< ಯೆರೆಮೀಯನು 52 >
1 ೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಇವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.
Einundzwanzig Jahre war Zedekia alt, als er König ward und elf Jahre regierte er zu Jerusalem. Seine Mutter aber hieß Hamutal, die tochter jeremias, und stammte aus Libna.
2 ೨ ಇವನು ಯೆಹೋಯಾಕೀಮನಂತೆ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
Und er that, was Jahwe mißfiel, ganz wie Jojakim gethan hatte.
3 ೩ ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.
denn wegen des Zorns Jahwes erging es über Jerusalem und Juda, bis er sie aus seiner gegenwart verstoßen hatte. Zedekia aber ward abtrünnig vom Könige von Babel.
4 ೪ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,
Da, im neunten jahre seines königtums, im zehnten Monat, am zehnten des Monats, rückte Nebukadrezar, der König von Babel, mit seiner gesamten Heeresmacht gegen Jerusalem an, und sie belagerten sie und errichteten rings um sie her einen Belagerungswall.
5 ೫ ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Also Also gereit die Stadt in Belagerung bis zum elften Jahre des Königs Zedekia.
6 ೬ ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,
Im vierten Monat, am neunten des Monats, als die Hungersnot in der Stadt überhand genommen und die Landbevölkerung nichts mehr zu essen hatte,
7 ೭ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
da wurde Bresche in die Stadt gelegt; und der König und alle kriegsleute suchten zu entfliehen und verließen des Nachts die Stadt durch das Thor zwischen den beiden Mauern, das am Königsgarten liegt, während die Chaldäer rings um die Stadt lagen, und zogen weiter in der Richtung nach Araba.
8 ೮ ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.
Aber die truppen der Chaldäer jagten dem Könige nach und sie holten den Zedekia in den Steppen von Jericho ein, nachdem ihn alle seine Truppen verlassen und sich zerstreut hatten.
9 ೯ ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
Und sie ergriffen den König und führten ihn zum Könige von Babel nach Ribla. in der Landschaft Hamath: der sprach ihm das Urteil.
10 ೧೦ ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.
Und der König von Babel ließ die Söhne zedekias vor seinen Augen schlachten; ebenso ließ er alle Obersten Judas in Ribla schlachten.
11 ೧೧ ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.
Zedekia aber ließ er blenden und in Ketten legen. Sodann ließ ihn der König von Babel nach babel bringen und bis an seinen Todestag ins Gefängnis setzen.
12 ೧೨ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
Im fünften Monat aber, am zehnten des Monats - das ist das neunzehnte Jahr des Königtums Nebukadrezars, des Königs von Babel -, rückte Nebusar-Adan, der Oberste der Leibwächter, des Königs von Babel vertrauter Diener, nach Jerusalem
13 ೧೩ ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
und verbrannte den Tempel Jahwes und den königlichen Palast und alle Häuser Jerusalems, und jedes Haus eines Großen verbrannte er mit Feuer.
14 ೧೪ ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
Alle Mauern rings um Jerusalem aber wurden von sämtlichen Truppen der Chaldäer, die bei dem Obersten der Leibwächter waren, niedergerissen.
15 ೧೫ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.
Und den Rest des Volks, die in der Stadt Übriggebliebenen, und die Überläufer, die zum Könige von Babel übergelaufen waren, und den rest der Handwerker führte Nebusar-Adan, der Oberste der Leibwächter, nach Babel.
16 ೧೬ ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.
Von den geringen Leuten im Land aber ließ Nebusar-Adan, der Oberste der Leibwächter, etliche als Winzer und Ackerleute zurück.
17 ೧೭ ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
Aber die ehernen Säulen, welche am Tempel Jahwes waren, zerbrachen die Chaldäer und nahmen das gesamte Erz von ihnen mit nach Babel.
18 ೧೮ ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
Und die Töpfe, Schaufeln, Messer, Sprengschalen, Schalen und alle die ehernen Geräte, mit denen man den Dienst verrichtete, nahmen sie weg.
19 ೧೯ ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.
Auch die becken, die Pfannen und die Sprengschalen, dioe Töpfe, die Leuchter, die Schalen und die Becher, was nur von Gold und Silber war, nahm der Oberste der Leibwächter weg.
20 ೨೦ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
Die Säulen, zwei an Zahl, das eine Meer und die Gestühle, die der König Salomo für den Tempel Jahwes angefertigt hatte, - das Erz von ihnen war nicht zu wägen.
21 ೨೧ ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು.
Was aber die Säulen betrifft, so betrug die Höhe der einen Säule achtzehn Ellen und ein Faden von zwölf Ellen umspannte sie; sie war aber vier Finger dick, inwendig hohl.
22 ೨೨ ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
Oben auf ihr aber befand sich ein Knauf von Erz, und die höhe des Knaufs betrug fünf Ellen, und ein Gitter und Granatäpfel waren ringsum an dem Knauf, alles von Erz; und ebensolche hatte die zweite Säule.
23 ೨೩ ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
Es waren aber der Granatäpfel sechsundneunzig luftwärts; aller Granatäpfel waren hundert ringsum an dem Gitter.
24 ೨೪ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,
Und der Oberst der Leibwächter nahm den Oberpriester Seraja und den zweithöchsten Priester Zephanja und die drei Schwellenhüter.
25 ೨೫ ಸೈನ್ಯಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುವ ಕಂಚುಕಿ, ಪಟ್ಟಣದಲ್ಲಿ ಉಳಿದು ಅರಸನಿಗೆ ಆಪ್ತರಾಗಿದ್ದ ಏಳು ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ರೈತರು ಇದ್ದರು.
Und aus der Stadt nahm er einen Kämmerer, welcher befehlshaber über die Kriegsleute war, und sieben Männer aus der ständigen Umgebung des Königs, die in der Stadt vorgefunden wurden, und den Schreiber des Feldhauptmanns, der die Landbevölkerung zum Kriegsdienste aufbot, und sechzig Mann von der Landbevölkerung, die im Bereiche der Stadt vorgefunden wurden.
26 ೨೬ ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
Die also nahm Nebusar-Adan, der Oberste der Leibwächter, und brachte sie zum König von Babel nach Ribla.
27 ೨೭ ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.
Der könig von Babel aber ließ sie zu Ribla in der Landschaft Hamath hinrichten. Also ward Juda von seinem Grund und Boden hinweggeführt.
28 ೨೮ ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
So viel war des Volks, welches Nebukadrezar hinwegführte: Im siebenten Jahre 3023 Judäer;
29 ೨೯ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಎಂಟುನೂರ ಮೂವತ್ತೆರಡು ಜನರನ್ನು ಯೆರೂಸಲೇಮಿನಿಂದ ಸೆರೆಯೊಯ್ದನು.
im achtzehnten Jahre Nebukadrezars: aus jerusalem 832 Seelen;
30 ೩೦ ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
im dreiundzwanzigsten Jahre Nebukadrezars führte Nebusar-Adan, der Oberste der Leibwächter, von den Judäern 745 Seelen hinweg: insgesamt waren es 4600 Seelen.
31 ೩೧ ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.
Und im siebenunddreißigsten jahre nach der Wegführung Jojachins, des Königs von Juda, im zwölften Monat, am fünfundzwanzigsten des Monats, begnadigte Ewil-Merodach, der König von Babel, - in dem Jahr, in welchem er König ward, - Jojachin, den König von Juda, und befreite ihn aus dem Kerker.
32 ೩೨ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.
Und er redete freundlich mit ihm und setzte seinen Stuhl über die Stühle der übrigen Könige, die bei ihm in Babel waren.
33 ೩೩ ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.
Und er legte seine Gefangenenkleider ab und speiste beständig in seiner Gegenwart, solange er lebte.
34 ೩೪ ಅವನು ಸಾಯುವ ತನಕ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಬಾಬೆಲಿನ ಅರಸನಿಂದಲೇ ದೊರಕುತ್ತಿದ್ದವು.
Sein Unterhalt aber - stetiger Unterhalt - wurde ihm, so viel er täglich bedurfte, bis an seinen Todestag von seiten des Königs von Babel gewährt.