< ಯೋಬನು 10 >
1 ೧ ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.
Tęskni sobie dusza moja w żywocie moim; rozpuszczę przeciw sobie narzekanie moje, a będę mówił w gorzkości duszy mojej.
2 ೨ ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.
Rzekę Bogu: Nie potępiajże mię; raczej mi oznajmij, czemu spór ze mną wiedziesz?
3 ೩ ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?
Cóż masz za pożytek, że mię uciskasz? a iż odrzucasz sprawę rąk twoich? a radę niepobożnych oświecasz?
4 ೪ ನೀನು ಮಾಂಸದ ಕಣ್ಣುಳ್ಳವನೋ? ಮನುಷ್ಯರು ನೋಡುವಂತೆ ನೋಡುತ್ತೀಯಾ?
Azaż ty masz oczy cielesne? Albo jako człowiek widzi, ty widzisz?
5 ೫ ನಿನ್ನ ದಿನಗಳು ಮನುಷ್ಯನ ದಿನಗಳಷ್ಟು ಅಲ್ಪವಾಗಿವೆಯೋ? ನಿನ್ನ ಸಂವತ್ಸರಗಳೂ ಮಾನವನ ದಿನಗಳಷ್ಟೇನೇ,
Dni twoje, zaż są jako dni człowiecze? a lata twoje jako lata ludzkie?
6 ೬ ನೀನು ಇಷ್ಟು ಅವಸರದಿಂದ ನನ್ನ ದೋಷವನ್ನು ಹುಡುಕಿ, ನನ್ನ ಪಾಪವನ್ನು ವಿಚಾರಿಸುವುದೇಕೆ?
Iż się wywiadujesz nieprawości mojej, a o grzechu moim badasz się?
7 ೭ ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?
Ty wiesz, żem niepobożnie nie poczynał; wszakże nie jest, ktoby mię miał wyrwać z rąk twoich.
8 ೮ ನೀನು ನನ್ನನ್ನು ನಿರ್ಮಿಸಿ ರೂಪಿಸಿದ್ದರೂ, ಈಗ ಮನಸ್ಸನ್ನು ಬೇರೆ ಮಾಡಿಕೊಂಡು ನನ್ನನ್ನು ನಾಶ ಮಾಡಿಬಿಡುವೆಯಾ?
Ręce twoje wykształtowały mię, i uczyniły mię; a przecię mię zewsząd gubisz.
9 ೯ ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?
Pomnij proszę, żeś mię jako glinę ulepił, a w proch mię zaś obrócisz.
10 ೧೦ ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ.
Izali jako mleko nie zlałeś mię, a jako ser nie utworzyłeś mię?
11 ೧೧ ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.
Skórą i ciałem przyoblokłeś mię, a kościami i żyłami pospinałeś mię.
12 ೧೨ ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ.
Żywotem i miłosierdziem darowałeś mię, a opatrzność twoja strzegła ducha mego.
13 ೧೩ ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.
A chociażeś to skrył w sercu twojem, wiem jednak, że to jest z woli twojej.
14 ೧೪ ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.
Jeźli zgrzeszę, wnet tego postrzeżesz, a dla nieprawości mojej nie przepuścisz mi.
15 ೧೫ ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.
Jeźlim bezbożny, biada mi! a choćbym też był sprawiedliwym, nie podniosę głowy mojej, będąc nasycony pohańbieniem, i widząc utrapienie moje,
16 ೧೬ ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ.
Którego przybywa; bo jako lew srogi gonisz mię, a coraz dziwniej się przeciwko mnie stawiasz.
17 ೧೭ ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.
Odnawiasz świadków twoich przeciwko mnie, a rozmnażasz rozgniewanie twoje na mię; wojska jedne po drugich są przeciwko mnie.
18 ೧೮ ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು.
Przeczżeś mię z żywota wywiódł? Ach, bym był umarł, żeby mię było oko nie widziało!
19 ೧೯ ಆಗ ನಾನು ಇರುತ್ತಿರಲಿಲ್ಲ; ನನ್ನನ್ನು ಗರ್ಭದಿಂದ ಸಮಾಧಿಗೆ ಹೊತ್ತುಕೊಂಡು ಹೋಗುತ್ತಿದ್ದರು.
Obym był, jakoby mię nie było! oby mię było zaraz z żywota do grobu zaniesiono!
20 ೨೦ ನನ್ನ ದಿನಗಳು ಅಲ್ಪವಾಗಿರುತ್ತವಲ್ಲಾ? ಬಿಡು, ನಿನ್ನ ದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸು.
Izaż nie trocha dni moich? Przetoż przestań, a zaniechaj mię, abym się troszeczkę posilił,
21 ೨೧ ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.
Pierwej niż odejdę tam, skąd się nie wrócę, do ziemi ciemności, i do cienia śmierci;
22 ೨೨ ರಾತ್ರಿಗೂ, ಮರಣಾಂಧಕಾರಕ್ಕೂ ಸಮಾನವಾದ, ಕಗ್ಗತ್ತಲು ಅದನ್ನು ಆವರಿಸಿದೆ, ಅಲ್ಲಿ ಏನೂ ಕ್ರಮವಿಲ್ಲ, ಅದರ ಬೆಳಕು ರಾತ್ರಿಯ ಬೆಳಕಿನಂತೆ.”
Do ziemi ciemnej, jako chmura, i do cienia śmierci, gdzie niemasz przemiany, jedno sama gęsta ciemność.