< ಯೋಬನು 15 >

1 ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
Отвещав же Елифаз Феманитин, рече:
2 “ಜ್ಞಾನಿಯು ತನ್ನ ಹೊಟ್ಟೆಯಲ್ಲಿ ಮೂಡಣ ಗಾಳಿಯನ್ನು ತುಂಬಿಕೊಂಡು, ಶೂನ್ಯವಾದ ತಿಳಿವಳಿಕೆಯಿಂದ ಮಾತನಾಡಬಹುದೇ?
еда премудрый даст ответ разумен на ветр, и наполни болезнию чрево,
3 ಪ್ರಯೋಜನವಿಲ್ಲದ ನುಡಿಯಿಂದಲೂ, ಫಲವಿಲ್ಲದ ವಾಕ್ಯಗಳಿಂದಲೂ ತರ್ಕಿಸುವುದು ಯುಕ್ತವೋ?
обличая глаголы, имиже не подобает, и словесы, ихже ни кая польза?
4 ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.
Не и ты ли отринул еси страх? Скончал же еси глаголы таковы пред Господем?
5 ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ.
Повинен еси глаголом уст твоих, ниже разсудил еси глаголы сильных.
6 ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಮಾತುಗಳು ಕೂಡ ನಿನಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತವೆ, ನಿನ್ನನ್ನು ಅಪರಾಧಿಯನ್ನಾಗಿಸುತ್ತದೆ.
Да обличат тя уста твоя, а не аз, и устне твои на тя возсвидетелствуют.
7 ನೀನು ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚೆ ಹುಟ್ಟಿದವನೋ?
Что бо? Еда первый от человек рожден еси? Или прежде холмов сгустился еси?
8 ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?
Или строение Господне слышал еси? Или в советника тя употреби Бог? И на тя (единаго) ли прииде премудрость?
9 ನಮಗೆ ತಿಳಿಯದಿರುವ ಯಾವ ವಿಷಯ ಗೊತ್ತಿದೆ? ನಮ್ಮಲ್ಲಿಲ್ಲದ ಯಾವ ಸಂಗತಿಯನ್ನು ಗ್ರಹಿಸಿದ್ದೀ?
Что бо веси, егоже не вемы? Или что разумееши ты, егоже и мы (не разумеем)?
10 ೧೦ ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.
И стар и древен есть в нас, старший отца твоего деньми.
11 ೧೧ ದೇವರ ಆದರಣೆಗಳೂ, ನಿನಗೆ ದೊರೆತ ಶಾಂತಿಯ ಮಾತುಗಳೂ ಸಾಲುವುದಿಲ್ಲವೇ?
Мало, о нихже согрешил еси, уязвлен еси, вельми выше меры возглаголал еси.
12 ೧೨ ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವುದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವುದೇಕೆ?
Что дерзостно бысть сердце твое? Или что вознесостеся очи твои?
13 ೧೩ ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
Яко ярость изрыгнул еси пред Господем, изнесл же еси изо уст такова словеса?
14 ೧೪ ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
Кто бо сый человек яко будет непорочен? Или аки будущий праведник рожден от жены?
15 ೧೫ ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.
Аще во святых не верит, небо же нечисто пред Ним,
16 ೧೬ ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ, ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!
кольми паче мерзкий и нечистый муж, пияй неправды, якоже питие.
17 ೧೭ ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.
Возвещу же ти, послушай мене: яже ныне видех, возвещу ти,
18 ೧೮ ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.
яже премудрии рекут, и не утаиша отцы их,
19 ೧೯ ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.
имже единым дана бысть земля, и не найде иноплеменник на ня.
20 ೨೦ ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ, ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.
Все житие нечестиваго в попечении, лета же изочтена дана сильному,
21 ೨೧ ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
страх же его во ушесех его: егда мнит уже в мире быти, тогда приидет нань низвращение:
22 ೨೨ ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
да не верует отвратитися от тмы, осужден бо уже в руки железа,
23 ೨೩ ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.
учинен же есть в брашно неясытем: весть же в себе, яко ждет падения, день же темен превратит его,
24 ೨೪ ಸಂಕಟವೂ, ಪೇಚಾಟವೂ ಯುದ್ಧಸನ್ನದ್ಧ ರಾಜರಂತೆ ಅವನನ್ನು ಹೆದರಿಸಿ ಸೋಲಿಸುವವು.
беда же и скорбь оымет его, якоже военачалник напреди стояй падает,
25 ೨೫ ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಾದ ದೇವರ ಎದುರು ನಿಂತು ಶೂರನಂತೆ ಮೆರೆದನಲ್ಲಾ.
яко вознесе руце на Господа, пред Господем же Вседержителем ожесточи выю,
26 ೨೬ ದೊಡ್ಡ ಬಲವುಳ್ಳ ಗುರಾಣಿಯನ್ನು ಹಿಡಿದು ತಲೆ ನಿಮಿರಿಸಿ ಆತನ ಮೇಲೆ ಬೀಳಬೇಕೆಂದು ಓಡಿದನು.
тече же противу Ему укоризною в толщи хребта щита своего:
27 ೨೭ ಅವನು ಮುಖದಲ್ಲಿ ಕೊಬ್ಬೇರಿಸಿಕೊಂಡು ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದನು.
яко покры лице свое туком своим и сотвори омет на стегнах: (хвала же его укоризна).
28 ೨೮ ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.
Да вселится же во градех пустых, внидет же в домы ненаселенныя: а яже они уготоваша, инии отнесут.
29 ೨೯ ಇಂಥವನು ಐಶ್ವರ್ಯವಂತನಾಗುವುದಿಲ್ಲ, ಅವನ ಆಸ್ತಿಯು ಸ್ಥಿರವಾಗಿ ನಿಲ್ಲದು. ಅವನ ಪ್ರತಿ ಫಲವು ಭಾರದಿಂದ ಭೂಮಿಯ ಕಡೆಗೆ ಬಾಗುವುದಿಲ್ಲ.
Ниже обогатится, ниже останет имение его, не имать положити на землю сени,
30 ೩೦ ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.
ниже избежит тмы: прозябение его да усушит ветр, и да отпадет цвет его:
31 ೩೧ ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,
да не верит, яко стерпит, тщетная бо сбудутся ему.
32 ೩೨ ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,
Посечение его прежде часа растлеет, и леторасль его не облиственеет:
33 ೩೩ ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು.
да оыман будет якоже недозрелая ягода прежде часа, да отпадет же яко цвет масличия.
34 ೩೪ ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
Послушество бо нечестиваго смерть, огнь же пожжет домы мздоимцев:
35 ೩೫ ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
во чреве же приимет болезни, сбудется же ему тщета, чрево же его понесет лесть.

< ಯೋಬನು 15 >