< ಯೋಬನು 15 >
1 ೧ ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
Na Eliphaz el topkol ac fahk,
2 ೨ “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?
“Kaskas wel, Job. Kom kaskas wel!
3 ೩ ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?
Wangin mwet lalmwetmet ku in fahk kain kas ma kom fahk ingan, Ku sifacna loangel ke kain kaskas lalfon ingan;
4 ೪ ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
Fin ac wi nunak lom an, na wangin mwet ac sangeng sin God; Wangin pac mwet ac pre nu sel.
5 ೫ ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.
Moul koluk lom an kalem ke luman sramsram lom ingan; Kom srike na in sifacna molikomla ke kas usrnguk lom ingan.
6 ೬ ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.
Tia enenu nga in akkolukye kom; Kas nukewa lom ingan sifacna fahkkomyak.
7 ೭ ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
“Mea, kom nunku mu kom pa mwet se ma isusla oemeet uh? Mea, kom oasr ke pacl se God El orala fineol ah?
8 ೮ ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?
Ya kom tuh lohng ma God El akoo Elan oru ah? Mea, lalmwetmet lun mwet uh ma lom mukena?
9 ೯ ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
Kut etu nufon ma kom etu an.
10 ೧೦ ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.
Kut eis etauk lasr sin mwet ma fiayala aunsifa — Su isusla meet liki papa tomom ah.
11 ೧೧ ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?
“God El ke akwoye kom; efu kom ku srangesr lohng? Kut sramsram in Inen God ke pusra na wo ac kulang.
12 ೧೨ ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?
A kom folak ac ngetnget in kasrkusrak nu sesr.
13 ೧೩ ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
Kom kasrkusrakak sin God, ac fahk kas na upa lainul.
14 ೧೪ ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
“Mea oasr mwet ku in arulana mutal? Ya oasr mwet suwohs ye mutun God?
15 ೧೫ ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.
Finne lipufan lun God uh, El tia pacna lulalfongelos; Aok, elos tia pac mutal ye mutun God.
16 ೧೬ ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
Ac mwet uh nim ma koluk uh oana kof uh; Aok pwaye, mwet uh arulana fohkfok, ac wangin sripa.
17 ೧೭ ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.
“Inge Job, wona kom in porongeyu ke ma nga etu uh.
18 ೧೮ ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.
Mwet lalmwetmet elos luti nu sik ke ma pwaye Su elos eis sin papa tumalos meet ah, Ac wanginna ma lukma elos okanla.
19 ೧೯ ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.
Wangin mwetsac muta in facl selos; Pwanang wangin mwet in pwanulosla liki God.
20 ೨೦ ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
“Sie mwet koluk su akkeokye mwet saya uh Ac fah mutana in keok ac mwaiok ke lusen moul lal nufon.
21 ೨೧ ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
Pusra in aksangeng ac fah woi insracl, Ac mwet pisrapasr ac fah pisre ma lal ke pacl el nunku mu el mutana in misla.
22 ೨೨ ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
Wangin finsrak lal in kaingla liki lohsr uh, Mweyen oasr cutlass se oanna akola in unilya,
23 ೨೩ ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
Ac won vulture uh soano na in kangla manol. El etu lah pacl fahsru lal uh ac lohsr;
24 ೨೪ ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
Ongoiya oan soanel in sruokilya, Oana sie tokosra su akola nu ke mweun.
25 ೨೫ ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.
“Pa inge safla lun sie mwet Su srisrngi paol nu in mutun God, Ac kena lain El su Kulana.
26 ೨೬ ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.
Mwet se ingan el ac likkekelana Ac us mwe loang natul, ac yuyang in lain God,
27 ೨೭ ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.
El finne arulana yohk Ac ratratla ke mwe kasrup.
28 ೨೮ ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.
“Pa ingan mwet se ma tuh sruokya siti pus, Ac eisla lohm ma mwet la uh kaingla liki; Tusruktu mweun ac fah kunausla siti ac lohm inge.
29 ೨೯ ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.
Kasrup lal uh ac tia oan paht; Wangin kutena sin ma lal inge ac fah oan nwe tok. Finne ngunal sifacna, ac fah wanginla pac,
30 ೩೦ ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.
Ac el ac fah tia ku in kaingla liki lohsr uh. El ac fah oana soko sak Su lah kac uh firiryak ke e, Ac ros kac uh ukukla ke eng uh.
31 ೩೧ ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,
El fin wella ac lulalfongi ke ma koluk, Na el ac fah kosrani ke ma koluk.
32 ೩೨ ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,
Meet liki el sun pacl in safla lal, el ac uli; El ac uli oana sie lesak, ac tia ku in sifil folfolla insroa.
33 ೩೩ ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
El ac fah oana soko fain ma fahko kac uh mangosr na putatla; Ac oana soko sak olive ma putatla ros kac uh.
34 ೩೪ ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
Ac fah wangin fwilin tulik nutin un mwet ma tia akfulatye God, Ac e ac fah furreak lohm ma musaiyukla ke mani in eyeinse.
35 ೩೫ ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
Mwet inge pa muta akoo in oru mwe lokoalok ac ma koluk; Ac insialos sessesla ke kutasrik pacl nukewa.”