< ಯೆರೆಮೀಯನು 4 >

1 ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.
אִם־תָּשׁ֨וּב יִשְׂרָאֵ֧ל ׀ נְאֻם־יְהוָ֛ה אֵלַ֖י תָּשׁ֑וּב וְאִם־תָּסִ֧יר שִׁקּוּצֶ֛יךָ מִפָּנַ֖י וְלֹ֥א תָנֽוּד׃
2 ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.
וְנִשְׁבַּ֙עְתָּ֙ חַי־יְהוָ֔ה בֶּאֱמֶ֖ת בְּמִשְׁפָּ֣ט וּבִצְדָקָ֑ה וְהִתְבָּ֥רְכוּ ב֛וֹ גּוֹיִ֖ם וּב֥וֹ יִתְהַלָּֽלוּ׃ ס
3 ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
כִּי־כֹ֣ה ׀ אָמַ֣ר יְהֹוָ֗ה לְאִ֤ישׁ יְהוּדָה֙ וְלִיר֣וּשָׁלִַ֔ם נִ֥ירוּ לָכֶ֖ם נִ֑יר וְאַֽל־תִּזְרְע֖וּ אֶל־קוֹצִֽים׃
4 ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.
הִמֹּ֣לוּ לַיהֹוָ֗ה וְהָסִ֙רוּ֙ עָרְל֣וֹת לְבַבְכֶ֔ם אִ֥ישׁ יְהוּדָ֖ה וְיֹשְׁבֵ֣י יְרוּשָׁלִָ֑ם פֶּן־תֵּצֵ֨א כָאֵ֜שׁ חֲמָתִ֗י וּבָעֲרָה֙ וְאֵ֣ין מְכַבֶּ֔ה מִפְּנֵ֖י רֹ֥עַ מַעַלְלֵיכֶֽם׃
5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
הַגִּ֣ידוּ בִֽיהוּדָ֗ה וּבִירוּשָׁלִַ֙ם֙ הַשְׁמִ֔יעוּ וְאִמְר֕וּ ותקעו שׁוֹפָ֖ר בָּאָ֑רֶץ קִרְא֤וּ מַלְאוּ֙ וְאִמְר֔וּ הֵאָסְפ֥וּ וְנָב֖וֹאָה אֶל־עָרֵ֥י הַמִּבְצָֽר׃
6 ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.
שְׂאוּ־נֵ֣ס צִיּ֔וֹנָה הָעִ֖יזוּ אַֽל־תַּעֲמֹ֑דוּ כִּ֣י רָעָ֗ה אָנֹכִ֛י מֵבִ֥יא מִצָּפ֖וֹן וְשֶׁ֥בֶר גָּדֽוֹל׃
7 ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
עָלָ֤ה אַרְיֵה֙ מִֽסֻּבְּכ֔וֹ וּמַשְׁחִ֣ית גּוֹיִ֔ם נָסַ֖ע יָצָ֣א מִמְּקֹמ֑וֹ לָשׂ֤וּם אַרְצֵךְ֙ לְשַׁמָּ֔ה עָרַ֥יִךְ תִּצֶּ֖ינָה מֵאֵ֥ין יוֹשֵֽׁב׃
8 ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
עַל־זֹ֛את חִגְר֥וּ שַׂקִּ֖ים סִפְד֣וּ וְהֵילִ֑ילוּ כִּ֥י לֹא־שָׁ֛ב חֲר֥וֹן אַף־יְהֹוָ֖ה מִמֶּֽנּוּ׃ פ
9 ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.
וְהָיָ֤ה בַיּוֹם־הַהוּא֙ נְאֻם־יְהוָ֔ה יֹאבַ֥ד לֵב־הַמֶּ֖לֶךְ וְלֵ֣ב הַשָּׂרִ֑ים וְנָשַׁ֙מּוּ֙ הַכֹּ֣הֲנִ֔ים וְהַנְּבִיאִ֖ים יִתְמָֽהוּ׃
10 ೧೦ ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
וָאֹמַ֞ר אֲהָ֣הּ ׀ אֲדֹנָ֣י יְהוִ֗ה אָכֵן֩ הַשֵּׁ֨א הִשֵּׁ֜אתָ לָעָ֤ם הַזֶּה֙ וְלִירוּשָׁלִַ֣ם לֵאמֹ֔ר שָׁל֖וֹם יִהְיֶ֣ה לָכֶ֑ם וְנָגְעָ֥ה חֶ֖רֶב עַד־הַנָּֽפֶשׁ׃
11 ೧೧ ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
בָּעֵ֣ת הַהִ֗יא יֵאָמֵ֤ר לָֽעָם־הַזֶּה֙ וְלִיר֣וּשָׁלִַ֔ם ר֣וּחַ צַ֤ח שְׁפָיִים֙ בַּמִּדְבָּ֔ר דֶּ֖רֶךְ בַּת־עַמִּ֑י ל֥וֹא לִזְר֖וֹת וְל֥וֹא לְהָבַֽר׃
12 ೧೨ ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.
ר֧וּחַ מָלֵ֛א מֵאֵ֖לֶּה יָ֣בוֹא לִ֑י עַתָּ֕ה גַּם־אֲנִ֛י אֲדַבֵּ֥ר מִשְׁפָּטִ֖ים אוֹתָֽם׃
13 ೧೩ ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
הִנֵּ֣ה ׀ כַּעֲנָנִ֣ים יַעֲלֶ֗ה וְכַסּוּפָה֙ מַרְכְּבוֹתָ֔יו קַלּ֥וּ מִנְּשָׁרִ֖ים סוּסָ֑יו א֥וֹי לָ֖נוּ כִּ֥י שֻׁדָּֽדְנוּ׃
14 ೧೪ ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
כַּבְּסִ֨י מֵרָעָ֤ה לִבֵּךְ֙ יְר֣וּשָׁלִַ֔ם לְמַ֖עַן תִּוָּשֵׁ֑עִי עַד־מָתַ֛י תָּלִ֥ין בְּקִרְבֵּ֖ךְ מַחְשְׁב֥וֹת אוֹנֵֽךְ׃
15 ೧೫ ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
כִּ֛י ק֥וֹל מַגִּ֖יד מִדָּ֑ן וּמַשְׁמִ֥יעַ אָ֖וֶן מֵהַ֥ר אֶפְרָֽיִם׃
16 ೧೬ ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.
הַזְכִּ֣ירוּ לַגּוֹיִ֗ם הִנֵּה֙ הַשְׁמִ֣יעוּ עַל־יְרוּשָׁלִַ֔ם נֹצְרִ֥ים בָּאִ֖ים מֵאֶ֣רֶץ הַמֶּרְחָ֑ק וַֽיִּתְּנ֛וּ עַל־עָרֵ֥י יְהוּדָ֖ה קוֹלָֽם׃
17 ೧೭ ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.
כְּשֹׁמְרֵ֣י שָׂדַ֔י הָי֥וּ עָלֶ֖יהָ מִסָּבִ֑יב כִּי־אֹתִ֥י מָרָ֖תָה נְאֻם־יְהוָֽה׃
18 ೧೮ ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
דַּרְכֵּךְ֙ וּמַ֣עֲלָלַ֔יִךְ עָשׂ֥וֹ אֵ֖לֶּה לָ֑ךְ זֹ֤את רָעָתֵךְ֙ כִּ֣י מָ֔ר כִּ֥י נָגַ֖ע עַד־לִבֵּֽךְ׃ ס
19 ೧೯ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
מֵעַ֣י ׀ מֵעַ֨י ׀ אחולה קִיר֥וֹת לִבִּ֛י הֹֽמֶה־לִּ֥י לִבִּ֖י לֹ֣א אַחֲרִ֑ישׁ כִּ֣י ק֤וֹל שׁוֹפָר֙ שמעתי נַפְשִׁ֔י תְּרוּעַ֖ת מִלְחָמָֽה׃
20 ೨೦ ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.
שֶׁ֤בֶר עַל־שֶׁ֙בֶר֙ נִקְרָ֔א כִּ֥י שֻׁדְּדָ֖ה כָּל־הָאָ֑רֶץ פִּתְאֹם֙ שֻׁדְּד֣וּ אֹהָלַ֔י רֶ֖גַע יְרִיעֹתָֽי׃
21 ೨೧ ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!
עַד־מָתַ֖י אֶרְאֶה־נֵּ֑ס אֶשְׁמְעָ֖ה ק֥וֹל שׁוֹפָֽר׃ ס
22 ೨೨ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
כִּ֣י ׀ אֱוִ֣יל עַמִּ֗י אוֹתִי֙ לֹ֣א יָדָ֔עוּ בָּנִ֤ים סְכָלִים֙ הֵ֔מָּה וְלֹ֥א נְבוֹנִ֖ים הֵ֑מָּה חֲכָמִ֥ים הֵ֙מָּה֙ לְהָרַ֔ע וּלְהֵיטִ֖יב לֹ֥א יָדָֽעוּ׃
23 ೨೩ ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
רָאִ֙יתִי֙ אֶת־הָאָ֔רֶץ וְהִנֵּה־תֹ֖הוּ וָבֹ֑הוּ וְאֶל־הַשָּׁמַ֖יִם וְאֵ֥ין אוֹרָֽם׃
24 ೨೪ ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.
רָאִ֙יתִי֙ הֶֽהָרִ֔ים וְהִנֵּ֖ה רֹעֲשִׁ֑ים וְכָל־הַגְּבָע֖וֹת הִתְקַלְקָֽלוּ׃
25 ೨೫ ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.
רָאִ֕יתִי וְהִנֵּ֖ה אֵ֣ין הָאָדָ֑ם וְכָל־ע֥וֹף הַשָּׁמַ֖יִם נָדָֽדוּ׃
26 ೨೬ ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
רָאִ֕יתִי וְהִנֵּ֥ה הַכַּרְמֶ֖ל הַמִּדְבָּ֑ר וְכָל־עָרָ֗יו נִתְּצוּ֙ מִפְּנֵ֣י יְהוָ֔ה מִפְּנֵ֖י חֲר֥וֹן אַפּֽוֹ׃ ס
27 ೨೭ ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
כִּי־כֹה֙ אָמַ֣ר יְהוָ֔ה שְׁמָמָ֥ה תִהְיֶ֖ה כָּל־הָאָ֑רֶץ וְכָלָ֖ה לֹ֥א אֶעֱשֶֽׂה׃
28 ೨೮ ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
עַל־זֹאת֙ תֶּאֱבַ֣ל הָאָ֔רֶץ וְקָדְר֥וּ הַשָּׁמַ֖יִם מִמָּ֑עַל עַ֤ל כִּי־דִבַּ֙רְתִּי֙ זַמֹּ֔תִי וְלֹ֥א נִחַ֖מְתִּי וְלֹא־אָשׁ֥וּב מִמֶּֽנָּה׃
29 ೨೯ ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
מִקּ֨וֹל פָּרָ֜שׁ וְרֹ֣מֵה קֶ֗שֶׁת בֹּרַ֙חַת֙ כָּל־הָעִ֔יר בָּ֚אוּ בֶּעָבִ֔ים וּבַכֵּפִ֖ים עָל֑וּ כָּל־הָעִ֣יר עֲזוּבָ֔ה וְאֵין־יוֹשֵׁ֥ב בָּהֵ֖ן אִֽישׁ׃
30 ೩೦ ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
ואתי שָׁד֜וּד מַֽה־תַּעֲשִׂ֗י כִּֽי־תִלְבְּשִׁ֨י שָׁנִ֜י כִּי־תַעְדִּ֣י עֲדִי־זָהָ֗ב כִּֽי־תִקְרְעִ֤י בַפּוּךְ֙ עֵינַ֔יִךְ לַשָּׁ֖וְא תִּתְיַפִּ֑י מָאֲסוּ־בָ֥ךְ עֹגְבִ֖ים נַפְשֵׁ֥ךְ יְבַקֵּֽשׁוּ׃
31 ೩೧ ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.
כִּי֩ ק֨וֹל כְּחוֹלָ֜ה שָׁמַ֗עְתִּי צָרָה֙ כְּמַבְכִּירָ֔ה ק֧וֹל בַּת־צִיּ֛וֹן תִּתְיַפֵּ֖חַ תְּפָרֵ֣שׂ כַּפֶּ֑יהָ אֽוֹי־נָ֣א לִ֔י כִּֽי־עָיְפָ֥ה נַפְשִׁ֖י לְהֹרְגִֽים׃ פ

< ಯೆರೆಮೀಯನು 4 >