< ಯೆರೆಮೀಯನು 45 >
1 ೧ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
ユダの王ヨシヤの子エホヤキムの四年に、ネリヤの子バルクがこれらの言葉をエレミヤの口述にしたがって書にしるした時、預言者エレミヤが彼に語った言葉、
2 ೨ “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?
「バルクよ、イスラエルの神、主はあなたについてこう言われる、
3 ೩ ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
あなたはかつて、『ああ、わたしはわざわいだ、主がわたしの苦しみに悲しみをお加えになった。わたしは嘆き疲れて、安息が得られない』と言った。
4 ೪ ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
あなたはこう彼に言いなさい、主はこう言われる、見よ、わたしは自分で建てたものをこわし、自分で植えたものを抜いているそれは、この全地である。
5 ೫ ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”
あなたは自分のために大いなる事を求めるのか、これを求めてはならない。見よ、わたしはすべての人に災を下そうとしている。しかしあなたの命はあなたの行くすべての所で、ぶんどり物としてあなたに与えると主は言われる」。