< ಯೋಬನು 21 >
2 ೨ “ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ.
२“चित्त लगाकर मेरी बात सुनो; और तुम्हारी शान्ति यही ठहरे।
3 ೩ ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.
३मेरी कुछ तो सहो, कि मैं भी बातें करूँ; और जब मैं बातें कर चुकूँ, तब पीछे ठट्ठा करना।
4 ೪ ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು?
४क्या मैं किसी मनुष्य की दुहाई देता हूँ? फिर मैं अधीर क्यों न होऊँ?
5 ೫ ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ,
५मेरी ओर चित्त लगाकर चकित हो, और अपनी-अपनी उँगली दाँत तले दबाओ।
6 ೬ ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.
६जब मैं कष्टों को स्मरण करता तब मैं घबरा जाता हूँ, और मेरी देह काँपने लगती है।
7 ೭ ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?
७क्या कारण है कि दुष्ट लोग जीवित रहते हैं, वरन् बूढ़े भी हो जाते, और उनका धन बढ़ता जाता है?
8 ೮ ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.
८उनकी सन्तान उनके संग, और उनके बाल-बच्चे उनकी आँखों के सामने बने रहते हैं।
9 ೯ ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು.
९उनके घर में भयरहित कुशल रहता है, और परमेश्वर की छड़ी उन पर नहीं पड़ती।
10 ೧೦ ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು.
१०उनका साँड़ गाभिन करता और चूकता नहीं, उनकी गायें बियाती हैं और बच्चा कभी नहीं गिराती।
11 ೧೧ ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.
११वे अपने लड़कों को झुण्ड के झुण्ड बाहर जाने देते हैं, और उनके बच्चे नाचते हैं।
12 ೧೨ ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
१२वे डफ और वीणा बजाते हुए गाते, और बांसुरी के शब्द से आनन्दित होते हैं।
13 ೧೩ ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol )
१३वे अपने दिन सुख से बिताते, और पल भर ही में अधोलोक में उतर जाते हैं। (Sheol )
14 ೧೪ ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
१४तो भी वे परमेश्वर से कहते थे, ‘हम से दूर हो! तेरी गति जानने की हमको इच्छा नहीं है।
15 ೧೫ ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.
१५सर्वशक्तिमान क्या है, कि हम उसकी सेवा करें? और यदि हम उससे विनती भी करें तो हमें क्या लाभ होगा?’
16 ೧೬ ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
१६देखो, उनका कुशल उनके हाथ में नहीं रहता, दुष्ट लोगों का विचार मुझसे दूर रहे।
17 ೧೭ ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?
१७“कितनी बार ऐसे होता है कि दुष्टों का दीपक बुझ जाता है, या उन पर विपत्ति आ पड़ती है; और परमेश्वर क्रोध करके उनके हिस्से में शोक देता है,
18 ೧೮ ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?
१८वे वायु से उड़ाए हुए भूसे की, और बवण्डर से उड़ाई हुई भूसी के समान होते हैं।
19 ೧೯ ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.
१९तुम कहते हो ‘परमेश्वर उसके अधर्म का दण्ड उसके बच्चों के लिये रख छोड़ता है,’ वह उसका बदला उसी को दे, ताकि वह जान ले।
20 ೨೦ ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.
२०दुष्ट अपना नाश अपनी ही आँखों से देखे, और सर्वशक्तिमान की जलजलाहट में से आप पी ले।
21 ೨೧ ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?
२१क्योंकि जब उसके महीनों की गिनती कट चुकी, तो अपने बादवाले घराने से उसका क्या काम रहा।
22 ೨೨ ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?
२२क्या परमेश्वर को कोई ज्ञान सिखाएगा? वह तो ऊँचे पद पर रहनेवालों का भी न्याय करता है।
23 ೨೩ ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.
२३कोई तो अपने पूरे बल में बड़े चैन और सुख से रहता हुआ मर जाता है।
24 ೨೪ ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು.
२४उसकी देह दूध से और उसकी हड्डियाँ गूदे से भरी रहती हैं।
25 ೨೫ ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.
२५और कोई अपने जीव में कुढ़कुढ़कर बिना सुख भोगे मर जाता है।
26 ೨೬ ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.
२६वे दोनों बराबर मिट्टी में मिल जाते हैं, और कीड़े उन्हें ढांक लेते हैं।
27 ೨೭ ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.
२७“देखो, मैं तुम्हारी कल्पनाएँ जानता हूँ, और उन युक्तियों को भी, जो तुम मेरे विषय में अन्याय से करते हो।
28 ೨೮ ‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.
२८तुम कहते तो हो, ‘रईस का घर कहाँ रहा? दुष्टों के निवास के तम्बू कहाँ रहे?’
29 ೨೯ ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,
२९परन्तु क्या तुम ने बटोहियों से कभी नहीं पूछा? क्या तुम उनके इस विषय के प्रमाणों से अनजान हो,
30 ೩೦ ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?
३०कि विपत्ति के दिन के लिये दुर्जन सुरक्षित रखा जाता है; और महाप्रलय के समय के लिये ऐसे लोग बचाए जाते हैं?
31 ೩೧ ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?
३१उसकी चाल उसके मुँह पर कौन कहेगा? और उसने जो किया है, उसका पलटा कौन देगा?
32 ೩೨ ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು.
३२तो भी वह कब्र को पहुँचाया जाता है, और लोग उस कब्र की रखवाली करते रहते हैं।
33 ೩೩ ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
३३नाले के ढेले उसको सुखदायक लगते हैं; और जैसे पूर्वकाल के लोग अनगिनत जा चुके, वैसे ही सब मनुष्य उसके बाद भी चले जाएँगे।
34 ೩೪ ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”
३४तुम्हारे उत्तरों में तो झूठ ही पाया जाता है, इसलिए तुम क्यों मुझे व्यर्थ शान्ति देते हो?”