֖ם וּמֵאֵ֣ין בְּהֵמָ֑ה בְּעָרֵ֤י יְהוּדָה֙ וּבְחֻצֹ֣ות יְרוּשָׁלַ֔͏ִם הַֽנְשַׁמֹּ֗ות מֵאֵ֥ין אָדָ֛ם וּמֵאֵ֥ין יֹושֵׁ֖ב וּמֵאֵ֥ין בְּהֵמָֽה׃
11 ೧೧ ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”
קֹ֣ול שָׂשֹׂ֞ון וְקֹ֣ול שִׂמְחָ֗ה קֹ֣ול חָתָן֮ וְקֹ֣ול כַּלָּה֒ קֹ֣ול אֹמְרִ֡ים הֹודוּ֩ אֶת־יְהוָ֨ה צְבָאֹ֜ות כִּֽי־טֹ֤וב יְהוָה֙ כִּֽי־לְעֹולָ֣ם חַסְדֹּ֔ו מְבִאִ֥ים תֹּודָ֖ה בֵּ֣ית יְהוָ֑ה כִּֽי־אָשִׁ֧יב אֶת־שְׁבוּת־הָאָ֛רֶץ כְּבָרִאשֹׁנָ֖ה אָמַ֥ר יְהוָֽה׃ ס
12 ೧೨ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಜನ, ಪಶುಗಳಿಲ್ಲದೆ ಹಾಳಾಗಿರುವ ಈ ಪ್ರಾಂತ್ಯವೂ, ಇಲ್ಲಿನ ಎಲ್ಲಾ ಊರುಗಳೂ ಕುರುಬರು ತಮ್ಮ ಹಿಂಡುಗಳನ್ನು ತಂಗಿಸುವುದಕ್ಕೆ ಪುನಃ ಆಸರೆಯಾಗುವವು.
כֹּֽה־אָמַר֮ יְהוָ֣ה צְבָאֹות֒ עֹ֞וד יִֽהְיֶ֣ה ׀ בַּמָּקֹ֣ום הַזֶּ֗ה הֶחָרֵ֛ב מֵֽאֵין־אָדָ֥ם וְעַד־בְּהֵמָ֖ה וּבְכָל־עָרָ֑יו נְוֵ֣ה רֹעִ֔ים מַרְבִּצִ֖ים צֹֽאן׃
13 ೧೩ ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.
בְּעָרֵ֨י הָהָ֜ר בְּעָרֵ֤י הַשְּׁפֵלָה֙ וּבְעָרֵ֣י הַנֶּ֔גֶב וּבְאֶ֧רֶץ בִּנְיָמִ֛ן וּבִסְבִיבֵ֥י יְרוּשָׁלַ֖͏ִם וּבְעָרֵ֣י יְהוּדָ֑ה עֹ֣ד תַּעֲבֹ֧רְנָה הַצֹּ֛אן עַל־יְדֵ֥י מֹונֶ֖ה אָמַ֥ר יְהוָֽה׃ ס
14 ೧೪ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ಇಸ್ರಾಯೇಲ್ ಮತ್ತು ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.
הִנֵּ֛ה יָמִ֥ים בָּאִ֖ים נְאֻם־יְהוָ֑ה וַהֲקֽ͏ִמֹתִי֙ אֶת־הַדָּבָ֣ר הַטֹּ֔וב אֲשֶׁ֥ר דִּבַּ֛רְתִּי אֶל־בֵּ֥ית יִשְׂרָאֵ֖ל וְעַל־בֵּ֥ית יְהוּדָֽה׃
15 ೧೫ ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.
בַּיָּמִ֤ים הָהֵם֙ וּבָעֵ֣ת הַהִ֔יא אַצְמִ֥יחַ לְדָוִ֖ד צֶ֣מַח צְדָקָ֑ה וְעָשָׂ֛ה מִשְׁפָּ֥ט וּצְדָקָ֖ה בָּאָֽרֶץ׃
16 ೧೬ ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”
בַּיָּמִ֤ים הָהֵם֙ תִּוָּשַׁ֣ע יְהוּדָ֔ה וִירוּשָׁלַ֖͏ִם תִּשְׁכֹּ֣ון לָבֶ֑טַח וְזֶ֥ה אֲשֶׁר־יִקְרָא־לָ֖הּ יְהוָ֥ה ׀ צִדְקֵֽנוּ׃ ס
17 ೧೭ ಯೆಹೋವನು ಇಂತೆನ್ನುತ್ತಾನೆ, “ದಾವೀದನ ವಂಶವು ನಿಂತು ಹೋಗದೆ ಆ ಸಂತಾನದವರು ಇಸ್ರಾಯೇಲರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು.
כִּי־כֹ֖ה אָמַ֣ר יְהוָ֑ה לֹֽא־יִכָּרֵ֣ת לְדָוִ֔ד אִ֕ישׁ יֹשֵׁ֖ב עַל־כִּסֵּ֥א בֵֽית־יִשְׂרָאֵֽל׃
18 ೧೮ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”
וְלַכֹּהֲנִים֙ הַלְוִיִּ֔ם לֹֽא־יִכָּרֵ֥ת אִ֖ישׁ מִלְּפָנָ֑י מַעֲלֶ֨ה עֹולָ֜ה וּמַקְטִ֥יר מִנְחָ֛ה וְעֹֽשֶׂה־זֶּ֖בַח כָּל־הַיָּמִֽים׃ ס
19 ೧೯ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
וַֽיְהִי֙ דְּבַר־יְהוָ֔ה אֶֽל־יִרְמְיָ֖הוּ לֵאמֹֽור׃
20 ೨೦ “ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
כֹּ֚ה אָמַ֣ר יְהוָ֔ה אִם־תָּפֵ֙רוּ֙ אֶת־בְּרִיתִ֣י הַיֹּ֔ום וְאֶת־בְּרִיתִ֖י הַלָּ֑יְלָה וּלְבִלְתִּ֛י הֱיֹ֥ות יֹֽומָם־וָלַ֖יְלָה בְּעִתָּֽם׃
21 ೨೧ ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.
גַּם־בְּרִיתִ֤י תֻפַר֙ אֶת־דָּוִ֣ד עַבְדִּ֔י מִהְיֹֽות־לֹ֥ו בֵ֖ן מֹלֵ֣ךְ עַל־כִּסְאֹ֑ו וְאֶת־הַלְוִיִּ֥ם הַכֹּהֲנִ֖ים מְשָׁרְתָֽי׃
22 ೨೨ ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”
אֲשֶׁ֤ר לֹֽא־יִסָּפֵר֙ צְבָ֣א הַשָּׁמַ֔יִם וְלֹ֥א יִמַּ֖ד חֹ֣ול הַיָּ֑ם כֵּ֣ן אַרְבֶּ֗ה אֶת־זֶ֙רַע֙ דָּוִ֣ד עַבְדִּ֔י וְאֶת־הַלְוִיִּ֖ם מְשָׁרְתֵ֥י אֹתִֽי׃ ס
23 ೨೩ ಇದಲ್ಲದೆ ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
וַֽיְהִי֙ דְּבַר־יְהוָ֔ה אֶֽל־יִרְמְיָ֖הוּ לֵאמֹֽר׃
24 ೨೪ “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
הֲלֹ֣וא רָאִ֗יתָ מָֽה־הָעָ֤ם הַזֶּה֙ דִּבְּר֣וּ לֵאמֹ֔ר שְׁתֵּ֣י הַמִּשְׁפָּחֹ֗ות אֲשֶׁ֨ר בָּחַ֧ר יְהוָ֛ה בָּהֶ֖ם וַיִּמְאָסֵ֑ם וְאֶת־עַמִּי֙ יִנְאָצ֔וּן מִֽהְיֹ֥ות עֹ֖וד גֹּ֥וי לִפְנֵיהֶֽם׃ ס
25 ೨೫ ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,
כֹּ֚ה אָמַ֣ר יְהוָ֔ה אִם־לֹ֥א בְרִיתִ֖י יֹומָ֣ם וָלָ֑יְלָה חֻקֹּ֛ות שָׁמַ֥יִם וָאָ֖רֶץ לֹא־שָֽׂמְתִּי׃
26 ೨೬ ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”
גַּם־זֶ֣רַע יַעֲקֹוב֩ וְדָוִ֨ד עַבְדִּ֜י אֶמְאַ֗ס מִקַּ֤חַת מִזַּרְעֹו֙ מֹֽשְׁלִ֔ים אֶל־זֶ֥רַע אַבְרָהָ֖ם יִשְׂחָ֣ק וְיַעֲקֹ֑ב כִּֽי־אָשׁוּב (אָשִׁ֥יב) אֶת־שְׁבוּתָ֖ם וְרִחַמְתִּֽים׃ ס

< ಯೆರೆಮೀಯನು 33 >