< ಯೋಬನು 19 >
1 ೧ ಆಗ ಯೋಬನು ಪುನಃ ಇಂತೆಂದನು,
Hiob ɖo eŋu be,
2 ೨ “ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?
“Va se ɖe ɣe ka ɣie miawɔ funyafunyam eye miatsɔ miaƒe nyawo agbãm?
3 ೩ ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.
Zi ewo sɔŋue nye esi miedo vlom eye mieti kpo dze dzinye ŋumakpemakpetɔe.
4 ೪ ನಾನು ನಿಜವಾಗಿ ತಪ್ಪುಮಾಡಿದ್ದರೆ ಆ ತಪ್ಪು ನನ್ನದೇ.
Nenye nyateƒee be metra mɔ la, vodada sia nye nye ɖeka ko ƒe nya.
5 ೫ ನನ್ನ ವಿರುದ್ಧವಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಂಡು ನನಗಾದ ಅವಮಾನವನ್ನು ನ್ಯಾಯವೆಂದು ಸ್ಥಾಪಿಸುವುದಕ್ಕೆ ನಿಜವಾಗಿ ಇಷ್ಟಪಡುವಿರೋ?
Nenye vavãe miebe yewoakɔ mia ɖokuiwo ɖe dzi agbɔ tanye, ahazã vlo si wodom la aɖia nunyee la,
6 ೬ ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.
ekema minyae be Mawu dze agɔ le dzinye eye wòtsɔ eƒe ɖɔ ƒo xlãm.
7 ೭ ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
“Togbɔ be mefa avi sesĩe be, ‘Wodze agɔ le dzinye!’ hã la, ame aɖeke metɔ nam o eye togbɔ be medo ɣli be woaxɔ nam hã la, wometso nam o.
8 ೮ ನಾನು ಮುಂದೆ ಹೋಗದ ಹಾಗೆ ಆತನು ನನ್ನ ದಾರಿಗೆ ಅಡ್ಡಗೋಡೆ ಹಾಕಿ, ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾನೆ.
Exe nye mɔ be nyemate ŋu ato edzi ayi o, etsɔ viviti tsyɔ nye toƒewo.
9 ೯ ನನ್ನ ಘನತೆಯನ್ನು ಸುಲಿದುಬಿಟ್ಟು, ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾನೆ.
Eklo bubu le ŋunye eye wòɖe fiakuku le tanye.
10 ೧೦ ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.
Evuvum kɔ ɖi le akpa sia akpa va se ɖe esime medzo, ale wòho nye mɔkpɔkpɔ abe ati ene.
11 ೧೧ ನನ್ನ ಮೇಲೆ ತನ್ನ ಕೋಪಾಗ್ನಿಯನ್ನು ಧಗಧಗಿಸಿ; ಉರಿಯುವಂತೆ ಮಾಡಿ ನನ್ನನ್ನು ವೈರಿಯೆಂದೆಣಿಸಿದ್ದಾನೆ.
Eƒe dziku bi ɖe ŋunye eye wòbum ɖe eƒe ketɔwo dome.
12 ೧೨ ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.
Eƒe aʋakɔwo lũ ɖe eme kple ŋusẽ, woƒu kpo ɖe ŋunye eye woƒu asaɖa anyi ɖe nye agbadɔ ŋu godoo va kpe.
13 ೧೩ ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.
“Eɖe nɔvinye ŋutsuwo ɖa le ŋunye eye wòklã nye kple xɔ̃nyewo dome keŋkeŋkeŋ.
14 ೧೪ ನನ್ನ ಬಂಧುಗಳು ನನ್ನನ್ನು ಬಿಟ್ಟುಬಿಟ್ಟಿದ್ದಾರೆ, ನನಗೆ ಪರಿಚಯವಿದ್ದವರು ನನ್ನನ್ನು ಮರೆತಿದ್ದಾರೆ.
Nye ƒometɔwo dzo le gbɔnye eye nye ame nyanyɛwo ŋlɔm be.
15 ೧೫ ನನ್ನ ಪರಿಜನರೂ, ದಾಸಿಯರೂ ನನ್ನನ್ನು ಅನ್ಯನೆಂದೆಣಿಸುತ್ತಾರೆ, ಅವರ ದೃಷ್ಟಿಗೆ ಪರದೇಶಿಯಾಗಿದ್ದಾನೆ.
Ame siwo va dze gbɔnye kple nye nyɔnudɔlawo bum amedzroe eye mezu du bubu me tɔ le wo ŋkume.
16 ೧೬ ನಾನು ನನ್ನ ಆಳನ್ನು ಕರೆದರೂ ಅವನು ಉತ್ತರಕೊಡುವುದಿಲ್ಲ, ಬಾಯಿ ತೆರೆದು ಬೇಡಿಕೊಳ್ಳಬೇಕಾಗಿ ಬಂತು.
Meyɔ nye dɔla gake metɔ o togbɔ be metsɔ nye nu ɖe kuku nɛ hafi.
17 ೧೭ ನನ್ನ ಉಸಿರು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಒಡಹುಟ್ಟಿದವರಿಗೂ ಹೇಸಿಕೆಯಾಗಿದ್ದೇನೆ.
Nye nu me le ʋeʋẽm ɖe nye ŋutɔ srɔ̃nye eye mele ŋu nyɔm na nye ŋutɔ nɔvinye ŋutsuwo.
18 ೧೮ ಚಿಕ್ಕವರೂ ಕೂಡ ನನ್ನನ್ನು ಹೀನೈಸುತ್ತಾರೆ, ನಾನು ಏಳಲು ಪ್ರಯಾಸಪಡುತ್ತಿರುವಾಗ ಅವರ ಹರಟೆಗೆ ಗುರಿಯಾಗುತ್ತೇನೆ.
Ŋutsuvi suewo gɔ̃ hã koam eye ne meva do la, woɖua fewu le ŋunye.
19 ೧೯ ನನ್ನ ಆಪ್ತಮಿತ್ರರೆಲ್ಲರೂ ನನ್ನನ್ನು ನೋಡಿ ಹೇಸಿಕೊಳ್ಳುತ್ತಾರೆ; ನನ್ನ ಪ್ರೀತಿಪಾತ್ರರು ಸಹ ನನ್ನ ಮೇಲೆ ತಿರುಗಿಬಿದ್ದಿದ್ದಾರೆ.
Mele ŋu nyɔm na xɔ̃nye veviwo katã eye ame siwo melɔ̃ la, tso ɖe ŋutinye.
20 ೨೦ ನನ್ನ ಎಲುಬು ಚರ್ಮಕ್ಕೂ, ಮಾಂಸಕ್ಕೂ ಅಂಟಿಹೋಗಿದೆ, ಹಲ್ಲಿನ ಪರೆಯನ್ನು ಮಾತ್ರ ಉಳಿಸಿಕೊಂಡು (ಮರಣಕ್ಕೆ) ಓರೆಯಾಗಿದ್ದೇನೆ.
Mezu ŋutilã kple ƒu ɖeɖe, eye meɖo kudo nu.
21 ೨೧ ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.
“Mikpɔ nye nublanui, xɔ̃nyewo, mikpɔ nublanui nam elabena Mawu ƒe asi ƒom.
22 ೨೨ ದೇವರ ಹಾಗೆ ನೀವೂ ನನ್ನನ್ನು ಏಕೆ ಹಿಂಸಿಸುತ್ತೀರಿ? ನನ್ನನ್ನು ಹಿಂಸಿಸಿ ನಿಮಗೆ ಸಾಕಾಗಲಿಲ್ಲವೋ?
Nu ka ta mieti yonyeme abe ale si Mawu ti yonyemee ene? Nye ŋutilã si mieɖu la mesɔ gbɔ na mi oa?
23 ೨೩ ಆಹಾ, ನನ್ನ ಮಾತುಗಳನ್ನು ಬರೆದಿಟ್ಟರೆ ಎಷ್ಟೋ ಲೇಸು! ಪುಸ್ತಕದಲ್ಲಿ ದಾಖಲಿಸಿದರೆ ಎಷ್ಟೋ ಒಳ್ಳೆಯದು!
“O nenye ɖe woaŋlɔ nye nyawo ɖi, nenye ɖe woaŋlɔe ɖe agbalẽ me eye
24 ೨೪ ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!
nenye ɖe woatsɔ gayibɔnuŋlɔnu aɖee ɖe akɔblikpe dzi alo woaɖee ɖe agakpe dzi tegbee hã la, anyo ŋutɔ.
25 ೨೫ ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
Menya be nye Xɔnametɔ le agbe, eye mlɔeba la, atsi tsitre ɖe anyigba dzi.
26 ೨೬ ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
Eye ne nye ŋutigbalẽ vuvu keŋkeŋkeŋ hã la, makpɔ Mawu le nye ŋutilã me,
27 ೨೭ ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.
Nye ŋutɔ makpɔe, makpɔe kple nye ŋkuwo, menye ame bubu aɖeke tɔ o. Aleke nye dzi mehetsi dzi ɖe eŋui o!
28 ೨೮ ಅವನಿಗೆ, ‘ಆದಷ್ಟು ಹಿಂಸೆಯನ್ನು ಮಾಡೋಣ, ಅವನಿಗೆ ಸಂಭವಿಸಿದ್ದಕ್ಕೆ ಮೂಲವು ಅವನಲ್ಲಿಯೇ ಅಡಗಿದೆ’ ಎಂದು ನೀವು ಆಡಿಕೊಂಡ ಕಾರಣ,
“Ne miegblɔ be, ‘Aleke míadi vɔ̃ nɛ? Eya ŋutɔ gbɔ kuxiawo tso’ la,
29 ೨೯ ಕತ್ತಿಗೆ ಭಯಪಡಿರಿ, ಏಕೆಂದರೆ ಕತ್ತಿಯ ದಂಡನೆಗಳು ತೀಕ್ಷ್ಣವಾಗಿದೆ, ಇದರಿಂದ ನ್ಯಾಯನಿರ್ಣಯವುಂಟೆಂದು ತಿಳಿದುಕೊಳ್ಳುವಿರಿ.”
ekema yi nedo vɔvɔ̃ na miawo ŋutɔ elabena dziku atsɔ yi ahe toe eye mianya be ʋɔnudɔdrɔ̃ li.”