< ಯೆರೆಮೀಯನು 9 >

1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!
ああ、わたしの頭が水となり、わたしの目が涙の泉となればよいのに。そうすれば、わたしは民の娘の殺された者のために昼も夜も嘆くことができる。
2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.
ああ、わたしが荒野に、隊商の宿を得ることができればよいのに。そうすれば、わたしは民を離れて去って行くことができる。彼らはみな姦淫する者、不信のともがらだからである。
3 ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.
彼らは弓をひくように、その舌を曲げる。真実ではなく、偽りがこの地に強くなった。彼らは悪より悪に進み、またわたしを知らないと、主は言われる。
4 ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.
あなたがたはおのおの隣り人に気をつけよ。どの兄弟をも信じてはならない。兄弟はみな、押しのける者であり、隣り人はみな、ののしって歩く者だからである。
5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
人はみな、その隣り人を欺き、真実を言う者はない。彼らは自分の舌に偽りを言うことを教え、悪を行い、疲れて悔い改めるいとまもなく、
6 ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
しえたげに、しえたげを積み重ね、偽りに偽りを積み重ね、わたしを知ることを拒んでいると、主は言われる。
7 ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.
それゆえ万軍の主はこう言われる、「見よ、わたしは彼らを溶かし、試みる。このほか、わが民をどうすることができよう。
8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
彼らの舌は殺す矢のようだ、それは偽りを言う。その口ではおのおの隣り人におだやかに語るが、その心では彼を待ち伏せる計りごとを立てる。
9 ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?” ಎಂದು ನುಡಿಯುತ್ತಾನೆ.
主は言われる、これらのことのために、わたしが彼らを罰しないだろうか。わたしがこのような民にあだを返さないだろうか。
10 ೧೦ “ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
山のために泣き叫び、野の牧場のために悲しめ。これらは荒れすたれて、通り過ぎる人もない。ここには牛、羊の鳴く声も聞えず、空の鳥も獣も皆逃げ去った。
11 ೧೧ ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.
わたしはエルサレムを荒塚とし、山犬の巣とする。またユダの町々を荒して、住む人もない所とする」。
12 ೧೨ ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
知恵があって、これを悟ることのできる人はだれか。主の口の言葉をうけて、それを示す人はだれか。この地が滅ぼされて荒野のようになり、通り過ぎる人もなくなったのはどういうわけか。
13 ೧೩ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.
主は言われる、「それは彼らの前にわたしが立てたおきてを彼らが捨てて、わたしの声に聞き従わず、そのとおりに歩かなかったからである。
14 ೧೪ ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
彼らは強情に自分の心に従い、また先祖の教えたようにバアルに従った。
15 ೧೫ ಆದುದರಿಂದ ಆಹಾ, ನಾನು ಈ ಜನರಿಗೆ ವಿಷದ ಆಹಾರವನ್ನು ಮತ್ತು ಕಹಿಯಾದ ಪಾನಗಳನ್ನು ಕೊಡುವೆನು.
それゆえ万軍の主、イスラエルの神はこう言われる、見よ、わたしはこの民に、にがよもぎを食べさせ、毒の水を飲ませ、
16 ೧೬ ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.
彼らも、その先祖たちも知らなかった国びとのうちに彼らを散らし、また彼らを滅ぼし尽すまで、そのうしろに、つるぎをつかわす」。
17 ೧೭ ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
万軍の主はこう言われる、「よく考えて、泣き女を呼べ。また人をつかわして巧みな女を招け。
18 ೧೮ ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.
彼らに急いでこさせ、われわれのために泣き悲しませて、われわれの目に涙をこぼさせ、まぶたから水をあふれさせよ。
19 ೧೯ ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
シオンから悲しみの声が聞える。それは言う、『ああ、われわれは滅ぼされ、いたく、はずかしめられている。われわれはその地を去り、彼らがわれわれのすみかをこわしたからだ』」。
20 ೨೦ ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
女たちよ、主の言葉を聞け。あなたがたの耳に、その口の言葉をいれよ。あなたがたの娘に悲しみの歌を教え、おのおのその隣り人に哀悼の歌を教えよ。
21 ೨೧ ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
死がわれわれの窓に上って来、われわれの邸宅の中にはいり、ちまたにいる子どもらを絶やし、広場にいる若い人たちを殺そうとしているからだ。
22 ೨೨ “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
あなたはこう言いなさい、「主は言われる、『人の死体が糞土のように、野に倒れているようになり、また刈入れする人のうしろに残って、だれも集めることをしない束のようになる』」。
23 ೨೩ ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
主はこう言われる、「知恵ある人はその知恵を誇ってはならない。力ある人はその力を誇ってはならない。富める者はその富を誇ってはならない。
24 ೨೪ ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.
誇る者はこれを誇とせよ。すなわち、さとくあって、わたしを知っていること、わたしが主であって、地に、いつくしみと公平と正義を行っている者であることを知ることがそれである。わたしはこれらの事を喜ぶと、主は言われる」。
25 ೨೫ “ಆಹಾ, ಐಗುಪ್ತರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೋವಾಬ್ಯರು, ಚಂಡಿಕೆಯನ್ನು ಬಿಟ್ಟುಕೊಂಡಿರುವ ಅರಣ್ಯದ ನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ.
主は言われる、「見よ、このような日が来る。その日には、割礼をうけても、心に割礼をうけていないすべての人をわたしは罰する。
26 ೨೬ ಏಕೆಂದರೆ ಸಕಲ ಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು” ಎಂದು ಯೆಹೋವನು ನುಡಿಯುತ್ತಾನೆ.
エジプト、ユダ、エドム、アンモンの人々、モアブ、および野にいて、髪の毛のすみずみをそる人々はそれである。これらの国びとはみな割礼をうけていない者であり、イスラエルの全家もみな心に割礼をうけていない者である」。

< ಯೆರೆಮೀಯನು 9 >