< ಯೆರೆಮೀಯನು 38 >
1 ೧ ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
१फिर जो वचन यिर्मयाह सब लोगों से कहता था, उनको मत्तान के पुत्र शपत्याह, पशहूर के पुत्र गदल्याह, शेलेम्याह के पुत्र यूकल और मल्किय्याह के पुत्र पशहूर ने सुना,
2 ೨ ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
२“यहोवा यह कहता है कि जो कोई इस नगर में रहेगा वह तलवार, अकाल और मरी से मरेगा; परन्तु जो कोई कसदियों के पास निकल भागे वह अपना प्राण बचाकर जीवित रहेगा।
3 ೩ ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
३यहोवा यह कहता है, यह नगर बाबेल के राजा की सेना के वश में कर दिया जाएगा और वह इसको ले लेगा।”
4 ೪ ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
४इसलिए उन हाकिमों ने राजा से कहा, “उस पुरुष को मरवा डाल, क्योंकि वह जो इस नगर में बचे हुए योद्धाओं और अन्य सब लोगों से ऐसे-ऐसे वचन कहता है जिससे उनके हाथ पाँव ढीले हो जाते हैं। क्योंकि वह पुरुष इस प्रजा के लोगों की भलाई नहीं वरन् बुराई ही चाहता है।”
5 ೫ ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.
५सिदकिय्याह राजा ने कहा, “सुनो, वह तो तुम्हारे वश में है; क्योंकि ऐसा नहीं हो सकता कि राजा तुम्हारे विरुद्ध कुछ कर सके।”
6 ೬ ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
६तब उन्होंने यिर्मयाह को लेकर राजपुत्र मल्किय्याह के उस गड्ढे में जो पहरे के आँगन में था, रस्सियों से उतारकर डाल दिया। और उस गड्ढे में पानी नहीं केवल दलदल था, और यिर्मयाह कीचड़ में धँस गया।
7 ೭ ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.
७उस समय राजा बिन्यामीन के फाटक के पास बैठा था सो जब एबेदमेलेक कूशी ने जो राजभवन में एक खोजा था, सुना, कि उन्होंने यिर्मयाह को गड्ढे में डाल दिया है।
8 ೮ ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,
८तब एबेदमेलेक राजभवन से निकलकर राजा से कहने लगा,
9 ೯ “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
९“हे मेरे स्वामी, हे राजा, उन लोगों ने यिर्मयाह भविष्यद्वक्ता से जो कुछ किया है वह बुरा किया है, क्योंकि उन्होंने उसको गड्ढे में डाल दिया है; वहाँ वह भूख से मर जाएगा क्योंकि नगर में कुछ रोटी नहीं रही है।”
10 ೧೦ ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
१०तब राजा ने एबेदमेलेक कूशी को यह आज्ञा दी, “यहाँ से तीस पुरुष साथ लेकर यिर्मयाह भविष्यद्वक्ता को मरने से पहले गड्ढे में से निकाल।”
11 ೧೧ ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
११अतः एबेदमेलेक उतने पुरुषों को साथ लेकर राजभवन के भण्डार के तलघर में गया; और वहाँ से फटे-पुराने कपड़े और चिथड़े लेकर यिर्मयाह के पास उस गड्ढे में रस्सियों से उतार दिए।
12 ೧೨ “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
१२तब एबेदमेलेक कूशी ने यिर्मयाह से कहा, “ये पुराने कपड़े और चिथड़े अपनी कांखों में रस्सियों के नीचे रख ले।” यिर्मयाह ने वैसा ही किया।
13 ೧೩ ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.
१३तब उन्होंने यिर्मयाह को रस्सियों से खींचकर, गड्ढे में से निकाला। और यिर्मयाह पहरे के आँगन में रहने लगा।
14 ೧೪ ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”
१४सिदकिय्याह राजा ने यिर्मयाह भविष्यद्वक्ता को यहोवा के भवन के तीसरे द्वार में अपने पास बुलवा भेजा। और राजा ने यिर्मयाह से कहा, “मैं तुझ से एक बात पूछता हूँ; मुझसे कुछ न छिपा।”
15 ೧೫ ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
१५यिर्मयाह ने सिदकिय्याह से कहा, “यदि मैं तुझे बताऊँ, तो क्या तू मुझे मरवा न डालेगा? और चाहे मैं तुझे सम्मति भी दूँ, तो भी तू मेरी न मानेगा।”
16 ೧೬ ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
१६तब सिदकिय्याह राजा ने अकेले में यिर्मयाह से शपथ खाई, “यहोवा जिसने हमारा यह जीव रचा है, उसके जीवन की सौगन्ध न मैं तो तुझे मरवा डालूँगा, और न उन मनुष्यों के वश में कर दूँगा जो तेरे प्राण के खोजी हैं।”
17 ೧೭ ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
१७यिर्मयाह ने सिदकिय्याह से कहा, “सेनाओं का परमेश्वर यहोवा जो इस्राएल का परमेश्वर है, वह यह कहता है, यदि तू बाबेल के राजा के हाकिमों के पास सचमुच निकल जाए, तब तो तेरा प्राण बचेगा, और यह नगर फूँका न जाएगा, और तू अपने घराने समेत जीवित रहेगा।
18 ೧೮ ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
१८परन्तु, यदि तू बाबेल के राजा के हाकिमों के पास न निकल जाए, तो यह नगर कसदियों के वश में कर दिया जाएगा, ओर वे इसे फूँक देंगे, और तू उनके हाथ से बच न सकेगा।”
19 ೧೯ ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
१९सिदकिय्याह ने यिर्मयाह से कहा, “जो यहूदी लोग कसदियों के पास भाग गए हैं, मैं उनसे डरता हूँ, ऐसा न हो कि मैं उनके वश में कर दिया जाऊँ और वे मुझसे ठट्ठा करें।”
20 ೨೦ ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
२०यिर्मयाह ने कहा, “तू उनके वश में न कर दिया जाएगा; जो कुछ मैं तुझ से कहता हूँ उसे यहोवा की बात समझकर मान ले तब तेरा भला होगा, और तेरा प्राण बचेगा।
21 ೨೧ ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
२१पर यदि तू निकल जाना स्वीकार न करे तो जो बात यहोवा ने मुझे दर्शन के द्वारा बताई है, वह यह है:
22 ೨೨ ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
२२देख, यहूदा के राजा के रनवास में जितनी स्त्रियाँ रह गई हैं, वे बाबेल के राजा के हाकिमों के पास निकालकर पहुँचाई जाएँगी, और वे तुझ से कहेंगी, ‘तेरे मित्रों ने तुझे बहकाया, और उनकी इच्छा पूरी हो गई; और जब तेरे पाँव कीच में धँस गए तो वे पीछे फिर गए हैं।’
23 ೨೩ ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
२३तेरी सब स्त्रियाँ और बाल-बच्चे कसदियों के पास निकालकर पहुँचाए जाएँगे; और तू भी कसदियों के हाथ से न बचेगा, वरन् तुझे पकड़कर बाबेल के राजा के वश में कर दिया जाएगा और इस नगर के फूँके जाने का कारण तू ही होगा।”
24 ೨೪ ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ; ತಿಳಿಯದಿದ್ದರೆ ನೀನು ಸಾಯುವುದಿಲ್ಲ.
२४तब सिदकिय्याह ने यिर्मयाह से कहा, “इन बातों को कोई न जानने पाए, तो तू मारा न जाएगा।
25 ೨೫ ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
२५यदि हाकिम लोग यह सुनकर कि मैंने तुझ से बातचीत की है तेरे पास आकर कहने लगें, ‘हमें बता कि तूने राजा से क्या कहा, हम से कोई बात न छिपा, और हम तुझे न मरवा डालेंगे; और यह भी बता, कि राजा ने तुझ से क्या कहा,’
26 ೨೬ ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
२६तो तू उनसे कहना, ‘मैंने राजा से गिड़गिड़ाकर विनती की थी कि मुझे योनातान के घर में फिर वापिस न भेज नहीं तो वहाँ मर जाऊँगा।’”
27 ೨೭ ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
२७फिर सब हाकिमों ने यिर्मयाह के पास आकर पूछा, और जैसा राजा ने उसको आज्ञा दी थी, ठीक वैसा ही उसने उनको उत्तर दिया। इसलिए वे उससे और कुछ न बोले और न वह भेद खुला।
28 ೨೮ ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
२८इस प्रकार जिस दिन यरूशलेम ले लिया गया उस दिन तक वह पहरे के आँगन ही में रहा।