< ಯೆರೆಮೀಯನು 8 >
1 ೧ ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.
“Yehowa be, ‘Le ɣe ma ɣi la, Yuda fiawo kple woƒe dumegãwo ƒe ƒuwo, nunɔlawo kple nyagblɔɖilawo ƒe ƒuwo kple Yerusalem nɔlawo ƒe ƒuwo la, woaɖe wo le woƒe yɔdowo me.
2 ೨ ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Woasia wo, eye ɣe aɖu wo, ɣleti kple dziƒoŋunuwo aklẽ ɖe wo dzi, nu siwo wotsɔ lɔlɔ̃ na hesubɔ nu siwo yome wodze hebia nu le wo gbɔ eye wode ta agu na wo. Womafɔ wo alo aɖi wo o, ke boŋ woanɔ abe gbeɖuɖɔ ene anɔ anyigba.
3 ೩ ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
Afi sia afi si manya wo aɖo ɖo la, dukɔ vɔ̃ɖi sia ƒe ame mamlɛawo adi ku wu agbe.’” Yehowa, Dziƒoʋakɔwo ƒe Aƒetɔ lae gblɔe.
4 ೪ ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?
Gblɔ na wo be, “Ale Yehowa gblɔe nye esi: “‘Ne amewo dze anyi la, ɖe womegafɔna oa? Ne wotra mɔ la, ɖe womegatrɔna gbɔna oa?
5 ೫ ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.
Ekema nu ka ta ame siawo trɔ dzo ɖo? Nu ka ta Yerusalem le megbe dem ɣe sia ɣi? Woku ɖe beble ŋuti eye wogbe be yewomatrɔ o.
6 ೬ ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.
Meɖo to nyuie, gake womele nu si le eteƒe la gblɔm o. Ame ɖeka pɛ hã meli si eƒe vɔ̃ɖivɔ̃ɖi venɛ, eye wògblɔna be, “Nu kae nye esi mehewɔ o?” Ame sia ame lé eƒe mɔ tsɔ abe sɔe lũ ɖe aʋa me ene.
7 ೭ ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿಯೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ. ಆದರೆ ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.
Akpaviã le yame ke hã nya eƒe azãgbewo, akpakpa, sagbadre kple tsalĩ, nya ɣeyiɣi si wòle be woaʋu adzo. Gake nye dukɔ ya menya Yehowa ƒe ɖoɖowo o.
8 ೮ ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
“‘Aleke wɔ miate ŋu agblɔ be, “Míenye nunyalawo, elabena Yehowa ƒe se la le mía si,” evɔ le nyateƒe me, agbalẽfialawo ƒe nuŋlɔti trɔe wòzu aʋatso’ o?
9 ೯ ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
Ŋu akpe nunyalawo, woƒe mo atsi dãa, eye mɔ aɖe wo. Esi wogbe Yehowa ƒe nya la, nunya ka ƒomevie le wo si?
10 ೧೦ ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
Eya ta maxɔ wo srɔ̃wo atsɔ na ŋutsu bubuwo eye maxɔ woƒe agblewo atsɔ na amedzrowo. Tso ɖeviawo dzi va se ɖe tsitsiawo dzi, wo katã le ŋu biãm ɖe viɖe ŋu. Nyagblɔɖilawo kple Nunɔlawo siaa nye ameblelawo.
11 ೧೧ ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
Wobla abi na nye dukɔ abe ɖe menye abi gã aɖeke wònye o ene. Wole gbɔgblɔm be, ‘Ŋutifafa, ŋutifafa’, evɔ wòhenye ŋutifafa aɖeke meli o hafi.
12 ೧೨ ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.
Ɖe woƒe ŋunyɔnu siwo wɔm wole la le ŋu kpem na woa? Ao, ŋukpe ɖeka pɛ hã mele mo na wo o eye womenya ale si woƒe mo natsi dãae gɔ̃ hã o. Eya ta woatsi aʋatsilawo dome. Ne mele to hem na wo la, woaƒo wo aƒu anyi.” Yehowae gblɔe.
13 ೧೩ ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.
Yehowa be, “Maxɔ nuku siwo woxa la le wo si. Wainkawo agbe tsetse, gbo matse ɖe gbotiwo dzi o eye woƒe aŋgbawo ayrɔ. Nu si matsɔ na wo la woaxɔ wo le wo si.”
14 ೧೪ ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.
“Nu ka ta mienɔ anyi ɖe afi sia ɖo? Miƒo ƒu! Mina míasi ayi ɖe du sesẽwo me ne míatsrɔ̃ ɖe afi ma! Elabena Yehowa, míaƒe Mawu la ɖoe ɖi be miatsrɔ̃ eye wotsɔ aɖitsi na mí be miano elabena míewɔ nu vɔ̃.
15 ೧೫ ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
Míekpɔ mɔ na ŋutifafa gake nu nyui aɖeke meva o. Míekpɔ mɔ na dɔyɔyɔ gake ŋɔdzi koe li.
16 ೧೬ ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.
Wose futɔ la ƒe sɔwo ƒe afɔzi le keke Dan. Ne woƒe sɔwo xlɔ̃ ko la, anyigba katã nyea zi. Wova be woaʋuʋu anyigba kple nu siwo katã le edzi, du la kple emenɔlawo katã.”
17 ೧೭ ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.
“Kpɔ ɖa, madɔ da vɔ̃ɖiwo ɖe mia dome. Da siwo miate ŋu asa gbe ade o eye woaɖu mi.” Yehowae gblɔe.
18 ೧೮ ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
Oo, nye Akɔfala le xaxa me. Nu te nye dzi ŋu le menye.
19 ೧೯ ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.
Ɖo to nye dukɔ ƒe avifafa tso anyigba didi aɖe dzi, “Ɖe Yehowa mele Zion oa? Ɖe Fia la megale afi ma oa?” “Nu ka ta wotsɔ woƒe aklamakpakpɛwo kple dutalegba maɖinuwo do dziku nam ɖo?”
20 ೨೦ ಸುಗ್ಗಿ ತೀರಿತು, ಹಣ್ಣಿನ ಕಾಲ ಮುಗಿಯಿತು, ನಮಗೆ ಉದ್ಧಾರವೇ ಆಗಲಿಲ್ಲ.
“Nuŋeɣi va yi, eye dzomeŋɔli hã va yi, gake womeɖe mi o.”
21 ೨೧ ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.
Esi wogbã nye dukɔ ta la, nye hã megbã, mexa nu eye dzidzi ƒom.
22 ೨೨ ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?
Ɖe dɔyɔmi mele Gilead oa? Gbedala aɖeke mele afi ma oa? Ke nu ka ta nye dukɔ ƒe abi mele kukum o?