< ಯೋಬನು 18 >
1 ೧ ಆಗ ಶೂಹ್ಯನಾದ ಬಿಲ್ದದನು ಪ್ರತ್ಯುತ್ತರವಾಗಿ ಹೀಗೆಂದನು,
Kwathi lapho uBhilidadi umShuhi waphendula wathi:
2 ೨ “ಇನ್ನೆಷ್ಟರವರೆಗೆ ಮಾತುಗಳನ್ನು ಹಿಡಿಯುವುದಕ್ಕೆ ಹೊಂಚು ಹಾಕುತ್ತಿರುವೆ? ಮೊದಲು ನೀನು ಆಲೋಚಿಸು, ಆ ಮೇಲೆ ಮಾತನಾಡೋಣ.
“Koze kube nini ulokhu uphethe emlonyeni? Nakana andubana sikhulume.
3 ೩ ಏಕೆ ನಮ್ಮನ್ನು ಮೃಗಗಳೆಂದು ಎಣಿಸಿದ್ದೀ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?
Kungani usithatha njengezinkomo kube ingathi siyizithutha kuwe na?
4 ೪ ಸಿಟ್ಟಿನಿಂದ ನಿನ್ನನ್ನು ಸೀಳಿಕೊಳ್ಳುವವನೇ, ನಿನಗಾಗಿ ಲೋಕವೇ ಹಾಳಾಗಬೇಕೋ, ಬಂಡೆಯು ತನ್ನ ಸ್ಥಳದಿಂದ ಜರುಗಬೇಕೋ?
Wena ozidabudabulayo ube yiziqa ngokuthukuthela kwakho, uthi sesingawudela umhlaba ngenxa yakho? Loba uthi amadwala agudlulwe ezindaweni zawo na?
5 ೫ ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.
Isibane somubi siyacima; ilangabi lomlilo wakhe liyaphela ukubhebha.
6 ೬ ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು, ಅವನ ಮೇಲಣ ತೂಗು ದೀವಿಗೆಯು ನಂದಿಹೋಗುವುದು.
Ukukhanya ethenteni lakhe kuyafiphala; isibane esiseceleni kwakhe siyacima.
7 ೭ ಅವನ ಬಲವುಳ್ಳ ಹೆಜ್ಜೆಗಳು ಇಕ್ಕಟ್ಟಾಗುವುದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವುದು.
Izisinde zakhe zamandla ziyadeda; lamacebo akhe yiwo amlahla phansi.
8 ೮ ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.
Inyawo zakhe zimbeka emambuleni acine esemthandele.
9 ೯ ಬಲೆ ಅವನ ಹಿಮ್ಮಡಿಯನ್ನು ಸಿಕ್ಕಿಸಿ ಕಚ್ಚುವುದು, ಉರುಲು ಅವನನ್ನು ಹಿಡಿಯುವುದು.
Umjibila umhwiphula ngesithende; isihitshela simuthi nki.
10 ೧೦ ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗಾಗಿ ಹೊಂಚಿಕೊಂಡಿರುವವು.
Isihitshela usifihlelwe phansi; umjibila uthukuziwe endleleni yakhe.
11 ೧೧ ಎಲ್ಲಾ ಕಡೆಯಲ್ಲಿಯೂ ಅಪಾಯಗಳು ಅವನನ್ನು ಹೆದರಿಸಿ; ಅವನ ಹಿಮ್ಮಡಿ ತುಳಿಯುತ್ತಾ ಬೆನ್ನು ಹತ್ತುವವು.
Uyethuka ngokwesaba inxa zonke kumlandelele langaphi aya khona.
12 ೧೨ ಅವನ ಬಲವು ಕುಂದಿಹೋಗುವುದು. ಅವನು ಎಡವಿ ಬಿದ್ದಾನೇ ಎಂದು ವಿಪತ್ತು ಕಾದಿರುವುದು.
Umonakalo umlambele; incithakalo imlindele nxa esiwa.
13 ೧೩ ಮೃತ್ಯುವಿನ ಹಿರಿಯ ಮಗನು ಅವನ ಚರ್ಮವನ್ನು ಚೂರು ಚೂರಾಗಿ ತಿಂದು, ಅವನ ಅಂಗಗಳನ್ನು ನುಂಗಿಬಿಡುವನು.
Kudla ingxenye yesikhumba sakhe; izibulo lokufa lidla izitho zakhe.
14 ೧೪ ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.
Uyasuswa ekuvikelekeni kwethente lakhe aqhutshwe asiwe enkosini yokwesaba.
15 ೧೫ ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.
Umlilo uhlala ethenteni lakhe; isolufa evuthayo ichithachithwe emzini wakhe.
16 ೧೬ ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.
Impande zakhe ziyabuna ngaphansi lamagatsha akhe abune ngaphezulu.
17 ೧೭ ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು, ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.
Ukukhunjulwa kwakhe kuyaphela emhlabeni; kalabizo elizweni.
18 ೧೮ ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.
Uyasuswa ekukhanyeni aye ebumnyameni njalo axotshwe emhlabeni.
19 ೧೯ ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ. ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
Kalabantwana loba isizukulwane ebantwini bakibo, kakho loyedwa owakhe lapho ake ahlala khona.
20 ೨೦ ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.
Abantu bentshonalanga bayanengwa yisiphetho sakhe; abantu bempumalanga bayatshaqeka.
21 ೨೧ ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ. ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.”
Ngempela linjalo ikhaya lomuntu omubi; yiyo indawo yalowo ongamaziyo uNkulunkulu.”