< ಯೆರೆಮೀಯನು 41 >
1 ೧ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.
১কিন্তু এটা ঘটল, ইলীশামার নাতি, নথনিয়ের ছেলে ইশ্মায়েল রাজবংশ থেকে সপ্তম মাসে দশ জন লোক সঙ্গে নিয়ে মিস্পাতে অহীকামের ছেলে গদলিয়ের কাছে আসল; তারা একসঙ্গে খাবার খেল।
2 ೨ ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
২কিন্তু নথনিয়ের ছেলে ইশ্মায়েল ও তার সঙ্গে আসা দশ জন লোক উঠে শাফনের নাতি, অহীকামের ছেলে গদলিয়কে তরোয়াল দিয়ে আঘাত করল। ইশ্মায়েল গদলিয়কে হত্যা করল, যাকে বাবিলের রাজার সেই দেশের শাসনকর্ত্তা নিযুক্ত করেছিলেন।
3 ೩ ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು.
৩তখন ইশ্মায়েল মিস্পাতে গদলিয়ের সঙ্গে যে সব ইহুদীরা ছিল এবং যে সব কলদীয় সৈন্যকে সেখানে খুঁজে পাওয়া গেল, তাদের সবাইকে হত্যা করল।
4 ೪ ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು,
৪তারপর সেটা ছিল গদলিয় হত্যার দ্বিতীয় দিন, কিন্তু কেউ তা জানত না।
5 ೫ ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.
৫শিখিম, শীলো ও শমরিয়া থেকে আশিজন লোক এল, যারা তাদের দাড়ি কামিয়ে, কাপড়-চোপড় ছিঁড়ে ও নিজেদের দেহ কাটাকুটি করে সদাপ্রভুর গৃহে ভক্ষ্য-নৈবেদ্য ও সুগন্ধি হাতে করে নিয়ে যাচ্ছিল।
6 ೬ ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದು ಅವರನ್ನು ಎದರುಗೊಂಡು, “ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಬನ್ನಿರಿ” ಎಂದು ಹೇಳಿದನು.
৬নথনিয়ের ছেলে ইশ্মায়েল তাদের সঙ্গে দেখা করার জন্য কাঁদতে কাঁদতে মিস্পা থেকে বের হল। তখন এটা ঘটল, সে সেই লোকদের সঙ্গে দেখা করল, সে তাদের বলল, “অহীকামের ছেলে গদলিয়ের কাছে এস।”
7 ೭ ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
৭তারা শহরের মাঝখানে আসলে নথনিয়ের ছেলে ইশ্মায়েল ও তার সঙ্গী লোকেরা তাদের হত্যা করে একটি কুয়োর মধ্যে ফেলে দিল।
8 ೮ ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.
৮কিন্তু তাদের মধ্যে দশ জন ছিল, যারা ইশ্মায়েলকে বলল, “আমাদের হত্যা করবেন না, কারণ মাঠের মধ্যে আমাদের গম, যব, তেল ও মধু লুকানো রয়েছে।” তাই সে তাদের অন্য সঙ্গীদের হত্যা করল না।
9 ೯ ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.
৯ঐ লোকেদের হত্যা করে ইশ্মায়েল যে কুয়োতে তাদের মৃতদেহ গদলিয়ের পাশে ফেলে দিয়েছিল, তা রাজা আসা ইস্রায়েলের রাজা বাশার ভয়ে তৈরী করিয়েছিলেন। নথনিয়ের ছেলে ইশ্মায়েল সেটা মৃতদেহ দিয়ে পরিপূর্ণ করল।
10 ೧೦ ಆ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನು ರಾಜಕುಮಾರ್ತೆಯರನ್ನು, ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮಿಚ್ಪದ ಉಳಿದ ಜನರನ್ನು ಸೆರೆಹಿಡಿದು ಅಮ್ಮೋನ್ಯರ ಸೀಮೆಗೆ ಹೊರಟನು.
১০পরে ইশ্মায়েল মিস্পাতে অবশিষ্ট লোকেদের বন্দী করে নিয়ে গেল। রাজকুমারীরা ও যারা মিস্পাতে অবশিষ্ট ছিল, যাদের উপর রাজার দেহরক্ষীদলের সেনাপতি নবূষরদন অহীকামের ছেলে গদলিয়কে নিযুক্ত করেছিলেন। নথনিয়ের ছেলে ইশ্মায়েল তাদের বন্দী করে নিয়ে অম্মোন সন্তানদের কাছে যাওয়ার জন্য চলে গেল।
11 ೧೧ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಕಲ ಸೇನಾಪತಿಗಳೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ ಎಲ್ಲಾ ಕೆಡುಕನ್ನು ಕೇಳಿ,
১১কিন্তু কারেহের ছেলে যোহানন ও তার সঙ্গী সেনাপতিরা শুনল যে, নথনিয়ের ছেলে ইশ্মায়েলের এইসব অন্যায় কাজ করেছে।
12 ೧೨ ತಮ್ಮ ಸೈನಿಕರನ್ನೆಲ್ಲಾ ಕರೆದುಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು, ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.
১২তখন তারা তাদের সব লোকদের নিয়ে নথনিয়ের ছেলে ইশ্মায়েলের সঙ্গে যুদ্ধ করতে গেল। গিবিয়োনের বড় পুকুরের কাছে তারা তাকে খুঁজে পেল।
13 ೧೩ ಆಗ ಇಷ್ಮಾಯೇಲನ ಸಂಗಡ ಇದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಮಸ್ತ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.
১৩তখন এটা ঘটল, ইশ্মায়েলের সঙ্গে যে সব লোক ছিল, তারা কারেহের ছেলে যোহানন ও তার সঙ্গী সেনাপতিদের দেখে খুশী হল।
14 ೧೪ ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.
১৪আর ইশ্মায়েল সেই যে সব লোকদের বন্দী করে মিস্পা থেকে নিয়ে যাচ্ছিল, তারা কারেহের ছেলে যোহাননের কাছে ফিরে গেল।
15 ೧೫ ನೆತನ್ಯನ ಮಗನಾದ ಇಷ್ಮಾಯೇಲನೋ ಎಂಟು ಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮೊರೆಹೊಕ್ಕನು.
১৫কিন্তু নথনিয়ের ছেলে ইশ্মায়েল আটজন লোকের সঙ্গে যোহাননের কাছ থেকে পালিয়ে অম্মোন সন্তানদের কাছে গেল।
16 ೧೬ ಆಗ ಕಾರೇಹನ ಮಗನಾದ ಯೋಹಾನಾನನೂ ಅವನೊಂದಿಗಿದ್ದ ಸಮಸ್ತ ಸೇನಾಧಿಪತಿಗಳೂ ತಾವು ನೆತನ್ಯನ ಮಗನಾದ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಭಟರು, ಹೆಂಗಸರು, ಮಕ್ಕಳು, ಕಂಚುಕಿಗಳು, ಅಂತು ಇಷ್ಮಾಯೇಲನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದ ಮೇಲೆ ಮಿಚ್ಪದಿಂದ ಒಯ್ದ ಉಳಿದ ಜನರನ್ನೆಲ್ಲಾ ಕರೆದುಕೊಂಡು ಹೋದರು.
১৬নথনিয়ের ছেলে ইশ্মায়েল যে অহীকামের ছেলে গদলিয়কে হত্যা করেছিল, তার কাছ থেকে কারেহের ছেলে যোহানন ও তার সঙ্গী সেনাপতিরা যে সব অবশিষ্ট লোককে মিস্পা থেকে ফিরিয়ে এনেছিল, তাদেরকে সঙ্গে নিল, যুদ্ধে দক্ষ পুরুষদের এবং গিবিয়োন থেকে আনা স্ত্রীলোক, ছেলেমেয়ে ও নপুংসকদের সঙ্গে নিল।
17 ೧೭ ಅವರು ಕಸ್ದೀಯರ ಭಯದಿಂದ ಐಗುಪ್ತಕ್ಕೆ ವಲಸೆಹೋಗಬೇಕೆಂದು ಬೇತ್ಲೆಹೇಮಿನ ಸಮೀಪವಾಗಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.
১৭তখন তারা চলে গেল এবং গেরুৎ কিমহমে কিছু দিন থাকলো, যেটা বৈৎলেহমের কাছে। কলদীয়দের ভয়ে তারা মিশরে যাচ্ছিল।
18 ೧೮ ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.
১৮তারা তাদের ভয় পেয়েছিল, কারণ নথনিয়ের ছেলে ইশ্মায়েল অহীকামের ছেলে গদলিয়কে হত্যা করেছিল, যাকে বাবিলের রাজা শাসনকর্ত্তা হিসাবে নিযুক্ত করেছিলেন।