< ಯೋಬನು 18 >

1 ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,
Şuahlı Bildad belə cavab verdi:
2 “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.
«Bu sözlər nə vaxt qurtaracaq? Əgər dərrakəli olsanız, danışarıq.
3 ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
Niyə heyvana bənzəyək? Gözlərinizə axmaq kimi görünək?
4 ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?
Özünü hirsindən didib-dağıdırsan. Sənə görə bu aləmdən vaz keçəkmi? Yoxsa sal qayalar yerindən çıxsın?
5 ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.
Bəli, şər insanın işığı sönəcək, Odu-alovu parlamayacaq.
6 ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.
Çadırında nur qaranlığa dönəcək, Yanındakı çıraq sönəcək.
7 ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.
Addımları gücdən düşəcək, Öz işlətdiyi fənddən yıxılacaq.
8 ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.
Ayaqları onu tələyə aparacaq, Öz ayağı ilə tora düşəcək.
9 ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.
Kəmənd topuğundan tutacaq, Tələ açılıb onu qapacaq.
10 ೧೦ ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.
Torpaq üstə onun üçün gizli kəmənd səriləcək, Yolu üstə onu tələ gözləyəcək.
11 ೧೧ ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.
Dəhşət onu hər tərəfdən bürüyəcək, Hər addımda onu təqib edəcək.
12 ೧೨ ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.
Aclıq taqətini yeyib-qurtaracaq, Yanında fəlakət hazır dayanacaq.
13 ೧೩ ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.
Dərisini azar yeyəcək, Ölümün ilk övladı əzalarını yeyib işini bitirəcək.
14 ೧೪ ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
Əmin-amanlıq çadırından atılacaq, Dəhşətlər padşahının yanına aparılacaq.
15 ೧೫ ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.
Çadırında ona aid heç nə olmayacaq, Yurduna kükürd yağacaq.
16 ೧೬ ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.
Aşağıda rişələri quruyacaq, Yuxarıda budaqları solacaq.
17 ೧೭ ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.
Onun adı yer üzündə unudulacaq, Məhəllə-küçələrdə adı yaddan çıxacaq.
18 ೧೮ ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.
İşıqdan zülmətə aparılacaq, Dünyadan qovulacaq.
19 ೧೯ ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
Nə övladı, nə nəvəsi xalqı arasında olmayacaq, Məskənində bir kimsəsi qalmayacaq.
20 ೨೦ ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.
Qərbdəkilər halına heyrətlənəcək, Şərqdəkilər onu görüb dəhşətə gələcək.
21 ೨೧ ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”
Bəli, pislərin həyatının aqibəti budur, Allahı tanımayanların məskəni budur».

< ಯೋಬನು 18 >