< ಯೆರೆಮೀಯನು 34 >
1 ೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
比倫王拿步高與自己的軍隊,及他手下統治的天下各國和一切民族,前來進攻耶路撒冷和她所有的城鎮時,有上主的話傳給耶肋米亞說:
2 ೨ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
「上主以色列的天主這樣說:你對猶大王漆德克雅說,告訴他上主這樣說:看,我必將這城交在巴比倫王手中,他將放火燒城,
3 ೩ ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
你必逃不出他的手,終必被擒,交在他手中;你必要與巴比倫王目對目相視,面對面相談;你必要到巴比倫去;
4 ೪ ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
但是,猶大王漆德克雅! 請聽上主的話,上主論你這樣說:你決不會死在刀下,
5 ೫ ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’” ಎಂದನು.
必要和平死去;正如有人給在你以前的上代祖先君王焚香,同樣也有人給你焚香,向你致哀;『嘻嘻,我主! 』的確,是我說了這話──上主的斷語」。
6 ೬ ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
耶肋米亞就在耶路撒冷,對猶大君王漆德克雅說了這一切話,
7 ೭ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
那時巴比倫不的軍隊正在攻打耶路撒冷和猶大其餘的城市,攻打拉基士和阿則卡,因為在猶大城市中,只剩下了這兩座設防的城市。
8 ೮ ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
漆德克雅王與當時在耶路撒冷的全體人民訂約,要對奴婢宣佈自由以後,有上主的話傳給耶肋米亞:
9 ೯ “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
每人應釋放自己的希伯來奴婢,使他們獲享自由;誰也不該再以自己的弟兄猶大人作奴婢。
10 ೧೦ ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
所有入盟的首長和全體人民都同意,每人要釋放自己的奴婢,使他們獲享自由,不再以他們為奴婢:他們同意了,也釋放了。
11 ೧೧ ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
但是,以後他們改變主意,把他們釋放恢復自由的奴婢,再叫回來,強迫他們再作奴婢。
12 ೧೨ ಹೀಗಿರಲು ಯೆಹೋವನು ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು,
於是有上主的話傳給耶肋米亞說:
13 ೧೩ “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
「上主以色列的天主這樣說:在我領你們的祖先,先由埃及地,奴隸之所,出來的那一天,與他們訂了盟約說:
14 ೧೪ ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
每七年初,你們應各自釋放賣給你們的希伯來弟兄:他服事了你六年,你應該讓他自由離去。你們的祖先卻不聽,也不向我側耳。
15 ೧೫ ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
今年你們自己反悔,作了我認為正直的事,各向自己的近人宣布自由,在歸我名下的殿裏,當著我面訂了盟約。
16 ೧೬ ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
但事後卻變了主意,褻瀆我名,竟再召回自己已經釋放,身獲自由的奴婢,迫使他們再做你們的奴婢。
17 ೧೭ ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
為此上主這樣說:你們既不聽從我,各自向自己的弟兄,各向自己的近人宣布自由,看,我來對你們宣佈釋放刀劍和瘟疫及飢荒的自由──上主的斷語──使你們成為地上一切王國驚慌恐怖的對象。
18 ೧೮ ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
凡違背我盟約,即不履行剖開牛犢,由兩半中間走過,在我面前所立的盟約誓詞人,我必將他們交出:
19 ೧೯ ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇಮಿನ ಪ್ರಧಾನರು, ಕಂಚುಕಿಗಳು, ಯಾಜಕರು,
凡剖開牛犢,由兩半中走過的猶大和耶路撒冷的首長、官員、司祭,以及當地的全體人民,
20 ೨೦ ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
我必將他們悉數交在他們的敵人,和圖謀他們性命者的手中,使他們的屍首成為天上飛鳥和地上走獸的食物。
21 ೨೧ ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
至於猶大王漆德克雅和他的臣相,我也將他們交在他們敵人手中,交在圖謀他們性命者的手中,交在由你們面前撤退的巴比倫王軍隊的手中。
22 ೨೨ ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
我必下令──上主的斷語──叫他們再回來,進攻,佔領,火燒這城市;至於猶大的其他城市,我必使它們化為無人居住木荒野」。