< ಯೆರೆಮೀಯನು 49 >
1 ೧ ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
Przeciwko synom Amonowym. Tak mówi Pan: Izali Izrael nie ma synów? Izali żadnego dziedzica nie ma? czemuż król ich dziedzicznie opanował Gad, a lud jego czemu mieszka w miastach jego?
2 ೨ ಆದುದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು, ಯುದ್ಧ ಘೋಷಿಸುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಯೆಹೋವನ ನುಡಿ.”
Przetoż oto dni idą, mówi Pan, sprawię, że usłyszą trąbienie wojenne przeciwko Rabbie synów Amonowych, i będzie obrócona w kupę rumu, a inne miasta jego ogniem spalone będą, i posiędzie Izrael dzierżawców swoich, mówi Pan.
3 ೩ “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
Rozrzewnij się, Hesebonie! bo Haj spustoszone będzie; krzyczcie, o córki Rabby! przepaszcie się worami, narzekajcie, a tułajcie się około płotów; bo król wasz do więzienia pójdzie, także kapłani jego, i książęta jego społem.
4 ೪ ‘ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲಿ ಭರವಸೆ ಇಟ್ಟಿರುವ ಭ್ರಷ್ಟದೇಶವೇ, ‘ನನ್ನ ತಗ್ಗುಗಳಲ್ಲಿ ತುಂಬಾ ನೀರು ಹರಿಯುತ್ತದೆಂದು’ ಏಕೆ ಕೊಚ್ಚಿಕೊಳ್ಳುತ್ತೀ?
Cóż się przechwalasz dolinami? Spłynęła dolina twoja, o córko uporna! która ufasz w skarbach twoich, mówiąc: Któż przyciągnie przeciwko mnie?
5 ೫ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, ಇಗೋ, ನಿನ್ನ ನೆರೆಹೊರೆಯವರೆಲ್ಲರೂ ನಿನಗೆ ಭಯಾಸ್ಪದರಾಗುವಂತೆ ಮಾಡುವೆನು, ನಿನ್ನವರಲ್ಲಿ ಪ್ರತಿಯೊಬ್ಬನು ನಿಂತಮುಖವಾಗಿಯೇ ಅಟ್ಟಲ್ಪಡುವನು; ಚದುರಿದವರನ್ನು ಒಟ್ಟು ಸೇರಿಸುವುದಕ್ಕೆ ಯಾರೂ ಇಲ್ಲದಂತಾಗುವುದು.
Oto Ja przywiodę na cię strach, mówi Pan, Pan zastępów od wszystkich, którzy są około ciebie, przez który rozegnani będziecie jeden od drugiego, a nie będzie, ktoby zebrał tułających się.
6 ೬ ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
Wszakże potem przywiodę zaś więźniów synów Amonowych, mówi Pan.
7 ೭ ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
Przeciwko Edomczykom. Tak mówi Pan zastępów: Izali niemasz więcej mądrości w Teman? Izali zginęła rada od roztropnych, a wniwecz się obróciła mądrość ich?
8 ೮ ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
Uciekajcie, obróćcie się, zstąpcie w głębokość na mieszkanie, obywatele Dedan! bo przywiodę zatracenie na Ezawa czasu nawiedzenia jego.
9 ೯ ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
Gdyby ci, którzy zbierają wino, przyszli na cię, izaliby nie zostawili jakich gron? gdyby się wkradli złodzieje w nocy, azażby szkodzili więcej nad potrzebę swoję?
10 ೧೦ ನಾನೇ ಏಸಾವನ ಆಸರೆಯನ್ನು ಕಿತ್ತಿದ್ದೇನೆ, ಅವನ ಗುಪ್ತಸ್ಥಳಗಳನ್ನು ಬಟ್ಟಬಯಲುಮಾಡಿದ್ದೇನೆ, ಅಡಗಿಕೊಳ್ಳಲಾರನು; ಅವನ ಸಂತಾನದವರೂ, ಸಹೋದರರೂ ಮತ್ತು ನೆರೆಹೊರೆಯವರೂ ಹಾಳಾದರು, ಅವನೂ ಇಲ್ಲವಾದನು.
Lecz Ja obnażę Ezawa, odkryję skrytości jego, tak, iż się ukryć nie będzie mógł: zniszczone będzie nasienie jego, i bracia jego, i sąsiedzi jego, tak, że zgoła nie będzie, ktoby rzekł:
11 ೧೧ ನೀನು ನಿನ್ನ ಅನಾಥರನ್ನು ಬಿಡು, ನಾನೇ ಅವರನ್ನು ಉಳಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ಭರವಸೆಯಿಡಲಿ.
Zaniechaj sierotek twoich, ja je żywić będę, a wdowy twoje we mnie ufać będą.
12 ೧೨ ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.
Tak zaiste mówi Pan: Oto ci, którym nie przysądzono pić z kubka tego, przecie piją z niego, a tybyś miał zgoła tego ujść?
13 ೧೩ ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
Nie ujdziesz, ale koniecznie pić będziesz; bo przez się przysięgam, mówi Pan, iż na spustoszenie, na pohańbienie, na zburzenie, i na przeklęstwo Bocra przyjdzie, i wszystkie miasta jego będą pustemi na wieki.
14 ೧೪ ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳಿರಿ.
Słyszałem wieść od Pana, że do narodów posłany jest poseł mówiący: Zgromadźcie się, a ciągnijcie, przeciwko niemu, wstańcież do bitwy.
15 ೧೫ ಇಗೋ ಎದೋಮೇ, ನೀನು ಜನಾಂಗಗಳಲ್ಲಿ ಹೀನವಾಗಿ ಜನರ ತಾತ್ಸಾರಕ್ಕೆ ಈಡಾಗುವಂತೆ ಮಾಡಿದ್ದೇನೆ.
Bo oto sprawię, abyś był najlichszym między narodami, i wzgardzonym miedzy ludźmi.
16 ೧೬ ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
Hardość twoja zdradzi cię, i pycha serca twego, ty, który mieszkasz w rozsiadlinach skalnych, który się trzymasz wysokich pogórków; byś też wywyższył jako orzeł gniazdo swoje, i stamtąd cię stargnę, mówi Pan.
17 ೧೭ ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
I będzie ziemia Edomska pustynią, i ktokolwiek pójdzie przez nię, zdumieje się, i świstać będzie nad wszystkiemi plagami jej.
18 ೧೮ ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.
Jako podwrócona jest Sodoma i Gomora z przyległościami swojemi, mówi Pan, tak się tam nikt nie osadzi, ani w niej syn człowieczy mieszkać będzie.
19 ೧೯ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
Oto aczkolwiek jako lew występuje, i bardziej niż nadęcie Jordanu się podnosi przeciwko przybytkowi Mocnego: wszakże go nagle wypędzę z tej ziemi, a tego, który jest obrany, przełożę nad nią: bo któż mnie jest podobny? i kto mi da rok; a kto jest tym pasterzem, któryby się postawił przeciwko mnie?
20 ೨೦ ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.
Przetoż słuchajcie rady Pańskiej, którą uradził przeciwko Edomczykom; i zamysłów jego, które umyślił przeciwko obywatelom Temańskim; zaiste żeć ich wywleką najmniejsi z tej trzody, zaiste pobudzą ich, i przybytki ich.
21 ೨೧ ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
Od grzmotu upadku ich wzruszy się ziemia; głos i krzyk ich słyszeć będą na morzu Czerwonem.
22 ೨೨ ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
Oto jako orzeł przypadnie i przyleci, a rozciągnie skrzydła swe nad Bocrą, i stanie się serce mocarzów z Edom dnia onego, jako serce niewiasty bolejącej.
23 ೨೩ ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.
Przeciwko Damaszkowi. Zawstydzi się Emat i Arfad; bo wieść złą usłyszą, i zatrwożą się, tak że się i morze wzruszy, a nie będzie się mogło uspokoić.
24 ೨೪ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
Osłabieje Damaszek, uda się do uciekania, a strach go ogarnie; uciski i boleści ogarną go, jako rodzącą.
25 ೨೫ ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!
Ale rzeką: Jakożby się nie miało ostać miasto sławne, miasto wesela mego?
26 ೨೬ ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.
Przetoż upadną młodzieńcy jego na ulicach jego, a wszyscy mężowie waleczni dnia onego wytraceni będą, mówi Pan zastępów.
27 ೨೭ ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.
I rozniecę ogień w murze Damaszku, który strawi pałace Benadadowe.
28 ೨೮ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
Przeciwko Kiedar, i przeciwko królestwom Hasor, które wytracić ma Nabuchodonozor, król Babiloński; tak mówi Pan: Wstańcie, ciągnijcie przeciwko Kiedar, a zburzcie narody wschodnie.
29 ೨೯ “ಶತ್ರುಗಳು ಅವರ ಗುಡಾರಗಳನ್ನೂ ಮತ್ತು ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ, ಒಂಟೆಗಳನ್ನೂ ತೆಗೆದುಕೊಂಡು ಹೋಗುವರು, ‘ಸುತ್ತಮುತ್ತಲು ದಿಗಿಲು’ ಎಂಬುದಾಗಿ ಅವರ ಕಡೆಗೆ ಕೂಗುವರು.”
Namioty ich i trzody ich zabiorą; opony ich ze wszystkiem naczyniem ich i wielbłądy ich wezmą ze sobą, i zawołają na nich: Strach zewsząd.
30 ೩೦ ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
Uciekajcie, rozpierzchnijcie się prędko, zstąpcie w głębokości na mieszkanie, obywatele Hasor! mówi Pan; bo zawarł radę przeciwko wam Nabuchodonozor, król Babiloński, i umyślił przeciwko wam zdradę.
31 ೩೧ ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!
Wstańcie, ciągnijcie przeciwko narodowi spokojnemu, mieszkającemu bezpiecznie, mówi Pan: nie ma ani wrót, ani zawór, samotni mieszkają.
32 ೩೨ ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
Będą zaiste wielbłądy ich podane na łup, a mnóstwo dobytku ich na korzyść; i rozproszę na wszystkie wiatry tych, którzy i w najostateczniejszych kątach mieszkają, i ze wszystkich stron złe na nich przywiodę, mówi Pan.
33 ೩೩ ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.”
I stanie się Hasor mieszkaniem smoków, pustynią aż na wieki; nie osadzi się tam nikt, ani mieszkać będzie w nim syn człowieczy.
34 ೩೪ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.
Słowo Pańskie, które się stało do Jeremijasza proroka przeciwko Elamczykom na początku królowania Sedekijasza, króla Judzkiego, mówiąc:
35 ೩೫ “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.
Tak mówi Pan zastępów: Oto ja złamię łuk Elamczyków, największą siłę ich;
36 ೩೬ ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ, ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.
A przywiodę przeciwko Elamczykom cztery wiatry ze czterech stron świata, i rozproszę ich na wszystkie one wiatry, tak, iż nie będzie narodu, do któregoby się nie dostali wygnańcy z Elam;
37 ೩೭ ಏಲಾಮ್ಯರು ತಮ್ಮ ಪ್ರಾಣಹುಡುಕುವ ಶತ್ರುಗಳಿಂದ ಕಂಗೆಡುವಂತೆ ಮಾಡುವೆನು; ನನ್ನ ರೋಷಾಗ್ನಿಯ ವಿಪತ್ತನ್ನು ಅವರ ಮೇಲೆ ಬರಮಾಡುವೆನು; ಇದು ಯೆಹೋವನ ನುಡಿ; ಅವರು ನಿರ್ಮೂಲವಾಗುವ ತನಕ ಅವರ ಹಿಂದೆ ಖಡ್ಗವನ್ನು ಅಟ್ಟುವೆನು;
I zatrwożę Elamczyków przed obliczem nieprzyjaciół ich, i przed obliczem tych, którzy szukają duszy ich; przywiodę, mówię, na nich złe, gniew popędliwości mojej, mówi Pan, a posyłać za nimi będę miecz, dokąd ich nie wyniszczę;
38 ೩೮ ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು.
I postawię stolicę moję między Elamczykami, a wytracę stamtąd króla i książąt, mówi Pan.
39 ೩೯ ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”
Wszakże stanie się, że w ostateczne dni przywrócę zaś więźniów Elam, mówi Pan.