< ಯೆರೆಮೀಯನು 39 >
1 ೧ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
유다 왕 시드기야의 구년 시월에 바벨론 왕 느부갓네살과 그 모든 군대가 와서 예루살렘을 에워싸고 치더니
2 ೨ ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
시드기야의 제 십 일년 사월 구일에 성이 함락되니라 예루살렘이 함락되매
3 ೩ ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
바벨론 왕의 모든 방백이 이르러 중문에 앉으니 곧 네르갈사레셀과 삼갈르보와 환관장 살스김과 박사장 네르갈사레셀과 바벨론 왕의 기타 모든 방백들이었더라
4 ೪ ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
유다 왕 시드기야와 모든 군사가 그들을 보고 도망하되 밤에 왕의 동산길로 좇아 두 담 샛문을 통하여 성읍을 벗어나서 아라바로 갔더니
5 ೫ ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
갈대아인의 군대가 그들을 따라 여리고 평원에서 시드기야에게 미쳐 그를 잡아서 데리고 하맛 땅 립나에 있는 바벨론 왕 느부갓네살에게로 올라가매 왕이 그를 심문하였더라
6 ೬ ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
바벨론 왕이 립나에서 시드기야의 목전에서 그 아들들을 죽였고 왕이 또 유다의 모든 귀인을 죽였으며
7 ೭ ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
왕이 또 시드기야의 눈을 빼게하고 바벨론으로 옮기려 하여 사슬로 결박하였더라
8 ೮ ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
갈대아인들이 왕궁과 백성의 집을 불사르며 예루살렘 성벽을 헐었고
9 ೯ ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
시위대장 느부사라단이 성 중에 남아 있는 백성과 자기에게 항복한 자와 그 외의 남은 백성을 바벨론으로 잡아 옮겼으며
10 ೧೦ ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
시위대장 느부사라단이 아무 소유가 없는 빈민을 유다 땅에 남겨두고 그 날에 포도원과 밭을 그들에게 주었더라
11 ೧೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
바벨론 왕 느부갓네살이 예레미야에 대하여 시위대장 느부사라단에게 명하여 가로되
12 ೧೨ “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
그를 데려다가 선대하고 해하지 말며 그가 네게 말하는 대로 행하라
13 ೧೩ ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
이에 시위대장 느부사라단과 환관장 느부사스반과 박사장 네르갈사레셀과 바벨론 왕의 모든 장관이
14 ೧೪ ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
보내어 예레미야를 시위대 뜰에서 취하여 내어 사반의 손자 아히감의 아들 그다랴에게 붙여서 그를 집으로 데려가게 하매 그가 백성 중에 거하니라
15 ೧೫ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
예레미야가 시위대 뜰에 갇혔을 때에 여호와의 말씀이 그에게 임하니라 가라사대
16 ೧೬ “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
너는 가서 구스인 에벳멜렉에게 말하기를 만군의 여호와 이스라엘의 하나님의 말씀에 내가 이 성에 재앙을 내리고 복을 내리지 아니하리라 한 나의 말이 그 날에 네 목전에 이루리라
17 ೧೭ ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
나 여호와가 말하노라 내가 그 날에 너를 구원하리니 네가 그 두려워하는 사람들의 손에 붙이우지 아니하리라
18 ೧೮ ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.
내가 단정코 너를 구원할 것인즉 네가 칼에 죽지 아니하고 네 생명이 노략물을 얻음같이 되리니 이는 네가 나를 신뢰함이니라 여호와의 말이니라