< ಯೆರೆಮೀಯನು 35 >

1 ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಕಾಲದಲ್ಲಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,
Eyi ne asɛm a efi Awurade nkyɛn baa Yeremia hɔ wɔ bere a na Yudahene Yosia babarima Yehoiakim di ade no:
2 “ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.
“Kɔ Rekabfo abusua no nkyɛn, na to nsa frɛ wɔn na wɔmmra Awurade fi no pia baako mu, na ma wɔn nsa nnom.”
3 ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ
Enti mekɔpɛɛ Habasinia babarima Yeremia babarima Yaasania ne ne nuabarimanom ne ne mmabarima nyinaa, Rekabfo abusuadɔm no.
4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.
Mede wɔn baa Awurade fi, na mede wɔn kɔɔ Onyame nipa Yigdalia babarima Hanan mmabarima dan mu. Ɛno na edi adwumayɛfo dan a esi ɔpon ano hwɛfo Salum babarima Maaseia dan atifi no so.
5 ಆ ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ, ಪಂಚಪಾತ್ರೆಗಳನ್ನೂ ಇಟ್ಟು, “ದ್ರಾಕ್ಷಾರಸವನ್ನು ಕುಡಿಯಿರಿ” ಅಂದನು.
Afei mede nkuruwa ne nkora a nsa wɔ mu besisii Rekabfo abusuamma no anim na meka kyerɛɛ wɔn se, “Monnom nsa kakra.”
6 ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ, ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು,
Nanso wobuae se, “Yɛnnnom nsa, efisɛ yɛn nena Rekab babarima Yehonadab maa yɛn ɔhyɛ nsɛm yi se, ‘Ɛnsɛ sɛ mo anaa mo asefo nom nsa.
7 ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.
Na afei ɛnsɛ sɛ musisi afi, mudua anaa moyɛ bobe nturo, ɛnsɛ sɛ moyɛ eyinom mu biara, na mmom montena ntamadan mu bere biara. Ɛno na mo nkwanna bɛware, wɔ asase a moyɛ atutenafo wɔ so no so.’
8 ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Yɛatie biribiara a yɛn nena Rekab babarima Yonadad hyɛɛ yɛn no. Na yɛn, yɛn yerenom, mmabarima ne mmabea nnom nsa da
9 ನಮ್ಮ ವಾಸಕ್ಕೆ ಮನೆಯನ್ನು ಕಟ್ಟುವುದಿಲ್ಲ; ನಮಗೆ ದ್ರಾಕ್ಷಿತೋಟ, ಹೊಲ ಮತ್ತು ಬೀಜಗಳೂ ಇಲ್ಲ.
na yensisii afi ntenaa mu anaa yennyaa bobe nturo anaa mfuw anaa nnɔbae.
10 ೧೦ ನಾವು ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪಿತೃವಾದ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲಾ ಶಿರಸಾವಹಿಸಿ ನಡೆಸುತ್ತಿದ್ದೇವೆ.
Yɛatenatena ntamadan mu, na yɛadi biribiara a yɛn nena Yehonadab hyɛɛ yɛn no so pɛpɛɛpɛ.
11 ೧೧ ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.
Nanso bere a Babiloniahene Nebukadnessar tuu asase yi so sa no, yɛkae se, ‘Mommra, ɛsɛ sɛ yɛkɔ Yerusalem na yeguan fi Babiloniafo ne Aramfo asraafo anim.’ Ɛno nti yɛaka Yerusalem.”
12 ೧೨ ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
Afei Awurade asɛm baa Yeremia nkyɛn se,
13 ೧೩ “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆ ಹೇಳು, ‘ಇದರಿಂದ ನೀವು ಬುದ್ಧಿತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೋ?’ ಎಂದು ಯೆಹೋವನು ಅನ್ನುತ್ತಾನೆ.
“Sɛɛ na Asafo Awurade, Israel Nyankopɔn, se: Kɔ na kɔka kyerɛ mmarima a wɔwɔ Yuda ne Yerusalem se, ‘Morensua biribi na morentie mʼasɛm ana?’ Awurade na ose.
14 ೧೪ ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
‘Rekab ba Yehonadab hyɛɛ ne mmabarima sɛ wɔnnom nsa, na wɔadi saa ɔhyɛ yi so. De besi nnɛ wɔnnom nsa, efisɛ wodi wɔn agyanom ahyɛde so. Na makasa akyerɛ mo mpɛn bebree, nanso muntiee me.
15 ೧೫ ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Mesomaa mʼasomfo adiyifo nyinaa baa mo nkyɛn mpɛn bebree. Wɔkae se, “Ɛsɛ sɛ mo mu biara sakra fi nʼamumɔyɛ akwan so, na moma mo akwan teɛ; munnni anyame foforo akyi na monnsom wɔn. Ɛno na mobɛtena asase a mede ama mo ne mo agyanom yi so.” Nanso mummmuaa me na munntiee me ɛ.
16 ೧೬ ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,
Rekab babarima Yehonadab asefo adi ahyɛde a wɔn agyanom de maa wɔn no so, nanso saa nnipa yi ntie mʼasɛm.’
17 ೧೭ ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
“Ɛno nti, sɛɛ na Asafo Awurade Nyankopɔn, Israel Nyankopɔn no se: ‘Muntie! Mede amanehunu biara a mahyɛ ama Yuda ne obiara a ɔte Yerusalem no bɛba wɔn so. Mekasa kyerɛɛ wɔn, nanso wɔantie, mefrɛɛ wɔn nanso wɔannye so.’”
18 ೧೮ ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,
Afei Yeremia ka kyerɛɛ Rekab abusua no se, “Sɛɛ na Asafo Awurade, Israel Nyankopɔn no se: ‘Moayɛ osetie ama mo nena Yehonadab ahyɛde no, na moadi ne nkyerɛkyerɛ so, na moayɛ biribiara a ɔhyɛɛ mo no.’
19 ೧೯ ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.
Ɛno nti, nea Asafo Awurade, Israel Nyankopɔn no se ni: ‘Rekab babarima Yehonadab benya ɔbarima a ɔbɛsom me bere biara.’”

< ಯೆರೆಮೀಯನು 35 >