< ಯೋಬನು 12 >
1 ೧ ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು,
১তখন ইয়োব উত্তর দিল এবং বলল,
2 ೨ “ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.
২“কোন সন্দেহ নেই তোমরাই লোক; প্রজ্ঞা তোমাদের সঙ্গে মরবে।
3 ೩ ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.
৩কিন্তু আমার বুদ্ধি আছে যেমন তোমাদের আছে; আমি তোমাদের থেকে নিচু নই। সত্যি, কে জানে না এই বিষয়ে এমন ভাবে?
4 ೪ ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.
৪আমি আমার প্রতিবেশীর কাছে হাস্যকর বস্তুর মত, আমি, যে ঈশ্বরকে ডাকে এবং তাঁর দ্বারা উত্তর পায়! আমি, একজন ন্যায্য এবং ধার্মিক লোক, আমি এখন একটা হাস্যকর বস্তু।
5 ೫ ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.
৫যে শান্তিতে বাস করে, তার জন্য দুর্ভাগ্য অবজ্ঞার বিষয়; সে ভাবে, যাদের পা পিছলিয়ে যায় তাদের জীবনে আরও বেশি দুর্ভাগ্য আসে।
6 ೬ ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.
৬ডাকাতদের তাঁবুর উন্নতি হয় এবং যারা ঈশ্বরকে রাগিয়ে দেয় তারা সুরক্ষিত অনুভব করে; তাদের নিজেদের হাত তাদের ঈশ্বর।
7 ೭ ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;
৭কিন্তু এখন পশুদের জিজ্ঞাসা কর আর তারা তোমাকে শিক্ষা দেবে; আকাশের পাখিদের জিজ্ঞাসা কর আর তারা তোমাকে বলবে।
8 ೮ ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.
৮অথবা মাটির সঙ্গে কথা বল আর তা তোমাকে বলবে; সমুদ্রের মাছ তোমাকে ঘোষণা করবে।
9 ೯ ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?
৯এদের মধ্যে কোন পশু জানে না যে এসমস্ত সদাপ্রভুর হাত করেছে, তাদের জীবন দিয়েছে,
10 ೧೦ ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.
১০সদাপ্রভু, যার হাতে সমস্ত জীবন্ত বস্তুর প্রাণ এবং সমস্ত মানবজাতির আত্মা আছে?
11 ೧೧ ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
১১কান কি কথার পরীক্ষা করে না যেমন থালা খাবারের পরীক্ষা করে?
12 ೧೨ ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.
১২বৃদ্ধ লোকেদের প্রজ্ঞা আছে; এবং দীর্ঘায়ুর বুদ্ধি আছে।
13 ೧೩ ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.
১৩ঈশ্বরের প্রজ্ঞা এবং পরাক্রম আছে; তাঁর ভালো চিন্তা এবং বুদ্ধি আছে।
14 ೧೪ ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.
১৪দেখ, তিনি ভেঙে ফেলেন এবং তা আর গড়া যায় না; যদি তিনি কাউকে বন্দী করেন, তাহলে মুক্তি নেই।
15 ೧೫ ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.
১৫দেখ, যদি তিনি জলকে বদ্ধ করেন, তারা শুকিয়ে যাবে এবং যদি তিনি তাদের পাঠান, তারা দেশকে ভাসিয়ে দেবে।
16 ೧೬ ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
১৬শক্তি ও প্রজ্ঞা তাঁর; প্রতারিত এবং প্রতারণাকারী দুজনেই তাঁর।
17 ೧೭ ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.
১৭তিনি মন্ত্রীদের সর্বস্ব লুট করে নিয়ে যান; বিচারকদের মূর্খে পরিণত করেন।
18 ೧೮ ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.
১৮তিনি রাজাদের থেকে কর্তিত্বের শিকল নিয়ে নেন; তিনি তাদের কোমরে কাপড় জড়িয়ে দেন।
19 ೧೯ ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.
১৯তিনি যাজকদের সর্বস্ব লুট করে নিয়ে যান এবং শক্তিশালীদের উত্খাত করবেন।
20 ೨೦ ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.
২০তিনি বিশ্বস্তদের কথা মুছে দেন এবং প্রাচীনদের বুদ্ধি নিয়ে নেন।
21 ೨೧ ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.
২১তিনি অভিজাতদের ওপর অপমান ঢেলে দেন এবং শক্তিশালীদের কোমরবন্ধন খুলে দেন।
22 ೨೨ ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.
২২তিনি অন্ধকার থেকে গভীর বিষয় প্রকাশ করেন এবং গভীর অন্ধকারকে আলোতে নিয়ে আসেন।
23 ೨೩ ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.
২৩তিনি জাতিকে শক্তিশালী করেন এবং আবার তিনি তাদের ধ্বংসও করেন; তিনি দেশকে বাড়ান এবং আবার তিনি তাদের বন্দী হিসাবেও পরিচালনা দেন।
24 ೨೪ ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.
২৪তিনি পৃথিবীর নেতাদের থেকে বুদ্ধি নিয়ে নেবেন; তিনি তাদের মরুপ্রান্তে ঘোরান যেখানে কোন পথ নেই।
25 ೨೫ ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”
২৫তারা আলো ছাড়া অন্ধকার অনুভব করে; তিনি তাদের মাতাল লোকের মত টাল খাওয়ান।”