< ಯೋಬನು 20 >
1 ೧ ಆ ಮೇಲೆ ನಾಮಾಥ್ಯನಾದ ಚೋಫರನು ಹೀಗೆಂದನು,
১তেতিয়া নামাথীয়া চোফৰে পুনৰায় উত্তৰ কৰি ক’লে,
2 ೨ “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.
২মোৰ ভাৱনাই উত্তৰ দিবলৈ মোক উদগাইছে, কাৰণ এইবোৰে মোক অন্তৰক অধৈৰ্য কৰিছে।
3 ೩ ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
৩মোক লাজ দিয়া উপদেশ মই শুনিলোঁ, তথাপি মোৰ বুদ্ধিদায়ক আত্মাই মোক উত্তৰ যোগাইছে।
4 ೪ ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,
৪কেতিয়াৰ পৰা ঈশ্বৰে পৃথিৱীত মনুষ্যক স্থাপন কৰিছিল, কালৰ আৰম্ভণিৰ সেই ৰহস্য তুমি নাজানা,
5 ೫ ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
৫দুষ্টবোৰৰ জয়-ধ্বনি যে অলপদিনীয়া, আৰু অধাৰ্মিকৰ আনন্দ যে খন্তেকীয়া, ইয়াক তুমি নাজানা নে?
6 ೬ ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,
৬যদি দুষ্টলোকৰ মাহাত্ম্যই আকাশ পায়গৈ, আৰু তাৰ মুৰ মেঘত লাগে,
7 ೭ ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.
৭তথাপি সি নিজ বিষ্ঠাৰ দৰে চিৰকাললৈকে নষ্ট হ’ব, যিবিলাকে তাক দেখিছিল, তেওঁবিলাকে সুধিব, সি ক’ত আছে?
8 ೮ ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.
৮সি সপোনৰ দৰে উড়ি যাব, তাক পুনৰ পোৱা নাযাব; এনে কি, ৰাতিকালৰ দৰ্শনৰ দৰে সি লুপ্ত হ’ব।
9 ೯ ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ.
৯যি চকুৱে তাক দেখিছিল, সেই চকুৱে তাক পুনৰ নেদেখিব; তাৰ নিবাসৰ ঠায়ে তাক পুনৰ দেখা নাপাব।
10 ೧೦ ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.
১০তাৰ সন্তানবোৰে দৰিদ্ৰসকলৰ পৰা অনুগ্ৰহ বিচাৰিব, আৰু তাৰ নিজ হাতে তাৰ ধন-সম্পত্তি ওভোটাই দিব।
11 ೧೧ ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
১১তাৰ অস্থিবোৰ ডেকা কালৰ শক্তিৰ পৰিপূৰ্ণ, কিন্তু ইয়ো তাৰ লগত ধূলিত শুব।
12 ೧೨ ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ,
১২যদিও দুষ্টতা তাৰ মুখত সোৱাদ লাগে, যদিও সি জিভাৰ তলত তাক লুকুৱাই ৰাখে,
13 ೧೩ ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ
১৩যদিও সি তাতে ধৰি ৰাখে আৰু এৰি দিব নিবিচাৰে, কিন্তু তাৰ মুখৰ ভিতৰতে তাক ৰাখি থয়,
14 ೧೪ ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು.
১৪তথাপি তাৰ আহাৰ পেট পাই বিকৃত হয়, সেয়ে তাৰ ভিতৰত কালসৰ্পৰ বিষস্বৰূপ হৈ পৰে।
15 ೧೫ ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.
১৫সি ধন-সম্পত্তি গ্ৰাস কৰে, আৰু তাক পুনৰাই বতিঁয়াই পেলাব; ঈশ্বৰে তাৰ পেটৰ পৰা তাক উলিয়াই পেলাব।
16 ೧೬ ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು.
১৬সি কালসৰ্পৰ বিষ চুহিব; বিশাল সাপৰ জিভাই তাক বধ কৰিব।
17 ೧೭ ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.
১৭সি নদীবোৰ দেখা নাপাব, মৌ আৰু দৈ গাখীৰ বৈ যোৱা সুঁতিবোৰ নেদেখিব।
18 ೧೮ ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.
১৮সি নিজ পৰিশ্ৰমৰ ফল ওভোটাই দিব, গ্ৰাস নকৰিব; সি লাভ পোৱা নিজ সম্পত্তি অনুসাৰে উল্লাস নকৰিব।
19 ೧೯ ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
১৯সি দৰিদ্ৰবোৰক উপদ্ৰৱ আৰু ত্যাগ কৰিলে; এই হেতুকে যি ঘৰ কাঢ়ি ল’লে, সেই ঘৰ সি সাজি উলিয়াব নোৱাৰিব।
20 ೨೦ ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.
২০তাৰ পেট কেতিয়াও তৃপ্ত নহয়; এই হেতুকে সি নিজৰ মৰমৰ বস্তুৰ মাজৰ একোকে ৰক্ষা কৰিব নোৱাৰিব।
21 ೨೧ ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು.
২১সি গ্ৰাস নকৰা একোৱেই বাকী নাই; এই কাৰণে তাৰ মঙ্গল চিৰকলীয়া নহ’ব।
22 ೨೨ ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.
২২তাৰ বস্তু-বাহানি জোৰাওকৈ থকা সময়তো সি ঠেকত পৰিব; দুখত পৰা প্ৰতিজনৰ হাতে তাক আক্ৰমণ কৰিব।
23 ೨೩ ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.
২৩সি নিজ পেট ভৰাবলৈ ধৰোঁতেই, ঈশ্বৰে তাৰ ওপৰত ক্ৰোধাগ্নি পেলাব, আৰু সি খাই থাকোঁতেই তাৰ ওপৰত তাক বৰষাব।
24 ೨೪ ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.
২৪সি লোহাৰ অস্ত্ৰৰ পৰা পলাই যাব; কিন্তু পিতলৰ ধনুবাণে তাক সৰকাই পেলাব।
25 ೨೫ ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
২৫সি বাণ টানিলে, সেয়ে তাৰ গাৰ পৰা ওলাই আহে; এনে কি, তাৰ তিৰবিৰোৱা আগ, তাৰ পিত্তৰ পৰা বাহিৰ হয়; তাতে মৰণৰ ভয়ে তাক আক্ৰমণ কৰে।
26 ೨೬ ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.
২৬তাৰ সঞ্চিত বস্তুৰ অৰ্থে ঘোৰ আন্ধাৰ ৰাখি থোৱা হৈছে, মানুহে নধৰা জুয়ে তাক গ্ৰাস কৰিব; সেয়ে তাৰ তম্বুত থকা অৱশিষ্ট বস্তু ভষ্ম কৰিব।
27 ೨೭ ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.
২৭আকাশ-মণ্ডলে তাৰ অপৰাধ প্ৰকাশ কৰিব, আৰু পৃথিৱী তাৰ বিৰুদ্ধে উঠিব।
28 ೨೮ ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
২৮তাৰ ঘৰৰ সম্পত্তি উড়ি যাব; ঈশ্বৰৰ ক্ৰোধৰ দিনা তাক ধল পানীয়ে উটুৱাই নিব।
29 ೨೯ ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”
২৯দুষ্ট মানুহে ঈশ্বৰৰ পৰা পাবলগীয়া ভাগ এয়ে, আৰু এয়ে ঈশ্বৰে নিৰূপণ কৰা তাৰ অধিকাৰ।