< ಯೋಬನು 11 >
1 ೧ ಆಗ ನಾಮಾಥ್ಯನಾದ ಚೋಫರನು ಹೀಗೆಂದನು,
拿玛人琐法回答说:
2 ೨ “ಬಹಳ ಮಾತುಗಳಿಗೆ ಉತ್ತರ ಕೊಡಬಾರದೋ? ವ್ಯರ್ಥವಾಗಿ ಮಾತನಾಡುವವ ನೀತಿವಂತನೆಂದು ಹೇಳಿಸಿಕೊಂಡಾನೇ?
这许多的言语岂不该回答吗? 多嘴多舌的人岂可称为义吗?
3 ೩ ನೀನು ಬಡಾಯಿಕೊಚ್ಚಿದರೆ ಮನುಷ್ಯರು ಸುಮ್ಮನಿರಬೇಕೋ? ನೀನು ಕುಚೋದ್ಯವಾಗಿ ಮಾತನಾಡುವಾಗ ನಿನ್ನನ್ನು ಯಾರೂ ನಾಚಿಕೆಗೆ ಒಳಪಡಿಸಬಾರದೋ?
你夸大的话岂能使人不作声吗? 你戏笑的时候岂没有人叫你害羞吗?
4 ೪ ‘ನನ್ನ ಬೋಧನೆಯು ನಿರ್ಮಲವಾದದ್ದು, ದೇವದೃಷ್ಟಿಯಲ್ಲಿ ಶುದ್ಧನಾಗಿದ್ದೇನೆ’ ಎಂದು ನೀನು ಹೇಳಿದ್ದೀಯಲ್ಲಾ.
你说:我的道理纯全; 我在你眼前洁净。
5 ೫ ಆಹಾ, ದೇವರು ಬಾಯ್ದೆರೆದು ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ!
惟愿 神说话; 愿他开口攻击你,
6 ೬ ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!
并将智慧的奥秘指示你; 他有诸般的智识。 所以当知道 神追讨你 比你罪孽该得的还少。
7 ೭ ದೇವರ ಅಗಾಧಗಳನ್ನು ಕಂಡುಕೊಳ್ಳಬಲ್ಲೆಯಾ? ಸರ್ವಶಕ್ತನಾದ ದೇವರನ್ನು ಸಂಪೂರ್ಣವಾಗಿ ಗ್ರಹಿಸಿಕೊಳ್ಳಬಹುದೋ?
你考察就能测透 神吗? 你岂能尽情测透全能者吗?
8 ೮ ಆಹಾ, (ಆತನ ಜ್ಞಾನವು) ಆಕಾಶದ ಹಾಗೆ ಉನ್ನತವಾಗಿದೆ; ನೀನು ಮಾಡುವುದೇನು? ಪಾತಾಳಕ್ಕಿಂತ ಆಳವಾಗಿದೆ; ನೀನು ತಿಳಿದುಕೊಳ್ಳುವುದೇನು? (Sheol )
他的智慧高于天,你还能做什么? 深于阴间,你还能知道什么? (Sheol )
9 ೯ ಅದರ ಅಳತೆಯು ಭೂಮಿಗಿಂತಲೂ ಉದ್ದವಾಗಿದೆ, ಸಮುದ್ರಕ್ಕಿಂತಲೂ ಅಗಲವಾಗಿದೆ.
其量比地长, 比海宽。
10 ೧೦ ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?
他若经过,将人拘禁, 招人受审,谁能阻挡他呢?
11 ೧೧ ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು.
他本知道虚妄的人; 人的罪孽,他虽不留意,还是无所不见。
12 ೧೨ ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.
空虚的人却毫无知识; 人生在世好像野驴的驹子。
13 ೧೩ ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.
你若将心安正, 又向主举手;
14 ೧೪ ಅಧರ್ಮವು ನಿನ್ನ ಕೈಯಲ್ಲಿದ್ದರೆ ಅದನ್ನು ದೂರಮಾಡಿಬಿಡು; ಅನ್ಯಾಯವು ನಿನ್ನ ಗುಡಾರಗಳಲ್ಲಿ ವಾಸಿಸದಿರಲಿ.
你手里若有罪孽, 就当远远地除掉, 也不容非义住在你帐棚之中。
15 ೧೫ ಆಗ ನೀನು ನಿಷ್ಕಳಂಕವಾದ ಮುಖವನ್ನೆತ್ತಿಕೊಂಡು, ಸ್ಥಿರಚಿತ್ತನೂ, ನಿರ್ಭಯನೂ ಆಗಿರುವಿ.
那时,你必仰起脸来毫无斑点; 你也必坚固,无所惧怕。
16 ೧೬ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರನ್ನೋ ಎಂಬಂತೆ ಅದನ್ನು ಜ್ಞಾಪಿಸಿಕೊಳ್ಳುವಿ.
你必忘记你的苦楚, 就是想起也如流过去的水一样。
17 ೧೭ ನಿನ್ನ ಜೀವಮಾನವು ಮಧ್ಯಾಹ್ನದ ಬೆಳಕಿಗಿಂತ ಹೆಚ್ಚಾಗಿ ಪ್ರಜ್ವಲಿಸುವುದು, ಕತ್ತಲಿದ್ದರೂ ಹಗಲಿನಂತಿರುವುದು.
你在世的日子要比正午更明, 虽有黑暗仍像早晨。
18 ೧೮ ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ, ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.
你因有指望就必稳固, 也必四围巡查,坦然安息。
19 ೧೯ ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.
你躺卧,无人惊吓, 且有许多人向你求恩。
20 ೨೦ ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
但恶人的眼目必要失明。 他们无路可逃; 他们的指望就是气绝。