< ಯೆರೆಮೀಯನು 6 >
1 ೧ “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
“ওহে বিন্যামীন গোষ্ঠীর লোকেরা, তোমরা সুরক্ষার জন্য পলায়ন করো! তোমরা জেরুশালেম থেকে পালিয়ে যাও! তকোয় নগরে তূরী বাজাও! বেথ-হক্কেরম থেকে সংকেত দেখাও! কারণ বিপর্যয় ও বিধ্বংসের জন্য উত্তর দিক থেকে আসছে এক ভয়ংকর ত্রাস।
2 ೨ ಚೀಯೋನ್ ನಗರಿಯು ಸೊಂಪಾದ ಹಸುರುಗಾವಲಿಗೆ ಸಮಾನವಾಗಿ ನನಗೆ ಕಾಣುತ್ತದೆ.
কমনীয় ও সুন্দরী সিয়োন-কন্যাকে আমি ধ্বংস করব।
3 ೩ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು.
মেষপালকেরা তাদের পশুপাল নিয়ে তার বিরুদ্ধে আসবে; তারা তার চারপাশে তাদের তাঁবু স্থাপন করবে, প্রত্যেকে নিজের নিজের অংশে তাদের পশুপাল চরাবে।”
4 ೪ ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.
“তার বিরুদ্ধে যুদ্ধের জন্য প্রস্তুত হও। ওঠো, আমরা মধ্যাহ্নেই তাদের আক্রমণ করি। কিন্তু হায়, দিনের আলো ম্লান হয়ে আসছে, আর সন্ধ্যের ছায়া দীর্ঘতর হচ্ছে।
5 ೫ ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.
তাই ওঠো, চলো আমরা রাত্রিবেলা আক্রমণ করি এবং তার দুর্গগুলি ধ্বংস করে দিই!”
6 ೬ ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.
বাহিনীগণের সদাপ্রভু এই কথা বলেন: “সব গাছ কেটে ফেলো আর জেরুশালেমের বিরুদ্ধে অবরোধ সৃষ্টি করো। এই নগরকে অবশ্য শাস্তি দিতে হবে; এরা উপদ্রবে পূর্ণ হয়েছে।
7 ೭ ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.
যেভাবে কোনো উৎস বেগে জল নির্গত করে, তেমনই সে ক্রমাগত দুষ্টতা বের করে থাকে। তার মধ্যে হিংস্রতা ও ধ্বংসের বাক্য প্রতিধ্বনিত হয়, তার রোগব্যাধি ও ক্ষতগুলি সবসময়ই আমার সামনে থাকে।
8 ೮ ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
ওহে জেরুশালেম, সতর্ক হও, নইলে আমি তোমার কাছ থেকে ফিরে যাব এবং তোমার ভূমিকে উৎসন্ন করব, যেন কেউ এর মধ্যে বসবাস করতে না পারে।”
9 ೯ ಸೇನಾಧೀಶ್ವರನಾದ ಯೆಹೋವನು, ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯಬೇಕು; ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನೀನು ನಿನ್ನ ಕೈಯನ್ನು ತಿರುಗಿ ರೆಂಬೆಗಳಲ್ಲಿ ಹಾಕು ಎಂದು ಹೇಳುತ್ತಾನೆ.
বাহিনীগণের সদাপ্রভু এই কথা বলেন: “যেভাবে আঙুর খুঁটে খুঁটে চয়ন করা হয়, ইস্রায়েলের অবশিষ্ট লোকদেরও তারা তেমনই চয়ন করবে; আঙুর শাখাগুলিতে তোমরা আবার হাত দাও, যেন অবশিষ্ট আঙুরগুলিও তুলে নেওয়া যায়।”
10 ೧೦ ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.
কার সঙ্গে আমি কথা বলব, কাকে সতর্কবাক্য দেব? কে শুনবে আমার কথা? তাদের কান বন্ধ হয়েছে তাই তারা পায় না শুনতে। সদাপ্রভুর বাক্য তাদের কাছে আপত্তিকর; তারা তাতে কোনও আনন্দ পায় না।
11 ೧೧ ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.
কিন্তু আমি সদাপ্রভুর ক্রোধে পূর্ণ, আমি আর তা ধরে রাখতে পারছি না। “রাস্তায় জড়ো হওয়া ছেলেমেয়েদের উপরে এবং একসঙ্গে একত্র হওয়া যুবকদের উপরে তা ঢেলে দাও। ঢেলে দাও তা স্বামী-স্ত্রীর উপরে এবং তাদের উপরে, যারা বৃদ্ধ ও বয়সের ভারে জর্জরিত।
12 ೧೨ ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.
তাদের খেতের জমি ও স্ত্রীদের সঙ্গে তাদের বসতবাড়িগুলিও আমি অন্যদের হাতে তুলে দেব, যখন আমি আমার হাত প্রসারিত করব, তাদের বিরুদ্ধে, যারা দেশের মধ্যে করবে বসবাস,” সদাপ্রভু এই কথা বলেন।
13 ೧೩ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
“নগণ্যতম জন থেকে মহান ব্যক্তি পর্যন্ত, সকলেই লোভ-লালসায় লিপ্ত; ভাববাদী ও যাজকেরা সব এক রকম, তারা সকলেই প্রতারণার অনুশীলন করে।
14 ೧೪ ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
তারা আমার প্রজাদের ক্ষত এভাবে নিরাময় করে, যেন তা একটুও ক্ষতিকর নয়। যখন কোনো শান্তি নেই, তখন ‘শান্তি, শান্তি,’ বলে তারা আশ্বাস দেয়।
15 ೧೫ ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
তাদের এই জঘন্য আচরণের জন্য তারা কি লজ্জিত? না, তাদের কোনও লজ্জা নেই; লজ্জারুণ হতে তারা জানেই না। তাই, পতিতদের মধ্যে তারাও পতিত হবে; আমি যখন তাদের শাস্তি দেব, তখন তাদেরও ভূপাতিত করব,” সদাপ্রভু এই কথা বলেন।
16 ೧೬ ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
সদাপ্রভু এই কথা বলেন: “তোমরা চৌমাথায় গিয়ে দাঁড়াও ও তাকিয়ে দেখো; পুরোনো পথের কথা জিজ্ঞাসা করো, জেনে নাও, উৎকৃষ্ট পথ কোন দিকে এবং সেই পথে চলো, তাহলে তোমরা নিজের নিজের প্রাণের জন্য বিশ্রাম পাবে। কিন্তু তোমরা বললে, ‘আমরা এই পথ মাড়াব না।’
17 ೧೭ ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.
আমি তোমাদের উপরে প্রহরী নিযুক্ত করে বললাম, ‘তোমরা তূরীর ধ্বনি শোনো!’ কিন্তু তোমরা বললে, ‘আমরা শুনব না।’
18 ೧೮ ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!
সেই কারণে ওহে জাতিবৃন্দের লোকেরা, তোমরা শোনো, সাক্ষীরা, তোমরা লক্ষ্য করো তাদের প্রতি কী ঘটবে।
19 ೧೯ ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.
ও পৃথিবী শোনো, আমি এই জাতির উপরে বিপর্যয় নামিয়ে আনছি, তা হবে তাদের পরিকল্পনার ফল, কারণ তারা আমার কথা শোনেনি এবং তারা আমার বিধান অগ্রাহ্য করেছে।
20 ೨೦ ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.
আমার কাছে শিবা দেশ থেকে আনা ধূপ বা দূরবর্তী দেশ থেকে আনা মিষ্টি বচ উৎসর্গ করা অর্থহীন। আমি তোমাদের হোমবলি সব গ্রাহ্য করব না, তোমাদের বলিদানগুলি আমাকে সন্তুষ্ট করে না।”
21 ೨೧ ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.
সেই কারণে সদাপ্রভু এই কথা বলেন: “আমি এই লোকেদের বিরুদ্ধে প্রতিবন্ধকতা স্থাপন করব। বাবারা ও পুত্রেরা একসঙ্গে তাতে হোঁচট খাবে; প্রতিবেশী ও বন্ধুবান্ধবেরা ধ্বংস হয়ে যাবে।”
22 ೨೨ “ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.
সদাপ্রভু এই কথা বলেন: “দেখো, উত্তরের দেশ থেকে এক সৈন্যদল আসছে; পৃথিবীর প্রান্তসীমা থেকে এক মহাজাতিকে উত্তেজিত করা হয়েছে।
23 ೨೩ ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
তাদের হাতে আছে ধনুক ও বর্শা; তারা নিষ্ঠুর, মায়ামমতা প্রদর্শন করে না। তারা ঘোড়ায় চড়লে সমুদ্রগর্জনের মতো শব্দ শোনায়; সিয়োন-কন্যা, তোমাকে আক্রমণ করার জন্য তারা যুদ্ধের সাজ পরে আসছে।”
24 ೨೪ ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.
আমরা তাদের বিষয়ে সংবাদ শুনেছি, আমাদের হাত যেন অবশ হয়ে ঝুলে পড়ছে। প্রসববেদনাগ্রস্ত নারীর মতো মনস্তাপে আমরা জর্জরিত হয়েছি।
25 ೨೫ ಊರ ಹೊರಗೆ ಹೋಗಬೇಡಿರಿ, ದಾರಿಯಲ್ಲಿ ನಡೆಯಬೇಡಿರಿ; ಶತ್ರುವಿನ ಕತ್ತಿಯಿದೆ, ಸುತ್ತುಮುತ್ತಲು ದಿಗಿಲು.
তোমরা মাঠে যেয়ো না, বা রাস্তায়ও হাঁটাচলা কোরো না, কারণ শত্রুর কাছে অস্ত্র আছে, আর চতুর্দিকেই আছে আতঙ্কের পরিবেশ।
26 ೨೬ ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
আমার প্রজারা, চটের পোশাক পরে নাও এবং ছাইয়ের মধ্যে গড়াগড়ি দাও; একমাত্র পুত্রবিয়োগের মতো শোক ও তিক্ত বিলাপ করো, কারণ ধ্বংসকারী হঠাৎই আমাদের উপরে এসে পড়বে।
27 ೨೭ ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.
“আমি তোমাকে ধাতু যাচাইকারীর পরীক্ষক এবং আমার প্রজাদের আকরিক করেছি, যেন তুমি তাদের পথসকল নিরীক্ষণ ও পরীক্ষা করতে পারো।
28 ೨೮ ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.
তারা হল কঠিন হৃদয় বিশিষ্ট বিদ্রোহী, তারা কেবলই নিন্দা করে বেড়ায়। তারা পিতল আর লোহার মতো; তারা সবাই ভ্রষ্টাচার করে।
29 ೨೯ ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
হাপরগুলি ভীষণভাবে বাতাস দিচ্ছে, যেন আগুনে সীসা গলে যায়, কিন্তু এই পরিশোধন প্রক্রিয়া বিফল হয়, দুষ্টদের শোধন হয় না।
30 ೩೦ ಯೆಹೋವನಾದ ನಾನು ಇವರನ್ನು ನೂಕಿಬಿಟ್ಟಿದ್ದರಿಂದ ಇವರು ‘ಕಂದು ಬೆಳ್ಳಿ’ ಎನಿಸಿಕೊಳ್ಳುವರು” ಎಂದು ಹೇಳಿದ್ದಾನೆ.
তাদের বাতিল করা রুপো বলা হয়, কারণ সদাপ্রভু তাদের বাতিল গণ্য করেছেন।”