< ಯೆರೆಮೀಯನು 43 >
1 ೧ ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.
耶肋米亞向全體人民說完上主他們的天主的一切話,即上主他們的天主派遣他來向他們轉告的這一切話以後,
2 ೨ ಆಮೇಲೆ ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಸೊಕ್ಕೇರಿದವರೆಲ್ಲರೂ ಅವನಿಗೆ, “ನಿನ್ನ ಮಾತು ಸುಳ್ಳು, ‘ಐಗುಪ್ತಕ್ಕೆ ಹೋಗಿ ವಾಸಮಾಡಬಾರದು’ ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ.
瑪阿色雅的兒子阿匝黎雅和卡勒亞的兒子約哈南,以及一切傲慢反叛的人,就肋米亞說:「你說謊;上主我們的天主並沒有派你說:你們不要去寄居埃及;
3 ೩ ಕಸ್ದೀಯರು ನಮ್ಮನ್ನು ಕೊಲ್ಲುವುದಕ್ಕೋ, ಬಾಬಿಲೋನಿಗೆ ಸೆರೆ ಒಯ್ಯುವುದಕ್ಕೋ ನಮ್ಮನ್ನು ಅವರ ಕೈಗೆ ಸಿಕ್ಕಿಸಬೇಕೆಂದು ನೇರೀಯನ ಮಗನಾದ ಬಾರೂಕನೇ ನಿನ್ನನ್ನು ನಮ್ಮ ಮೇಲೆ ನೂಕಿದ್ದಾನೆ” ಎಂದು ಹೇಳಿದರು.
只是乃黎雅的兒子巴路克挑唆你反對我們,好將我交在加色丁人手中,或殺或擄到巴比倫去。」
4 ೪ ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.
卡勒亞的兒子約哈南和眾部隊首領以及全體人民,沒有聽從上主的勸告,住在猶大地內。
5 ೫ ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
卡勒亞的兒子約哈南和眾部隊首領,反而率領全體猶大遣民,即那些四到各民族間,又回來住在猶大境內的人:
6 ೬ ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
男子和婦女,幼童和王家閨秀,以及衛隊長乃步匝辣當給沙番的孫子,阿希甘的兒子留下的人,連同先知耶肋米亞和乃黎雅的兒子巴路克,
7 ೭ ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.
到埃及地去了;沒有聽從上主的勸告,而來到塔黑培乃斯。
8 ೮ ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.
在塔黑培乃斯上主有話傳給耶肋米亞說:「
9 ೯ ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,
你用手拿一些大石頭,當著猶大人眼前,藏在塔黑培乃斯法郎王宮前石鋪地道下面,
10 ೧೦ ‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.
然後對他們說:萬軍的上主,以色列的天主這樣說:看,我必派人去領我的僕人巴比倫王拿步高來,在你藏的這些石頭上安置他的寶座,張設他的華蓋。
11 ೧೧ ಅವನು ಬಂದು ಐಗುಪ್ತ ದೇಶವನ್ನು ಹೊಡೆಯುವನು. ಮರಣಕ್ಕೆ ನೇಮಕವಾದವರು ಮರಣಕ್ಕೆ, ಸೆರೆಗೆ ನೇಮಕವಾದವರು ಸೆರೆಗೆ, ಖಡ್ಗಕ್ಕೆ ನೇಮಕವಾದವರು ಖಡ್ಗಕ್ಕೆ ಗುರಿಯಾಗುವರು.
他必來攻打埃及地,叫那該死的死,該擄的擄,該殺的殺;
12 ೧೨ ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
必來放火焚燒埃及的神廟,燒毀或擄走廟內的神像;必來收取埃及地,如同牧人收取自己的外衣;最後安然離去。
13 ೧೩ ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”
此外他還要粉碎埃及地太陽神廟的石柱,放火焚燒埃及的神廟。」