< ಯೆರೆಮೀಯನು 47 >
1 ೧ ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
which to be word LORD to(wards) Jeremiah [the] prophet to(wards) Philistine in/on/with before to smite Pharaoh [obj] Gaza
2 ೨ ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.
thus to say LORD behold water to ascend: rise from north and to be to/for torrent: river to overflow and to overflow land: country/planet and fullness her city and to dwell in/on/with her and to cry out [the] man and to wail all to dwell [the] land: country/planet
3 ೩ ಶತ್ರುವಿನ ಕುದುರೆಗಳ ಗೊರಸುಗಳು ನೆಲವನ್ನು ಅಪ್ಪಳಿಸುವ ಶಬ್ದಕ್ಕೂ, ರಥಗಳ ರಭಸಕ್ಕೂ, ಚಕ್ರಗಳ ಬಿರುಗುಟ್ಟುವಿಕೆಗೂ ತಂದೆಗಳು ಹೆದರುತ್ತಾ ಜೋಲುಗೈ ಉಳ್ಳವರಾಗಿ ತಮ್ಮ ಮಕ್ಕಳನ್ನು ಹಿಂದಿರುಗಿ ನೋಡರು.
from voice: sound stamping hoof mighty: stallion his from quaking to/for chariot his crowd wheel his not to turn father to(wards) son: child from feebleness hand
4 ೪ ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.
upon [the] day [the] to come (in): come to/for to ruin [obj] all Philistine to/for to cut: eliminate to/for Tyre and to/for Sidon all survivor to help for to ruin LORD [obj] Philistine remnant coastland Caphtor
5 ೫ “ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
to come (in): come bald spot to(wards) Gaza to cease Ashkelon remnant valley their till how to cut
6 ೬ ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
woe! sword to/for LORD till where? not to quiet to gather to(wards) razor your to rest and to silence: stationary
7 ೭ ಖಡ್ಗವು ವಿಶ್ರಾಂತಿಗೊಳ್ಳುವುದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೆ ಅದನ್ನು ನೇಮಿಸಿದ್ದಾನೆ.”
how? to quiet and LORD to command to/for her to(wards) Ashkelon and to(wards) coast [the] sea there to appoint her