< ಯೆರೆಮೀಯನು 37 >

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
І зацарював цар Седекія, син Йосійїн, замість Конії, сина Єгоякимового, якого зробив царем Навуходоно́сор, цар вавилонський, в Юдиному кра́ї.
2 ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
Та не послухався ані він, ані його раби, ані наро́д кра́ю слів Господа, які Він говорив через пророка Єремію.
3 ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
І послав цар Седекія Єгухала, сина Шелеміїного, і священика Цефанію, сина Маасеїного, до пророка Єремії, говорячи: „Помолися за нас до Господа, Бога нашого!“
4 ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.
А Єремія тоді ще вільно ходив серед наро́ду, бо не дали́ його ще до в'язни́ці.
5 ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
А фараонове ві́йсько вийшло з Єгипту. І почули вістку про них халдеї, що облягали Єрусалим, і відійшли від Єрусалиму.
6 ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.
І було слово Господнє до пророка Єремії, говорячи:
7 “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
„Так промовив Господь, Бог Ізраїлів: Так скажете до Юдиного царя, що послав вас до мене поспитати мене: Ось фараонове ві́йсько, що вийшло вам на поміч, ве́рнеться до свого кра́ю, до Єгипту.
8 ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
А халдеї зно́ву ве́рнуться, і будуть воювати з цим містом, і здобу́дуть його, та й спалять його огнем.
9 ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
Так говорить Господь: Не обманюйте своїх душ, говорячи: „Халдеї конче пі́дуть від нас“, бо не пі́дуть вони.
10 ೧೦ ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
Бо якщо б ви побили все халдейське ві́йсько, що з вами воює, а з них залиши́лися б тільки ра́нені, то встане кожен із намету свого, і спалять це місто огнем“...
11 ೧೧ ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
І сталося, коли халдейське ві́йсько відступи́ло від Єрусалиму перед фараоновим ві́йськом,
12 ೧೨ ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
то вийшов Єремія з Єрусалиму, щоб піти до Веніяминового кра́ю, і щоб сховатися там серед наро́ду.
13 ೧೩ ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
Та коли він був біля Веніяминової брами, то був там начальник сторо́жі, а ім'я́ йому́ Їрійя, син Шелемеї, сина Хананіїного. І схопи́в він пророка Єремію, говорячи: „Ти перехо́диш до халлеїв!“
14 ೧೪ ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
А Єремія відказав: „Неправда, — я не перехо́джу до халдеїв!“Та не послухав той його; і схопи́в Їрійя Єремію, і попрова́див його до зверхників.
15 ೧೫ ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
I розгнівалися зверхники на Єремію, і побили його, та й віддали́ його до в'язниці в домі писаря Єгонатана, бо його зробили за в'язни́чний дім.
16 ೧೬ ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
I зійшов Єремія до темни́чної ями та до підва́лу, і сидів там Єремія багато днів.
17 ೧೭ ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
І послав цар Седекія, і взяв його. І спитав його цар у своїм домі таємно й сказав: „Чи є слово від Господа?“І Єремія відказав: „Є“. І далі сказав: „Ти будеш ві́дданий в руку вавилонського царя́“.
18 ೧೮ ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
І сказав Єремія до царя Седекії: „Що́ я згрішив тобі й рабам твоїм та цьому наро́дові, що ви віддали мене до в'язни́ці?
19 ೧೯ ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
І де́ ваші пророки, що вам пророкували, говорячи: „Цар вавилонський не при́йде на вас та на Край цей?“
20 ೨೦ ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
А тепер послухай, пане мій ца́рю: хай упаде́ моє блага́ння перед обличчя твоє, і не вертай мене до дому писаря Єгонатана, щоб не помер я там!“
21 ೨೧ ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
І наказав цар Седекія, й Єремію вмістили в подві́р'ї в'язни́ці, і давали йому бухане́ць хліба на день з вулиці пе́карів, аж поки не скінчи́вся ввесь хліб у місті. І сидів Єремія в подвір'ї в'язни́ці.

< ಯೆರೆಮೀಯನು 37 >