< ಯೆರೆಮೀಯನು 50 >
1 ೧ ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.
The word that YHWH has spoken concerning Babylon, concerning the land of the Chaldeans, by the hand of Jeremiah the prophet:
2 ೨ “ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
“Declare among nations, and sound, And lift up an ensign, sound, do not hide, Say, Babylon has been captured, Bel has been put to shame, Merodach has been broken, Her grievous things have been put to shame, Her idols have been broken.
3 ೩ ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.
For a nation from the north has come up against her, It makes her land become a desolation, And there is not an inhabitant in it. From man even to beast, They have moved, they have gone.
4 ೪ ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
In those days, and at that time,” A declaration of YHWH, “Sons of Israel come in, They and sons of Judah together, Going on and weeping they go, And they seek their God YHWH.
5 ೫ ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.
They ask the way [to] Zion, Their faces [are] toward that place: Come in, and we are joined to YHWH, A perpetual covenant—never forgotten.
6 ೬ ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.
My people have been a perishing flock, Their shepherds have caused them to err, Causing them to go back [on] the mountains, They have gone from mountain to hill, They have forgotten their crouching-place.
7 ೭ ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ಸತ್ಯಸ್ವರೂಪನಾದ ಯೆಹೋವನಿಗೆ, ಹೌದು, ತಮ್ಮ ಪೂರ್ವಿಕರ ನಿರೀಕ್ಷೆಯಾದ ಯೆಹೋವನಿಗೆ ಪಾಪ ಮಾಡಿದರಲ್ಲಾ’ ಅಂದುಕೊಂಡರು.
All finding them have devoured them, And their adversaries have said: We are not guilty, Because that they sinned against YHWH, The habitation of righteousness, And the hope of their fathers—YHWH.
8 ೮ ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.
Move from the midst of Babylon, And go out from the land of the Chaldeans; And be as male goats before a flock.
9 ೯ ಇಗೋ, ನಾನು ಮಹಾ ಜನಾಂಗಗಳ ಸಮೂಹವನ್ನು ಎಬ್ಬಿಸಿ ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬೀಳಮಾಡುವೆನು; ಅವು ಬಾಬಿಲೋನಿಗೆ ವಿರುದ್ಧವಾಗಿ ವ್ಯೂಹಕಟ್ಟಿ ಅದನ್ನು ಅದರ ಸ್ಥಳದೊಳಗಿಂದ ನಿರ್ಮೂಲಮಾಡುವವು; ಅವುಗಳ ಬಾಣಗಳು ಸುಮ್ಮನೆ ಹಿಂದಿರುಗದ ಯುದ್ಧಪ್ರವೀಣರಾದ ಶೂರನಂತಿರುವವು.
For behold, I am stirring up, And am causing to come up against Babylon, An assembly of great nations from [the] land of the north, And they have set in array against her, From there she is captured, Its arrow—as a skillful hero—does not return empty,
10 ೧೦ ಕಸ್ದೀಯ ರಾಜ್ಯವು ಸೂರೆಯಾಗುವುದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳವರು, ಇದು ಯೆಹೋವನ ನುಡಿ” ಎಂಬುದೇ.
And Chaldea has been for a spoil, All her spoilers are satisfied,” A declaration of YHWH.
11 ೧೧ “ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
“Because you rejoice, because you exult, O spoilers of My inheritance, Because you increase as a heifer [at] the tender grass, And cry aloud as bulls,
12 ೧೨ ನಿಮ್ಮ ಮಾತೃಭೂಮಿಯು ಮಾನಭಂಗಕ್ಕೆ ಈಡಾಗುವುದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವುದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವುದು.
Your mother has been greatly ashamed, She who bore you has been confounded, Behold, the last of nations [is] a wilderness, A dry land, and a desert.
13 ೧೩ ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.
Because of the wrath of YHWH it is not inhabited, And it has been a desolation—all of it. Everyone passing by at Babylon is astonished, And hisses because of all her plagues.
14 ೧೪ ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ಉಳಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪ ಮಾಡಿತಲ್ಲಾ.
Set yourselves in array against Babylon all around, All you treading a bow, Shoot at her, have no pity on the arrow, For she has sinned against YHWH.
15 ೧೫ ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.
Shout against her all around, She has given forth her hand, Her foundations have fallen, Her walls have been thrown down, For it [is] the vengeance of YHWH, Be avenged of her, as she did—do to her.
16 ೧೬ ಬೀಜ ಬಿತ್ತುವವನನ್ನೂ ಮತ್ತು ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.
Cut off the sower from Babylon, And him handling the sickle in the time of harvest, Because of the oppressing sword, Each to his people—they turn, And each to his land—they flee.
17 ೧೭ ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.
Israel [is as] a scattered sheep, Lions have driven [him] away, At first, the king of Asshur devoured him, And now, at last, Nebuchadnezzar king of Babylon has broken his bone.
18 ೧೮ ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
Therefore, thus said YHWH of Hosts, God of Israel: Behold, I am seeing after the king of Babylon, And after his land, As I have seen after the king of Asshur;
19 ೧೯ ಇಸ್ರಾಯೇಲನ್ನು ಪುನಃ ಅದರ ಹುಲ್ಗಾವಲಿಗೆ ಸೇರಿಸುವೆನು; ಅದು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವುದು; ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತೃಪ್ತಿಗೊಳ್ಳುವುದು.
And I have brought Israel back to his habitation, And he has fed on Carmel and on Bashan; And his soul is satisfied on Mount Ephraim and on Gilead.
20 ೨೦ ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
In those days, and at that time,” A declaration of YHWH, “The iniquity of Israel is sought, and it is not, And the sin of Judah, and it is not found, For I am propitious to those whom I leave!
21 ೨೧ ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
Against the land of Merathaim, go up against it, And to the inhabitants of Pekod, Dry up and devote their posterity,” A declaration of YHWH, “And do according to all that I have commanded you.
22 ೨೨ ಯುದ್ಧದ ಆರ್ಭಟವೂ ಮಹಾನಾಶನದ ಶಬ್ದವೂ ದೇಶದೊಳಗೆ ಕೇಳಿಸುತ್ತವೆ.
A noise of battle [is] in the land, And of great destruction.
23 ೨೩ ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
How it has been cut and broken, The hammer of the whole earth! How Babylon has been for a desolation among nations!
24 ೨೪ ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
I have laid a snare for you, And you are also captured, O Babylon, And you have known, You have been found, and are also caught, For you have stirred yourself up against YHWH.
25 ೨೫ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
YHWH has opened His treasury, And He brings out the weapons of His indignation, For a work [is] to Lord YHWH of Hosts, In the land of the Chaldeans.
26 ೨೬ ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
Come in to her from the extremity, Open her storehouses, Raise her up as heaps, and devote her, Let her have no remnant.
27 ೨೭ ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
Slay all her cows, they go down to slaughter, Woe [is] on them, for their day has come, The time of their inspection.
28 ೨೮ ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.
A voice of fugitives and escaped ones [Is] from the land of Babylon, To declare in Zion the vengeance of our God YHWH, The vengeance of His temple.
29 ೨೯ ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
Summon archers to Babylon, all treading the bow, Encamp against her all around, Let [her] have no escape; Repay to her according to her work, According to all that she did—do to her, For she has been proud against YHWH, Against the Holy One of Israel.
30 ೩೦ ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.
Therefore her young men fall in her broad places, And all her men of war are cut off in that day,” A declaration of YHWH.
31 ೩೧ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
“Behold, I [am] against you, O pride,” A declaration of Lord YHWH of Hosts, “For your day has come, the time of your inspection.
32 ೩೨ ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”
And pride has stumbled, And he has fallen, and has none raising up, And I have kindled a fire in his cities, And it has devoured all around him.
33 ೩೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
Thus said YHWH of Hosts: The sons of Israel are oppressed, And the sons of Judah together, And all their captors have kept hold on them, They have refused to send them away.
34 ೩೪ ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
Their Redeemer [is] strong, YHWH of Hosts [is] His Name, He thoroughly pleads their cause, So as to cause the land to rest, And He has given trouble to the inhabitants of Babylon.
35 ೩೫ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!
A sword [is] for the Chaldeans,” A declaration of YHWH, “And it [is] on the inhabitants of Babylon, And on her heads, and on her wise men;
36 ೩೬ ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
A sword [is] on the princes, And they have become foolish; A sword [is] on her mighty ones, And they have been broken down;
37 ೩೭ ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
A sword [is] on his horses and on his chariot, And on all the rabble who [are] in her midst, And they have become women; A sword [is] on her treasuries, And they have been spoiled;
38 ೩೮ ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;
A sword [is] on her waters, and they have been dried up, For it [is] a land of carved images, And they boast themselves in idols.
39 ೩೯ ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು; ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
Therefore desert-dwellers dwell with howlers, Indeed, daughters of the ostrich have dwelt in her, And it is not inhabited anymore forever, Nor dwelt in from generation to generation.
40 ೪೦ ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
As the overthrow by God of Sodom, And of Gomorrah, and of its neighbors,” A declaration of YHWH, “None dwell there, Nor does a son of man sojourn in her.
41 ೪೧ ಆಹಾ, ಉತ್ತರ ದಿಕ್ಕಿನಿಂದ ಒಂದು ಜನಾಂಗವು ಬರುತ್ತೆ, ಮಹಾ ಜನವೂ, ಬಹು ಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.
Behold, a people has come from the north, Even a great nation, And many kings are stirred up from the sides of the earth.
42 ೪೨ ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
They seize bow and javelin, They [are] cruel, and they have no mercy, Their voice sounds as a sea, and they ride on horses, Set in array as a man for battle, Against you, O daughter of Babylon.
43 ೪೩ ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.
The king of Babylon has heard their report, And his hands have been feeble, Distress has seized him; pain as a travailing woman.
44 ೪೪ ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?
Behold, he comes up as a lion, Because of the rising of the Jordan, To the enduring habitation, But I cause to rest, I cause them to run from off her. And who is chosen? I lay a charge on her, For who [is] like Me? And who convenes Me? And who [is] this shepherd who stands before Me?
45 ೪೫ ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
Therefore, hear the counsel of YHWH, That He counseled concerning Babylon, And His plans that He has devised Concerning the land of the Chaldeans; Do little ones of the flock not drag them out, Does He not make the habitation desolate over them?
46 ೪೬ ಬಾಬೆಲು ಶತ್ರುವಶವಾಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುತ್ತದೆ, ಅದರ ಮೊರೆಯು ಜನಾಂಗಗಳಲ್ಲಿ ಕೇಳಿಸುತ್ತದೆ.
From the sound of Babylon having been captured, The earth has been shaken, And a cry has been heard among nations!”