< ಯೆರೆಮೀಯನು 51 >
1 ೧ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.
“Yahweh says this: See, I am about to stir up a wind of destruction against Babylon and against those who live in Leb Kamai.
2 ೨ ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು, ಅವರು ಅದನ್ನು ತೂರುವರು. ಆ ದೇಶವನ್ನು ಬಟ್ಟಬರಿದು ಮಾಡುವರು; ನಿಯಮಿತ ವಿಪತ್ಕಾಲದಲ್ಲಿ ಅದನ್ನು ಮುತ್ತುವರಷ್ಟೆ.
I will send foreigners to Babylon. They will scatter her and devastate her land, for they will come against her from all around on the day of disaster.
3 ೩ ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
Do not let the archers bend their bows; do not let them put on armor. Do not spare her young men; set her whole army apart for destruction.
4 ೪ ಕಸ್ದೀಯರು ತಮ್ಮ ದೇಶದಲ್ಲಿ ಹತರಾಗಿ ಬೀಳುವರು, ಬಾಬೆಲಿನ ಬೀದಿಗಳಲ್ಲಿ ಇರಿಯಲ್ಪಟ್ಟು ಮಣ್ಣುಪಾಲಾಗುವರು.
For the wounded people will fall in the land of the Chaldeans; those who are killed will fall in her streets.
5 ೫ ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.
For Israel and Judah are not forsaken by their God, by Yahweh of hosts, although their land is filled with offenses committed against the Holy One of Israel.
6 ೬ ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
Flee from the midst of Babylon; let each man save himself. Do not perish in her iniquity. For it is the time of Yahweh's vengeance. He will repay all of it to her.
7 ೭ ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.
Babylon was a golden cup in the hand of Yahweh that made all the world drunk; nations drank her wine and became insane.
8 ೮ ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಗೋಳಾಡಿರಿ; ಅದರ ನೋವನ್ನು ನೀಗಿಸುವುದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.
Babylon will fall suddenly and be destroyed. Wail for her! Give her medicine for her pain; perhaps she can be healed.
9 ೯ ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.
'We wished to heal Babylon, but she is not healed. Let us all leave her and go away, to our own land. For her guilt reaches up to the heavens; it is piled up to the clouds.
10 ೧೦ ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!
Yahweh has declared our innocence. Come, let us tell in Zion the deeds of Yahweh our God.'
11 ೧೧ ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
Sharpen the arrows and take up the shields. Yahweh is stirring up the spirit of the king of the Medes in a plan to destroy Babylon. This is for Yahweh's vengeance, vengeance for the destruction of his temple.
12 ೧೨ ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.
Lift up a banner over Babylon's walls; make the watch strong; set up watchmen; prepare the ambushes; for the LORD will do what he has said concerning the inhabitants of Babylon.
13 ೧೩ ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
You people who live by many streams of water, you people who are rich with treasures, your end has come. The thread of your life is now cut short.
14 ೧೪ ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
Yahweh of hosts has sworn by his own life, 'I will fill you with men, like a swarm of locusts, and they will raise a battle cry against you.'
15 ೧೫ ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.
He has made the earth by his power; he set in place the world by his wisdom. By his understanding he stretched out the heavens.
16 ೧೬ ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
When he thunders, there is the roar of waters in the heavens, for he brings up the mist from the ends of the earth. He makes lightning for rain and sends out wind from his storehouses.
17 ೧೭ ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Every man has become ignorant, without knowledge. Every metalworker is put to shame by his idols. For his cast images are frauds, and there is no life in them.
18 ೧೮ ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
They are useless, the work of mockers; they will perish at the time of their punishment.
19 ೧೯ ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.
But God, the portion of Jacob, is not like these, for he is the molder of all things. Israel is the tribe of his inheritance; Yahweh of hosts is his name.
20 ೨೦ ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
You are my war hammer, my weapon for battle. With you I will smash nations and destroy kingdoms.
21 ೨೧ ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;
With you I will smash horses and their riders; with you I will smash chariots and their drivers.
22 ೨೨ ನಿನ್ನಿಂದ ಸ್ತ್ರೀಪುರುಷರನ್ನು ನಾಶಮಾಡುತ್ತೇನೆ; ನಿನ್ನಿಂದ ಬಾಲಕರನ್ನು ಮತ್ತು ವೃದ್ಧರನ್ನು ನಾಶ ಮಾಡುತ್ತೇನೆ; ನಿನ್ನಿಂದ ಯುವತೀ ಮತ್ತು ಯುವಕರನ್ನು ನಾಶಮಾಡುವೆನು;
With you I will smash each man and woman; with you I will smash the old and the young. With you I will smash the young men and the virgin girls.
23 ೨೩ ನಿನ್ನಿಂದ ಕುರುಬನನ್ನೂ ಹಾಗು ಹಿಂಡನ್ನೂ ನಾಶಮಾಡುತ್ತೇನೆ; ನಿನ್ನಿಂದ ರೈತನನ್ನೂ ಹಾಗೂ ನೊಗದ ಎತ್ತುಗಳನ್ನೂ ನಾಶಮಾಡುವೆನು; ನಿನ್ನಿಂದ ದೇಶಾಧಿಪತಿಗಳನ್ನೂ ಮತ್ತು ನಾಡ ಒಡೆಯರನ್ನೂ ನಾಶಮಾಡುವೆನು;
With you I will smash the shepherds and their flocks; with you I will smash the plowmen and their teams. With you I will smash the governors and officials.
24 ೨೪ ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.
For in your sight I will pay Babylon and all the inhabitants of Chaldea for all of the evil that they did in Zion—this is Yahweh's declaration.
25 ೨೫ ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.
See, I am against you, mountain of destruction—this is Yahweh's declaration—which destroys the whole earth. I will stretch out my hand against you, and roll you down from the cliffs, and make you a burned-out mountain.
26 ೨೬ ಮೂಲೆಗಲ್ಲಿಗಾಗಲಿ ಅಥವಾ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶಕ್ಕೆ ಗುರಿಯಾಗುವಿ, ಇದು ಯೆಹೋವನ ನುಡಿ” ಎಂಬುದೇ.
So they will not take from you any stone to construct a building's corner or foundation; for you will become an everlasting devastation—this is Yahweh's declaration.
27 ೨೭ “ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
Lift up a banner over the earth. Blow the trumpet over the nations. Call the nations to attack her: Ararat, Minni, and Ashkenaz. Appoint a commander to attack her; bring up horses like swarming locusts.
28 ೨೮ ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.
Prepare the nations to attack her: The kings of the Medes and his governors, all of his officials and all the lands under his rule.
29 ೨೯ ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.
For the land will shake and be in anguish, since Yahweh's plans continue against Babylon, to make the land of Babylon a wasteland where there is no inhabitant.
30 ೩೦ ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.
The soldiers in Babylon have stopped fighting; they stay in their strongholds. Their strength has failed; they have become women—her homes are on fire, the bars of her gates are broken.
31 ೩೧ ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,
A messenger runs to proclaim to another messenger, and a runner tells another runner to report to the king of Babylon that his city has been taken from end to end.
32 ೩೨ ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
So the fords over the river are seized; the enemy is burning the reed marshes, and Babylon's fighting men are confused.
33 ೩೩ ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.
For Yahweh of hosts, God of Israel, says this: The daughter of Babylon is like a threshing floor. It is time to trample her down. In a little while the time of harvest will come to her.
34 ೩೪ ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
'Nebuchadnezzar king of Babylon has devoured me, he has driven me into confusion and has made me an empty pot. Like a monster he has swallowed me, he has filled his stomach with my delicious foods, and then he has spit me out.'
35 ೩೫ ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬಿಲೋನಿಗೆ ತಟ್ಟಲಿ’ ಎಂದು ಚೀಯೋನಿನವರು ಅನ್ನುತ್ತಾರೆ; ‘ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ’ ಎಂದು ಯೆರೂಸಲೇಮಿನವರು ಹೇಳುತ್ತಾರೆ.”
The one who lives in Zion will say, 'May the violence done to me and my flesh be on Babylon.' Jerusalem will say, 'May my blood be on the inhabitants of Chaldea.'
36 ೩೬ ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
Therefore Yahweh says this: See, I am about to plead your case and bring about vengeance for you. For I will dry up Babylon's waters and make her springs run dry.
37 ೩೭ ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು; ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
Babylon will become heaps of rubble, a den of jackals, a horror, an object of hissing, where there are no inhabitants.
38 ೩೮ ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
The Babylonians will roar together like young lions. They will growl like lion cubs.
39 ೩೯ ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
When they become hot with greed, I will make a feast for them; I will make them drunk so they become happy, and then sleep an unending sleep and not wake up—this is Yahweh's declaration—
40 ೪೦ “ನಾನು ಅವರನ್ನು ಕುರಿ, ಟಗರು ಮತ್ತು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.
I will send them down like lambs to the slaughter, like rams with male goats.
41 ೪೧ ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
How Babylon has been captured! So the praise of all the earth is seized. How Babylon has become a ruined place among the nations.
42 ೪೨ ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.
The sea has come up over Babylon! She is covered with its roaring waves.
43 ೪೩ ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.
Her cities have become a desolation, a dry land and a wilderness, a land that no one inhabits, and no human being passes through.
44 ೪೪ ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
So I will punish Bel in Babylon; I will bring out from his mouth what he swallowed, and the nations will no longer flow to him with their offerings. The walls of Babylon will fall.
45 ೪೫ ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.
Go out from her midst, my people. Let each of you save his own life from the fury of my wrath.
46 ೪೬ ನಿಮ್ಮ ಎದೆಯು ಕುಂದದಿರಲಿ, ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಯು ನಿಮ್ಮನ್ನು ಹೆದರಿಸದಿರಲಿ; ಒಂದು ವರ್ಷ ಒಂದು ಸುದ್ದಿಯು, ಮತ್ತೊಂದು ವರ್ಷ ಮತ್ತೊಂದು ಸುದ್ದಿಯು ಹರಡುತ್ತಿರುವವು; ಬಲಾತ್ಕಾರವು ದೇಶದಲ್ಲಿ ಪ್ರಬಲವಾಗುವುದು, ಅಧಿಕಾರಿಯು ಅಧಿಕಾರಿಗೆ ವಿರೋಧಿಯಾಗುವನು.
Do not let your hearts be timid or fear the news that is heard in the land, for the news will come one year. After it in the next year there will be news, and violence will be in the land. Ruler will be against ruler.
47 ೪೭ ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
Therefore, see, days are coming when I will punish the carved idols of Babylon. All of her land will be ashamed, and all of her slaughtered ones will fall in her midst.
48 ೪೮ ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”
Then the heavens and the earth, and all that is in them will rejoice over Babylon. For destroyers will come for her from the north—this is Yahweh's declaration.
49 ೪೯ “ಹತರಾದ ಇಸ್ರಾಯೇಲರೇ, ಬಾಬೆಲಿನ ಹಿತಕ್ಕಾಗಿ ಲೋಕದಲ್ಲೆಲ್ಲಾ ಬಹು ಜನರು ಹೇಗೆ ಹತರಾದರೋ, ಹಾಗೆಯೇ ಬಾಬೆಲೂ ಹತವಾಗುವುದು.
As Babylon has made the killed of Israel fall, so the killed of all her land will fall in Babylon.
50 ೫೦ ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ.
Survivors of the sword, go away! Do not stay still. Call Yahweh to mind from far away; let Jerusalem come to mind.
51 ೫೧ ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?
We are ashamed, for we have heard insults; reproach has covered our faces, for foreigners have entered the holy places of Yahweh's house.
52 ೫೨ ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.
Therefore, see, days are coming—this is Yahweh's declaration—when I will punish her carved idols, and the wounded people will groan in all of her land.
53 ೫೩ ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”
For even if Babylon went up to the heavens or fortified her highest fortresses, destroyers would come from me to her—this is Yahweh's declaration.
54 ೫೪ “ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!
A shout of distress came from Babylon, a great collapse from the land of the Chaldeans.
55 ೫೫ ಯೆಹೋವನು ಬಾಬೆಲನ್ನು ಹಾಳುಮಾಡುತ್ತಿದ್ದಾನಲ್ಲಾ, ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತಾನೆ; ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ತರಂಗತರಂಗವಾಗಿ ಬಂದ ಶತ್ರುಗಳು ಘೋಷಿಸುತ್ತಾರೆ, ಕೂಗಿ ಆರ್ಭಟಿಸುತ್ತಾರೆ;
For Yahweh is destroying Babylon. He is causing her loud voice to perish. Their enemies roar like the waves of many waters; their noise becomes very strong.
56 ೫೬ ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.
For the destroyers have come against her—against Babylon!—and her warriors have been captured. Their bows are broken, for Yahweh is the God of vengeance; he will surely carry out this repayment.
57 ೫೭ ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”
For I will make her princes, her sages, her officials, and her soldiers drunk, and they will sleep in an unending sleep and never wake up —this is the King's declaration: Yahweh of hosts is his name.
58 ೫೮ ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.
Yahweh of hosts says this: The thick walls of Babylon will be completely demolished, and her high gates will be burned. Then the peoples coming to her aid will labor uselessly; everything that the nations try to do for her will be burned up.”
59 ೫೯ ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)
This is the word that Jeremiah the prophet commanded Seraiah son of Neriah son of Mahseiah when he went with Zedekiah king of Judah to Babylon in the fourth year of his reign. Now Seraiah was a chief officer.
60 ೬೦ ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.
For Jeremiah had written in a scroll about all the disaster that was going to come on Babylon—all these words that were written about Babylon.
61 ೬೧ ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,
Jeremiah said to Seraiah, “When you go to Babylon, then you will see and you will read these words aloud.
62 ೬೨ ‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.
Then you will say, 'Yahweh, you yourself have declared that you would destroy this place, and that no man or animal will live in it, and it will be desolate forever.'
63 ೬೩ ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ, ಯೂಫ್ರೆಟಿಸ್ ನದಿಯ ಮಧ್ಯದೊಳಗೆ ಹಾಕಿ,
Then when you have finished reading this scroll, tie a stone to it and throw it into the middle of the Euphrates.
64 ೬೪ ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
Say, 'Babylon will sink like this. It will not arise because of the disaster that I am sending against it, and they will fall.'” Jeremiah's words end here.