< ಯೆರೆಮೀಯನು 7 >
1 ೧ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
১যিহোৱাৰ পৰা যিৰিমিয়ালৈ এই বাক্য আহিল আৰু ক’লে:
2 ೨ “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
২বোলে, তুমি যিহোৱাৰ গৃহৰ বাহিৰৰ দুৱাৰ মুখত থিয় হৈ, তাত এই বাক্য প্ৰচাৰ কৰা আৰু কোৱা, ‘যিহোৱাক প্ৰণিপাত কৰিবলৈ এই দুৱাৰবোৰত সোমোৱা হে যিহূদাৰ লোকসকল, যিহোৱাৰ বাক্য শুনা।
3 ೩ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.
৩ইস্ৰায়েলৰ ঈশ্বৰ বাহিনীসকলৰ যিহোৱাই এই কথা কৈছে: তোমালোকে তোমালোকৰ আচাৰ-ব্যৱহাৰ আৰু কাৰ্য শুধৰোৱা; তেতিয়া মই তোমালোকক এই ঠাইত বাস কৰোৱাম।
4 ೪ ‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
৪এইবোৰ “যিহোৱাৰ মন্দিৰ! যিহোৱাৰ মন্দিৰ! যিহোৱাৰ মন্দিৰ!” এই বুলি কোৱা কথাত তোমালোকে বিশ্বাস নকৰিবা।
5 ೫ ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.
৫কিয়নো যদি তোমালোকে নিজ নিজ আচাৰ-ব্যৱহাৰ আৰু কাৰ্য সম্পূৰ্ণকৈ শুধৰোৱা, যদি কোনো মানুহ আৰু তাৰ ওচৰ-চুবুৰীয়াৰ মাজত তোমালোকে ন্যায় বিচাৰ সম্পূৰ্ণকৈ সিদ্ধ কৰা,
6 ೬ ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,
৬বিদেশী, মাউৰা আৰু বিধৱাক উপদ্ৰৱ নকৰা, আৰু এই ঠাইত নিৰ্দ্দোষীৰ ৰক্তপাত নকৰা, নাইবা তোমালোকৰ অপৰাধৰ কাৰণে ইতৰ দেৱতাবোৰৰ পাছত নচলা,
7 ೭ ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.
৭তেন্তে মই এই ঠাইত তোমালোকৰ পূৰ্বপুৰুষসকলক দিয়া এই দেশত তোমালোকক অনন্ত কাললৈকে বাস কৰোৱাম।
8 ೮ ಆಹಾ, ನೀವು ನಿಷ್ಪ್ರಯೋಜಕವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.
৮চোৱা! উপকাৰ কৰিব নোৱাৰা মিছা কথাত তোমালোকে বিশ্বাস কৰিছা।
9 ೯ ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,
৯তোমালোকে চুৰ, নৰ-বধ, পৰস্ত্ৰীগমন আৰু মিছা শপত খোৱা, বাল দেৱতাৰ উদ্দেশ্যে ধূপ জ্বলাই, তোমালোকে নজনা ইতৰ দেৱতাবোৰৰ পাছত চলি, সেই সকলো ঘিণলগীয়া কাৰ্য কৰা?
10 ೧೦ ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?
১০মোৰ নামেৰে প্ৰখ্যাত এই গৃহত সোমাই মোৰ আগত থিয় হৈ, ‘আমি মুক্তি পালোঁ’ এইবুলি কবা নে?
11 ೧೧ ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.
১১মোৰ নামেৰে প্ৰখ্যাত এই গৃহ তোমালোকৰ দৃষ্টিত ডকাইতৰ গুহা হল নে? যিহোৱাই ইয়াকেই ঘোষণা কৰিছে, চোৱা! মই, মইয়ো ইয়াকেই দেখিলোঁ।
12 ೧೨ “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
১২কিন্তু, পূৰ্বতে মই য’ত মোৰ নাম স্থাপন কৰিছিলোঁ, চীলোত থকা মোৰ সেই ঠাইলৈ তোমালোক যোৱা, আৰু মোৰ প্ৰজা ইস্ৰায়েলৰ দুষ্টতাৰ কাৰণে মই তাক যি কৰিছিলোঁ, তাক চোৱা।
13 ೧೩ ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
১৩আৰু যিহোৱাই কৈছে, তোমালোকে এইবোৰ কাৰ্য কৰিলা, আৰু মই অতি ৰাতিপুৱাতে উঠি তোমালোকক এই কথা কওঁতেও তোমালোকে নুশুনিলা আৰু মই মাতোতে তোমালোকে উত্তৰ নিদিলা।
14 ೧೪ ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.
১৪এই হেতুকে, মোৰ নামেৰে প্ৰখ্যাত, তোমালোকে বিশ্বাস কৰা এই গৃহক, তোমালোকক আৰু তোমালোকৰ পূৰ্বপুৰুষসকলক মই দিয়া এই ঠাইক, মই চীলোক কৰাৰ দৰে কৰিম।
15 ೧೫ ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ತೊಲಗಿಸಿಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ತೊಲಗಿಸುವೆನು.
১৫আৰু তোমালোকৰ ভাইসকলক, এনে কি, ইফ্ৰয়িমৰ গোটেই বংশক যেনেকৈ দূৰ কৰি পেলালোঁ, তেনেকৈ তোমালোককো মোৰ সম্মুখৰ পৰা দূৰ কৰি পেলাম।
16 ೧೬ “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
১৬এই হেতুকে, তুমি এই জাতিৰ কাৰণে প্ৰাৰ্থনা নকৰিবা, বা তেওঁলোকৰ কাৰণে নিবেদন কি, প্ৰাৰ্থনা উৎসৰ্গ নকৰিবা, বা অনুৰোধ নকৰিবা; কিয়নো মই তোমাৰ কথা নুশুনিম।
17 ೧೭ ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?
১৭তেওঁলোকে যিহূদাৰ নগৰবোৰত আৰু যিৰূচালেমৰ আলিবোৰত যি কৰিছে, তাক জানো তুমি দেখা নাই?
18 ೧೮ ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.
১৮মোক বেজাৰ দি আকাশৰ ৰাণীৰ উদ্দেশ্যে পিঠা বনাবলৈ আৰু ইতৰ দেৱতাবোৰৰ উদ্দেশ্যে পেয়-নৈবেদ্য উৎসৰ্গ কৰিবলৈ লৰা-ছোৱালীসকলে খৰি বোটলে, বাপেকহঁতে জুই জ্বলাই, আৰু মহিলাসকলে মৈদা খচে।
19 ೧೯ ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.
১৯যিহোৱাই কৈছে, তেওঁলোকে জানো মোকহে দুখ দিব? কিন্তু নিজৰ মুখ বিবৰ্ণ কৰিবলৈ জানো নিজৰ মনকেই বেজাৰ নিদিব?
20 ೨೦ ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
২০এই হেতুকে প্ৰভু যিহোৱাই এই কথা কৈছে: চোৱা, এই ঠাইৰ ওপৰত মানুহ, পশু, বাৰীৰ গছ, আৰু ভুমিৰ ফল, এই সকলোৰে মোৰ ক্ৰোধ আৰু ক্রোধাগ্নি ঢলা যাব আৰু সেয়ে দগ্ধ কৰিব, নুমাই নাযাব।
21 ೨೧ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.
২১ইস্ৰায়েলৰ ঈশ্বৰ বাহিনীসকলৰ যিহোৱাই এই কথা কৈছে: তোমালোকে তোমালোকৰ মঙ্গলাৰ্থক বলিৰ লগত হোম-বলি যোগ কৰা, আৰু মাংস খোৱা।
22 ೨೨ ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
২২কিয়নো যি দিনা মই তোমালোকৰ পূৰ্বপুৰুষসকলক মিচৰ দেশৰ পৰা উলিয়াই আনিছিলোঁ, সেই দিনা মই হোম-বলি কি মঙ্গলাৰ্থক বলিৰ বিষয়ে কোৱা বা আজ্ঞা দিয়া নাছিলোঁ।
23 ೨೩ ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
২৩কিন্তু তেওঁলোকক এই আজ্ঞাহে দিছিলোঁ! যে, তোমালোকে মোৰ বাক্য শুনা, তেতিয়া মই তোমালোকৰ ঈশ্বৰ হ’ম, আৰু তোমালোক মোৰ প্ৰজা হ’বা; আৰু যি পথত চলিবলৈ মই তোমালোকক আজ্ঞা কৰোঁ, তোমালোকৰ ভালৰ অৰ্থে তোমালোকে সেই পথত চলা।
24 ೨೪ ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
২৪কিন্তু তেওঁলোকে নুশুনি কাণ নাপাতি নিজৰ মন্ত্ৰণা আৰু দুষ্ট মনৰ কঠিনতা অনুসাৰে চলিলে আৰু আগ নাবাঢ়ি পাছ হুহঁকিল।
25 ೨೫ “ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ.
২৫তোমালোকৰ পূৰ্বপুৰুষসকল মিচৰ দেশৰ পৰা ওলাই অহা দিনৰে পৰা আজিলৈকে, মই প্ৰতি প্ৰভাতে উঠি, সদায় মোৰ সকলো দাস ভাববাদীসকলক তোমালোকৰ ওচৰলৈ পঠাই আছোঁ।
26 ೨೬ ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
২৬তথাপি তেওঁলোকে মোৰ বাক্যলৈ মন নিদিলে, আনকি কাণো নাপাতিলে; কিন্তু নিজ নিজ ডিঙি ঠৰ কৰিলে, নিজৰ পূৰ্বপুৰুষসকলতকৈয়ো অধিক কু-আচৰণ কৰিলে।
27 ೨೭ “ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.
২৭তুমি তেওঁলোকক এই আটাইবোৰ কথা ক’বা, কিন্তু তেওঁলোকে তোমাৰ কথা নুশুনিব; আৰু তুমি তেওঁলোকক মাতিব, কিন্তু তেওঁলোকে তোমাক উত্তৰ নিদিব।
28 ೨೮ ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು.
২৮তেতিয়া তুমি তেওঁলোকক ক’বা, ‘এয়ে নিজ ঈশ্বৰ যিহোৱাৰ বাক্য নুশুনা বা শাস্তি গ্ৰহণ নকৰা জাতি; বিশ্বস্ততা নষ্ট হ’ল, আৰু এওঁলোকৰ মুখৰ পৰা তাক দূৰ কৰা হ’ল!
29 ೨೯ ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
২৯হে যিৰূচালেম তোমাৰ চুলি কাটি পেলাই দিয়া; আৰু গছ-শূন্য পৰ্ব্বতবোৰত উঠি বিলাপ কৰা। কিয়নো যিহোৱাই নিজ ক্ৰোধৰ পাত্ৰ এই বংশক অগ্ৰাহ্য কৰিলে, পৰিত্যাগ কৰিলে।
30 ೩೦ ಯೆಹೋವನು ಹೀಗೆನ್ನುತ್ತಾನೆ, “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನೇ ನಡೆಸಿದ್ದಾರೆ, ನನ್ನ ಹೆಸರಿನಿಂದ ಖ್ಯಾತಿಗೊಂಡ ಆಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.
৩০কিয়নো, যিহোৱাই কৈছে, মোৰ সাক্ষাতে যি কুচ্ছিত, যিহূদাৰ সন্তান সকলে তাকেই কৰিলে। মোৰ নামেৰে প্ৰখ্যাত হোৱা গৃহটি অশুচি কৰিবৰ অৰ্থে তেওঁলোকে তাৰ ভিতৰত নিজৰ ঘিণলগীয়া বস্তুবোৰ ৰাখিলে।
31 ೩೧ ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
৩১আৰু তেওঁলোকৰ পো-জীসকলক জুইত পুৰিবলৈ হিন্নোমৰ পুতেকৰ উপত্যকাত থকা তোফতৰ ওখ ঠাইবোৰ সাজিলে, ইয়াক মই আজ্ঞা কৰা নাছিলোঁ। আৰু এই বিষয় মোৰ মনত উদয়ো হোৱা নাছিল।
32 ೩೨ ಆಹಾ, ಈ ಕಾರಣದಿಂದ ಆ ಸ್ಥಳಕ್ಕೆ ತೋಫೆತ್ ಮತ್ತು ಬೆನ್ ಹಿನ್ನೋಮಿನ ತಗ್ಗು ಎಂಬ ಹೆಸರುಗಳು ಹೋಗಿ ‘ಸಂಹಾರದ ತಗ್ಗು’ ಎಂಬ ಹೆಸರಾಗುವ ದಿನಗಳು ಬರುವವು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
৩২যিহোৱাই কৈছে, এই হেতুকে চোৱা, যি দিনা সেই ঠাই তোফত বা হিন্নোমৰ পুতেকৰ উপত্যকা বুলি প্ৰখ্যাত নহব, কিন্তু হত্যাৰ উপত্যকা বুলি প্ৰখ্যাত হব, এনে দিন আহিছে; কাৰণ সেইদিনা তোমালোকে তোফতত পুতিবলৈ ঠাই নোহোৱালৈকে তাত মৰা শৱ পুতি থাকিব।
33 ೩೩ ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.
৩৩তেতিয়া এই জাতিৰ শৱ আকাশৰ চৰাইৰ আৰু পৃথিৱীৰ জন্তুবোৰৰ আহাৰ হ’ব, সেইবোৰক কোনেও ভয় দেখুৱাই বাধা দিব নোৱাৰিব।
34 ೩೪ ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.
৩৪তেতিয়া মই যিহূদাৰ নগৰবোৰৰ পৰা আৰু যিৰূচালেমৰ আলিবোৰৰ পৰা উল্লাসৰ ধ্বনি, আনন্দৰ ধ্বনি আৰু দৰা-কন্যাৰ ধ্বনি লুপ্ত কৰিম; কিয়নো এই দেশ উচ্ছন্ন ঠাই হ’ব।’