< ಯೋಬನು 2 >
1 ೧ ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.
फिर एक दिन जब स्वर्गदूत याहवेह की उपस्थिति में एकत्र हुए, शैतान भी उनके मध्य में आया था, कि वह स्वयं को परमेश्वर के सामने प्रस्तुत करे.
2 ೨ ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
याहवेह ने शैतान से प्रश्न किया, “तुम कहां से आ रहे हो?” शैतान ने याहवेह को उत्तर दिया, “पृथ्वी पर इधर-उधर घूमते-फिरते तथा इसकी चारों दिशाओं में डोलते-डालते आया हूं.”
3 ೩ ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
याहवेह ने शैतान से प्रश्न किया, “क्या तुमने अय्योब, मेरे सेवक पर ध्यान दिया है? क्योंकि पृथ्वी पर कोई भी उसके तुल्य नहीं है. वह सीधा, ईमानदार, परमेश्वर के प्रति श्रद्धा युक्त तथा बुराई से दूर रहनेवाला व्यक्ति है. अब भी वह अपनी खराई पर अटल है, जबकि तुम्हीं हो जिसने उसे नष्ट करने के लिए मुझे अकारण ही उकसाया था.”
4 ೪ ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
शैतान ने याहवेह को जवाब दिया, “खाल का विनिमय खाल से! अपने प्राणों की रक्षा में मनुष्य अपना सर्वस्व देने के लिए तैयार हो जाता है.
5 ೫ ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.
अब आप उसकी हड्डी तथा मांस को स्पर्श कीजिए; तब वह आपके सामने आपकी निंदा करने लगेगा.”
6 ೬ ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.
यह सुनकर याहवेह ने शैतान को उत्तर दिया, “सुनो, अब वह तुम्हारे अधिकार में है; बस इतना ध्यान रहे कि उसका जीवन सुरक्षित रहे.”
7 ೭ ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
शैतान याहवेह की उपस्थिति से चला गया और जाकर अय्योब पर ऐसा प्रहार किया कि उनकी देह पर, तलवों से लेकर सिर तक, दुखदाई फोड़े निकल आए.
8 ೮ ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
वह राख में जा बैठे और एक ठीकरे के टुकड़े से स्वयं को खुजलाने लगे.
9 ೯ ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
यह सब देख उनकी पत्नी ने उनसे कहा, “क्या तुम अब भी अपनी खराई को ही थामे रहोगे? परमेश्वर की निंदा करो और मर जाओ!”
10 ೧೦ ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
किंतु अय्योब ने उसे उत्तर दिया, “तुम तो मूर्ख स्त्रियों के समान बक-बक करने लगी हो. क्या हमारे लिए यह भला होगा कि परमेश्वर से सुख स्वीकार करते जाएं और दुःख कुछ भी नहीं?” इन सभी स्थितियों में अय्योब ने अपने मुख द्वारा कोई पाप नहीं किया.
11 ೧೧ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.
जब अय्योब के तीन मित्रों को अय्योब की दुखद स्थिति का समाचार प्राप्त हुआ, तब तीनों ही अपने-अपने स्थानों से अय्योब के घर आ गए, तेमानी से एलिफाज़, शूही से बिलदद तथा नआमथ से ज़ोफर. इन तीनों ने योजना बनाई कि सहानुभूति एवं सांत्वना देने के लिए वे अय्योब से भेंट करेंगे.
12 ೧೨ ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
जब वे दूर ही थे तथा उन्होंने अय्योब की ओर देखा, तो वे उन्हें पहचान ही न सके. वे उच्च स्वर में रोने लगे. हर एक ने अपने-अपने वस्त्रों को फाड़कर अपने-अपने ऊपर धूल डाल ली.
13 ೧೩ ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.
तब वे जाकर अय्योब के निकट भूमि पर सात दिन एवं सात रात्रि चुप बैठे रहे, क्योंकि उनके सामने यह पूर्णतः स्पष्ट था कि अय्योब की पीड़ा अत्यंत भयानक थी.