< ಯೆರೆಮೀಯನು 42 >
1 ೧ ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
Ndipo maafisa wote wa jeshi, pamoja na Yohanani mwana wa Karea, na Yezania mwana wa Hoshaya, na watu wote kuanzia aliye mdogo kabisa hadi aliye mkuu sana wakamjia
2 ೨ ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
Yeremia nabii na kumwambia, “Tafadhali sikia maombi yetu na umwombe Bwana Mungu wako kwa ajili ya watu hawa wote waliosalia. Kwa kuwa kama unavyoona sasa, ingawa wakati fulani tulikuwa wengi, sasa tumesalia wachache tu.
3 ೩ ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು.
Omba ili Bwana Mungu wako atuambie twende wapi na tufanye nini.”
4 ೪ ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.
Nabii Yeremia akajibu, “Nimewasikia. Kwa hakika nitamwomba Bwana Mungu wenu kama mlivyoomba. Nitawaambia kila kitu asemacho Bwana, wala sitawaficha chochote.”
5 ೫ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
Kisha wakamwambia Yeremia, “Bwana na awe shahidi wa kweli na mwaminifu kati yetu kama hatutafanya sawasawa na kila kitu Bwana Mungu wako atakachokutuma utuambie.
6 ೬ ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.
Likiwa jema au likiwa baya, tutamtii Bwana Mungu wetu, ambaye tunakutuma kwake, ili mambo yote yawe mema kwetu, kwa maana tutamtii Bwana Mungu wetu.”
7 ೭ ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.
Baada ya siku kumi, neno la Bwana likamjia Yeremia.
8 ೮ ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,
Kwa hiyo akawaita pamoja Yohanani mwana wa Karea, na maafisa wote wa jeshi waliokuwa pamoja naye na watu wote kuanzia mdogo kabisa hadi aliye mkuu sana.
9 ೯ “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
Akawaambia, “Hili ndilo asemalo Bwana, Mungu wa Israeli, ambaye mlinituma kuwasilisha maombi yenu:
10 ೧೦ ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
‘Kama mkikaa katika nchi hii, nitawajenga wala sitawabomoa, nitawapanda wala sitawangʼoa, kwani ninahuzunishwa na maafa niliyowapiga nayo.
11 ೧೧ ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.
Msimwogope mfalme wa Babeli, ambaye sasa mnamwogopa. Msimwogope, asema Bwana, kwa kuwa niko pamoja nanyi, nami nitawaokoa na kuwaponya kutoka mikononi mwake.
12 ೧೨ ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.
Nitawaonea huruma ili naye awe na huruma nanyi na kuwarudisha katika nchi yenu.’
13 ೧೩ ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;
“Hata hivyo, kama mkisema, ‘Hatutakaa katika nchi hii,’ hivyo mkaacha kumtii Bwana Mungu wenu,
14 ೧೪ ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,
nanyi kama mkisema, ‘Hapana, tutakwenda kuishi Misri, mahali ambapo hatutaona vita au kusikia sauti ya tarumbeta au kuwa na njaa ya chakula,’
15 ೧೫ ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,
basi sikieni neno la Bwana, enyi mabaki ya Yuda. Hili ndilo Bwana Mwenye Nguvu Zote, Mungu wa Israeli, asemalo: ‘Ikiwa mmekusudia kwenda Misri na kufanya makazi huko,
16 ೧೬ ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
basi ule upanga mnaouogopa utawapata huko, na njaa mnayoihofia itawafuata huko Misri, nanyi mtafia huko.
17 ೧೭ ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
Naam, wote waliokusudia kwenda kuishi Misri watakufa kwa upanga, njaa na tauni; hakuna hata mmoja wao atakayenusurika au kuokoka maafa nitakayoyaleta juu yao.’
18 ೧೮ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
Hili ndilo Bwana Mwenye Nguvu Zote, Mungu wa Israeli, asemalo: ‘Kama vile hasira yangu na ghadhabu yangu ilivyomwagwa juu ya wale walioishi Yerusalemu, ndivyo ghadhabu yangu itakavyomwagwa juu yenu mtakapokwenda Misri. Mtakuwa kitu cha kulaania na cha kutisha, cha kulaumia na cha kushutumia, nanyi kamwe hamtaona mahali hapa tena.’
19 ೧೯ “ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
“Enyi mabaki ya Yuda, Bwana amewaambia, ‘Msiende Misri.’ Hakikisheni jambo hili: Ninawaonya leo
20 ೨೦ ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
kwamba mmefanya kosa kubwa mioyoni mwenu mliponituma kwa Bwana Mungu wenu na kusema, ‘Mwombe Bwana Mungu wetu kwa ajili yetu, nawe utuambie kila kitu atakachosema, nasi tutafanya.’
21 ೨೧ ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
Nimewaambieni leo, lakini bado ninyi hamtaki kumtii Bwana Mungu wenu katika yote aliyonituma niwaambie.
22 ೨೨ ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.
Basi sasa, hakikisheni jambo hili: Mtakufa kwa upanga, njaa na tauni mahali ambapo mnataka kwenda kuishi.”