< ಯೋಬನು 12 >

1 ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು,
Felélt Jób és mondta:
2 “ಹೌದು, ನೀವೇ ಮನುಷ್ಯರು; ಜ್ಞಾನವು ನಿಮ್ಮೊಡನೆಯೇ ಸಾಯುವುದು, ನಿಜ.
Valóban, ti vagytok ám a nép, s veletek kihal a bölcsesség!
3 ನಿಮ್ಮ ಹಾಗೆ ನನಗೂ ಬುದ್ಧಿಯುಂಟು, ನಿಮಗಿಂತ ನಾನು ಕಡೆಯಲ್ಲ. ಇಂಥವು ಯಾರಿಗೆ ತಾನೇ ಗೊತ್ತಿಲ್ಲ.
Nekem is van szívem mint nektek, nem esem messze tőletek, hisz kinél nem volnának effélék?
4 ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.
Nevetségéül vagyok barátnak, ki Istent szólította s ő meghallgatta; nevetségül az igaz, a gáncstalan!
5 ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ; ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.
A balvégzetnek megvetés, a gondtalannak vélekedése szerint, készen áll, a tántorgó lábúaknak.
6 ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.
Boldogságban vannak a rablók sátrai és biztosság azoké, kik Istent haragítják, azé, ki istenét kezében hordja.
7 ಆದರೆ ಮೃಗಗಳನ್ನು ವಿಚಾರಿಸು, ನಿನಗೆ ಉಪದೇಶ ಮಾಡುವವು; ಆಕಾಶದ ಪಕ್ಷಿಗಳನ್ನು ಕೇಳು, ನಿನಗೆ ತಿಳಿಸುವವು;
Azonban kérdezd csak meg a barmot, majd tanít téged, s az ég madarát, majd megjelenti neked;
8 ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು; ಸಮುದ್ರದ ಮೀನುಗಳು ನಿನಗೆ ಹೇಳುವವು.
vagy szólj a földnek, majd tanít téged, és elbeszélik neked a tenger halai.
9 ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?
Ki ne tudná mindezekből, hogy az Örökkévaló keze cselekedte ezt;
10 ೧೦ ಪ್ರತಿ ಪ್ರಾಣಿಯ ಪ್ರಾಣವು, ಸಮಸ್ತ ಮನುಷ್ಯರ ಆತ್ಮಗಳೂ ಯೆಹೋವನ ಕೈಯಲ್ಲಿರುವವು.
kinek kezében van minden élőnek a lelke, s minden ember testének a szelleme.
11 ೧೧ ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
Nemde a fül vizsgálja a szavakat s az íny az ételt ízleli meg?
12 ೧೨ ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.
Aggastyánokban van bölcsesség, s hosszú élet: értelmesség.
13 ೧೩ ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.
Ő nála van bölcsesség és erő, övé tanács és értelmesség!
14 ೧೪ ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.
Lám, lerombol s nem építtetik föl, rázár valakire s nem nyittatik ki neki.
15 ೧೫ ನೋಡಿರಿ, ಆತನು ನೀರುಗಳನ್ನು ತಡೆದರೆ ಅವು ಬತ್ತಿಹೋಗುತ್ತವೆ; ಆತನು ನೀರುಗಳನ್ನು ಬಿಟ್ಟರೆ, ಅವು ಭೂಮಿಯನ್ನು ಹಾಳುಮಾಡುತ್ತವೆ.
Im elrekeszt vizeket s kiszáradnak – megereszti őket s feldúlják a földet.
16 ೧೬ ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
Ő nála van hatalom és üdvösség, övé a tévelygő és a megtévesztő.
17 ೧೭ ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.
Járatja a tanácsosokat megfosztottan s a bírákat megtébolyítja;
18 ೧೮ ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.
a királyok kötelékét föloldotta és reákötött övet az ő derekukra;
19 ೧೯ ಯಾಜಕರನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ಪ್ರಧಾನರನ್ನು ದೊಬ್ಬಿಬಿಡುವನು.
járatja a papokat megfosztottan s a szilárdakat elferdíti;
20 ೨೦ ಆಲೋಚನಾಕರ್ತರ ವಾಕ್ಚಾತುರ್ಯವನ್ನು ಕುಗ್ಗಿಸುತ್ತಾನೆ, ಹಿರಿಯರ ವಿವೇಕವನ್ನು ತೆಗೆದುಹಾಕುವನು.
megvonja a biztosszavúak beszédjét s a véneknek eszét elveszi;
21 ೨೧ ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.
csúfot önt a nemesekre s a hatalmasoknak kötését meglazítja.
22 ೨೨ ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.
Feltár mély dolgokat a sötétségből s kihozza világosságra a vakhomályt.
23 ೨೩ ಜನಾಂಗಗಳನ್ನು ವೃದ್ಧಿಗೊಳಿಸಿ ನಾಶಪಡಿಸುವನು, ಅವುಗಳನ್ನು ವಿಸ್ತರಿಸಿ ಗಡೀಪಾರುಮಾಡುವನು.
Nagyra növeszti a nemzeteket s elveszíti, kiterjeszti a nemzeteket és elviszi.
24 ೨೪ ಪ್ರಜಾಪ್ರಮುಖರ ಬುದ್ಧಿಯನ್ನು ತೊಲಗಿಸಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವನು.
Szívét veszi az ország népe fejeinek s eltévelyíti úttalan pusztaságban;
25 ೨೫ ಅವರು ಬೆಳಕಿಲ್ಲದ ಕತ್ತಲಲ್ಲಿ ತಡಕಾಡುವರು; ಅವರನ್ನು ಅಮಲೇರಿದವರಂತೆ ಓಲಾಡಿಸಿ ತಡವರಿಸುವಂತೆ ಮಾಡುವನು.”
tapogatóznak sötétségben világosság nélkül, s eltévelyíti őket mint a részeget.

< ಯೋಬನು 12 >