< ಯೆರೆಮೀಯನು 4 >
1 ೧ ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.
१यहोवा की यह वाणी है, “हे इस्राएल, यदि तू लौट आए, तो मेरे पास लौट आ। यदि तू घिनौनी वस्तुओं को मेरे सामने से दूर करे, तो तुझे आवारा फिरना न पड़ेगा,
2 ೨ ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.
२और यदि तू सच्चाई और न्याय और धार्मिकता से यहोवा के जीवन की शपथ खाए, तो जाति-जाति उसके कारण अपने आपको धन्य कहेंगी, और उसी पर घमण्ड करेंगी।”
3 ೩ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
३क्योंकि यहूदा और यरूशलेम के लोगों से यहोवा ने यह कहा है, “अपनी पड़ती भूमि को जोतो, और कटीले झाड़ों में बीज मत बोओ।
4 ೪ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.
४हे यहूदा के लोगों और यरूशलेम के निवासियों, यहोवा के लिये अपना खतना करो; हाँ, अपने मन का खतना करो; नहीं तो तुम्हारे बुरे कामों के कारण मेरा क्रोध आग के समान भड़केगा, और ऐसा होगा की कोई उसे बुझा न सकेगा।”
5 ೫ ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.
५यहूदा में प्रचार करो और यरूशलेम में यह सुनाओ: “पूरे देश में नरसिंगा फूँको; गला खोलकर ललकारो और कहो, ‘आओ, हम इकट्ठे हों और गढ़वाले नगरों में जाएँ!’
6 ೬ ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಉತ್ತರ ದಿಕ್ಕಿನಿಂದ ವಿಪತ್ತನ್ನು ಮತ್ತು ಘೋರನಾಶವನ್ನು ಬರಮಾಡುವೆನು.
६सिय्योन के मार्ग में झण्डा खड़ा करो, खड़े मत रहो, क्योंकि मैं उत्तर की दिशा से विपत्ति और सत्यानाश ला रहा हूँ।
7 ೭ ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.
७एक सिंह अपनी झाड़ी से निकला, जाति-जाति का नाश करनेवाला चढ़ाई करके आ रहा है; वह कूच करके अपने स्थान से इसलिए निकला है कि तुम्हारे देश को उजाड़ दे और तुम्हारे नगरों को ऐसा सुनसान कर दे कि उनमें कोई बसनेवाला न रहने पाए।
8 ೮ ಇದರ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ; ಯೆಹೋವನ ರೋಷಾಗ್ನಿಯು ನಮ್ಮನ್ನು ಬಿಟ್ಟಿಲ್ಲವಲ್ಲಾ.
८इसलिए कमर में टाट बाँधो, विलाप और हाय-हाय करो; क्योंकि यहोवा का भड़का हुआ कोप हम पर से टला नहीं है।”
9 ೯ ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.
९“उस समय राजा और हाकिमों का कलेजा काँप उठेगा; याजक चकित होंगे और नबी अचम्भित हो जाएँगे,” यहोवा की यह वाणी है।
10 ೧೦ ಆಗ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಮತ್ತು ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು’ ಎಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದಿ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ” ಅಂದೆನು.
१०तब मैंने कहा, “हाय, प्रभु यहोवा, तूने तो यह कहकर कि तुम को शान्ति मिलेगी निश्चय अपनी इस प्रजा को और यरूशलेम को भी बड़ा धोखा दिया है; क्योंकि तलवार प्राणों को मिटाने पर है।”
11 ೧೧ ಈ ಕಾಲದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಈ ಮಾತಾಗುವುದು, “ಬಿಸಿಗಾಳಿಯು ಅರಣ್ಯದ ಬೋಳುಗುಡ್ಡಗಳಿಂದ ನನ್ನ ಪ್ರಜೆಯೆಂಬ ಯುವತಿಯ ಮೇಲೆ ಬೀಸುತ್ತದೆ; ಅದು ತೂರುವುದಕ್ಕೂ, ಶೋಧಿಸುವುದಕ್ಕೂ ಆಗದು.
११उस समय तेरी इस प्रजा से और यरूशलेम से भी कहा जाएगा, “जंगल के मुँण्ड़े टीलों पर से प्रजा के लोगों की ओर लू बह रही है, वह ऐसी वायु नहीं जिससे ओसाना या फरछाना हो,
12 ೧೨ ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.
१२परन्तु मेरी ओर से ऐसे कामों के लिये अधिक प्रचण्ड वायु बहेगी। अब मैं उनको दण्ड की आज्ञा दूँगा।”
13 ೧೩ ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
१३देखो, वह बादलों के समान चढ़ाई करके आ रहा है, उसके रथ बवण्डर के समान और उसके घोड़े उकाबों से भी अधिक वेग से चलते हैं। हम पर हाय, हम नाश हुए!
14 ೧೪ ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
१४हे यरूशलेम, अपना हृदय बुराई से धो, कि तुम्हारा उद्धार हो जाए। तुम कब तक व्यर्थ कल्पनाएँ करते रहोगे?
15 ೧೫ ಆಹಾ, ದಾನ್ ನಗರದಿಂದ ಪ್ರಕಟಣೆಯ ಧ್ವನಿಯು ಕೇಳಿಬರುತ್ತದೆ, ಎಫ್ರಾಯೀಮಿನ ಬೆಟ್ಟದಲ್ಲಿಯೂ ಕೇಡನ್ನು ಸಾರುತ್ತದೆ.
१५क्योंकि दान से शब्द सुन पड़ रहा है और एप्रैम के पहाड़ी देश से विपत्ति का समाचार आ रहा है।
16 ೧೬ ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.
१६जाति-जाति में सुना दो, यरूशलेम के विरुद्ध भी इसका समाचार दो, “आक्रमणकारी दूर देश से आकर यहूदा के नगरों के विरुद्ध ललकार रहे हैं।
17 ೧೭ ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.
१७वे खेत के रखवालों के समान उसको चारों ओर से घेर रहे हैं, क्योंकि उसने मुझसे बलवा किया है, यहोवा की यही वाणी है।
18 ೧೮ ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.
१८यह तेरी चाल और तेरे कामों ही का फल हैं। यह तेरी दुष्टता है और अति दुःखदाई है; इससे तेरा हृदय छिद जाता है।”
19 ೧೯ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.
१९हाय! हाय! मेरा हृदय भीतर ही भीतर तड़पता है! और मेरा मन घबराता है! मैं चुप नहीं रह सकता; क्योंकि हे मेरे प्राण, नरसिंगे का शब्द और युद्ध की ललकार तुझ तक पहुँची है।
20 ೨೦ ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.
२०नाश पर नाश का समाचार आ रहा है, सारा देश नाश हो गया है। मेरे डेरे अचानक और मेरे तम्बू एकाएक लूटे गए हैं।
21 ೨೧ ನಾನು ಎಷ್ಟರವರೆಗೆ ಯುದ್ಧದ ಪತಾಕೆಗಳನ್ನು ನೋಡಲಿ, ಎಂದಿನ ತನಕ ತುತ್ತೂರಿಯ ಶಬ್ದವನ್ನು ಕೇಳಲಿ!
२१और कितने दिन तक मुझे उनका झण्डा देखना और नरसिंगे का शब्द सुनना पड़ेगा?
22 ೨೨ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
२२“क्योंकि मेरी प्रजा मूर्ख है, वे मुझे नहीं जानते; वे ऐसे मूर्ख बच्चें हैं जिनमें कुछ भी समझ नहीं। बुराई करने को तो वे बुद्धिमान हैं, परन्तु भलाई करना वे नहीं जानते।”
23 ೨೩ ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.
२३मैंने पृथ्वी पर देखा, वह सूनी और सुनसान पड़ी थी; और आकाश को, और उसमें कोई ज्योति नहीं थी।
24 ೨೪ ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.
२४मैंने पहाड़ों को देखा, वे हिल रहे थे, और सब पहाड़ियों को कि वे डोल रही थीं।
25 ೨೫ ನಾನು ನೋಡಲಾಗಿ ಅಯ್ಯೋ, ಜನವೇ ಇರಲಿಲ್ಲ, ಆಕಾಶದ ಸಕಲ ಪಕ್ಷಿಗಳು ಹಾರಿಹೋಗಿದ್ದವು.
२५फिर मैंने क्या देखा कि कोई मनुष्य भी न था और सब पक्षी भी उड़ गए थे।
26 ೨೬ ನಾನು ನೋಡಲಾಗಿ ಫಲವತ್ತಾದ ಭೂಮಿಯು ಕಾಡಾಗಿತ್ತು, ಅಯ್ಯೋ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದುಹೋಗಿದ್ದವು.
२६फिर मैं क्या देखता हूँ कि यहोवा के प्रताप और उस भड़के हुए प्रकोप के कारण उपजाऊ देश जंगल, और उसके सारे नगर खण्डहर हो गए थे।
27 ೨೭ ಯೆಹೋವನು, “ದೇಶವೆಲ್ಲಾ ಬಟ್ಟಬರಿದಾಗುವುದು, ಆದರೆ ನಾನು ಸಂಪೂರ್ಣವಾಗಿ ಲಯಮಾಡೆನು.
२७क्योंकि यहोवा ने यह बताया, “सारा देश उजाड़ हो जाएगा; तो भी मैं उसका अन्त न करूँगा।
28 ೨೮ ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
२८इस कारण पृथ्वी विलाप करेगी, और आकाश शोक का काला वस्त्र पहनेगा; क्योंकि मैंने ऐसा ही करने को ठाना और कहा भी है; मैं इससे नहीं पछताऊँगा और न अपने प्राण को छोड़ूँगा।”
29 ೨೯ ಪಟ್ಟಣದವರೆಲ್ಲರೂ ಸವಾರರ ಮತ್ತು ಬಿಲ್ಲುಗಾರರ ಆರ್ಭಟಕ್ಕೆ ಹೆದರಿ ಓಡುತ್ತಾರೆ; ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ, ಅತ್ತ ಬಂಡೆಗಳನ್ನು ಹತ್ತುತ್ತಾರೆ; ಪ್ರತಿಯೊಂದು ಪಟ್ಟಣವು ಯಾವ ನಿವಾಸಿಯೂ ಇಲ್ಲದೆ ನಿರ್ಜನವಾಗುತ್ತದೆ.
२९नगर के सारे लोग सवारों और धनुर्धारियों का कोलाहल सुनकर भागे जाते हैं; वे झाड़ियों में घुसते और चट्टानों पर चढ़े जाते हैं; सब नगर निर्जन हो गए, और उनमें कोई बाकी न रहा।
30 ೩೦ ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
३०और तू जब उजड़ेंगी तब क्या करेगी? चाहे तू लाल रंग के वस्त्र पहने और सोने के आभूषण धारण करे और अपनी आँखों में अंजन लगाए, परन्तु व्यर्थ ही तू अपना श्रृंगार करेगी। क्योंकि तेरे प्रेमी तुझे निकम्मी जानते हैं; वे तेरे प्राण के खोजी हैं।
31 ೩೧ ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.
३१क्योंकि मैंने जच्चा का शब्द, पहलौठा जनती हुई स्त्री की सी चिल्लाहट सुनी है, यह सिय्योन की बेटी का शब्द है, जो हाँफती और हाथ फैलाए हुए यह कहती है, “हाय मुझ पर, मैं हत्यारों के हाथ पड़कर मूर्छित हो चली हूँ।”