< ಯೋಬನು 21 >

1 ಆಗ ಯೋಬನು ಇಂತೆಂದನು,
तब अय्यूब ने जवाब दिया,
2 “ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ. ನಿಮ್ಮಿಂದ ನನಗಾಗಬೇಕಾದ ಆದರಣೆಯು ಇಷ್ಟೇ.
ग़ौर से मेरी बात सुनो, और यही तुम्हारा तसल्ली देना हो।
3 ತಾಳ್ಮೆಯಿಂದಿರಿ, ನಾನೂ ಮಾತನಾಡುವೆನು, ಆಮೇಲೆ ಹಾಸ್ಯಮಾಡಿದರೂ ಮಾಡಿರಿ.
मुझे इजाज़त दो तो मैं भी कुछ कहूँगा, और जब मैं कह चुकूँ तो ठठ्ठा मारलेना।
4 ನಾನೇನು ಮನುಷ್ಯನ ವಿಷಯದಲ್ಲಿ ಗುಣುಗುಟ್ಟುತ್ತಿರುವೆನೆ? ನಾನೇಕೆ ಬೇಸರಗೊಳ್ಳಬಾರದು?
लेकिन मैं, क्या मेरी फ़रियाद इंसान से है? फिर मैं बेसब्री क्यूँ न करूँ?
5 ನನ್ನ ಕಡೆಗೆ ಗಮನಿಸಿ, ನಿಮ್ಮ ಬಾಯಿಯ ಮೇಲೆ ಕೈಯಿಟ್ಟು ಬೆರಗಾಗಿ,
मुझ पर ग़ौर करो और मुत'अजीब हो, और अपना हाथ अपने मुँह पर रखो।
6 ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.
जब मैं याद करता हूँ तो घबरा जाता हूँ, और मेरा जिस्म थर्रा उठता है।
7 ದುಷ್ಟರು ಬಾಳಿ ವೃದ್ಧರಾಗುವುದಕ್ಕೂ, ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?
शरीर क्यूँ जीते रहते, उम्र रसीदा होते, बल्कि कु़व्वत में ज़बरदस्त होते हैं?
8 ಅವರ ಸಂತಾನದವರು ಅವರೊಂದಿಗಿರುತ್ತಾ ಅವರ ಮುಂದೆಯೇ ಸುಸ್ಥಿರವಾಗಿರುವರು, ಅವರ ಮಕ್ಕಳು ಅವರ ಕಣ್ಣೆದುರಿನಲ್ಲಿ ಅಚಲವಾಗಿ ನಿಲ್ಲುವರು.
उनकी औलाद उनके साथ उनके देखते देखते, और उनकी नसल उनकी आँखों के सामने क़ाईम हो जाती है।
9 ಅವರ ಮನೆಗಳು ಸುರಕ್ಷಿತವಾಗಿ ನಿರ್ಭಯದಿಂದ ಇರುವವು; ದೇವರ ದಂಡವು ಅವರ ಮೇಲೆ ಬೀಳದು.
उनके घर डर से महफ़ूज़ हैं, और ख़ुदा की छड़ी उन पर नहीं है।
10 ೧೦ ಅವರ ಗೂಳಿಯು ಬೇಸರಗೊಳ್ಳದೆ ಸಂತತಿಯನ್ನು ಹುಟ್ಟಿಸುತ್ತದೆ; ಅವರ ಹಸುವು ಕಂದುಹಾಕದೆ ಈಯುವುದು.
उनका साँड बरदार कर देता है और चूकता नहीं, उनकी गाय ब्याती है और अपना बच्चा नहीं गिराती।
11 ೧೧ ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.
वह अपने छोटे छोटे बच्चों को रेवड़ की तरह बाहर भेजते हैं, और उनकी औलाद नाचती है।
12 ೧೨ ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.
वह ख़जरी और सितार के ताल पर गाते, और बाँसली की आवाज़ से ख़ुश होते हैं।
13 ೧೩ ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು. (Sheol h7585)
वह ख़ुशहाली में अपने दिन काटते, और दम के दम में पाताल में उतर जाते हैं। (Sheol h7585)
14 ೧೪ ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
हालाँकि उन्होंने ख़ुदा से कहा था, कि 'हमारे पास से चला जा; क्यूँकि हम तेरी राहों के 'इल्म के ख़्वाहिशमन्द नहीं।
15 ೧೫ ಆ ಸರ್ವಶಕ್ತನಾದ ದೇವರು ಎಷ್ಟರವನು, ಆತನನ್ನು ನಾವು ಏಕೆ ಸೇವಿಸಬೇಕು? ಆತನಿಗೆ ವಿಜ್ಞಾಪನೆ ಮಾಡುವುದರಿಂದ ಪ್ರಯೋಜನವೇನು?’ ಎಂದೂ ಹೇಳುತ್ತಿದ್ದರು.
क़ादिर — ए — मुतलक़ है क्या कि हम उसकी इबादत करें? और अगर हम उससे दुआ करें तो हमें क्या फ़ायदा होगा?
16 ೧೬ ಆಹಾ, ಅವರ ಸುಖವು ಅವರ ಕೈಯಲ್ಲಿ ನೆಲಸಿರುವುದಿಲ್ಲ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
देखो, उनकी इक़बालमन्दी उनके हाथ में नहीं है। शरीरों की मशवरत मुझ से दूर है।
17 ೧೭ ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?
कितनी बार शरीरों का चराग़ बुझ जाता है? और उनकी आफ़त उन पर आ पड़ती है? और ख़ुदा अपने ग़ज़ब में उन्हें ग़म पर ग़म देता है?
18 ೧೮ ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸಾರಿ? ಎಷ್ಟು ಸಾರಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?
और वह ऐसे हैं जैसे हवा के आगे डंठल, और जैसे भूसा जिसे आँधी उड़ा ले जाती है?
19 ೧೯ ‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.
'ख़ुदा उसका गुनाह उसके बच्चों के लिए रख छोड़ता है, वह उसका बदला उसी को दे ताकि वह जान ले।
20 ೨೦ ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.
उसकी हलाकत को उसी की आँखें देखें, और वह क़ादिर — ए — मुतलक के ग़ज़ब में से पिए।
21 ೨೧ ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?
क्यूँकि अपने बाद उसको अपने घराने से क्या ख़ुशी है, जब उसके महीनों का सिलसिला ही काट डाला गया?
22 ೨೨ ಮೇಲಣ ಲೋಕದವರಿಗೂ, ನ್ಯಾಯತೀರಿಸುವ ದೇವರಿಗೂ ಜ್ಞಾನಬೋಧನೆಯನ್ನು ಮಾಡಬಹುದೇ?
क्या कोई ख़ुदा को 'इल्म सिखाएगा? जिस हाल की वह सरफ़राज़ों की 'अदालत करता है।
23 ೨೩ ಒಬ್ಬನು ಸಮೃದ್ಧನಾಗಿ, ತುಂಬಾ ಸುಖದಿಂದಲೂ, ನೆಮ್ಮದಿಯಿಂದಲೂ ಇರುವಾಗ ಸಾಯುವನು.
कोई तो अपनी पूरी ताक़त में, चैन और सुख से रहता हुआ मर जाता है।
24 ೨೪ ಅವನ ತೊಟ್ಟಿಗಳಲ್ಲಿ ಹಾಲು ತುಂಬಿರುವುದು, ಅವನ ಎಲಬುಗಳು ಮಜ್ಜೆಯಿಂದ ಸಾರವಾಗಿರುವುದು.
उसकी दोहिनियाँ दूध से भरी हैं, और उसकी हड्डियों का गूदा तर है;
25 ೨೫ ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.
और कोई अपने जी में कुढ़ कुढ़ कर मरता है, और कभी सुख नहीं पाता।
26 ೨೬ ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.
वह दोनों मिट्टी में यकसाँ पड़ जाते हैं, और कीड़े उन्हें ढाँक लेते हैं।
27 ೨೭ ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.
देखो, मैं तुम्हारे ख़यालों को जानता हूँ, और उन मंसूबों को भी जो तुम बे इन्साफ़ी से मेरे ख़िलाफ़ बाँधते हो।
28 ೨೮ ‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.
क्यूँकि तुम कहते हो, 'अमीर का घर कहाँ रहा? और वह ख़ेमा कहाँ है जिसमें शरीर बसते थे?
29 ೨೯ ನೀವು ಮಾರ್ಗಸ್ಥರನ್ನು ವಿಚಾರಿಸಲಿಲ್ಲವೋ? ಅವರು ಕೊಟ್ಟ ದೃಷ್ಟಾಂತಗಳಿಂದ,
क्या तुम ने रास्ता चलने वालों से कभी नहीं पूछा? और उनके निशान — आत नहीं पहचानते
30 ೩೦ ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?
कि शरीर आफ़त के दिन के लिए रख्खा जाता है, और ग़ज़ब के दिन तक पहुँचाया जाता है?
31 ೩೧ ನೀನು ದುರ್ಮಾರ್ಗಿ ಎಂದು ಅವನಿಗೆ ಮುಖಾಮುಖಿಯಾಗಿ ಯಾರು ತಾನೇ ಹೇಳುವರು? ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರು ಯಾರು?
कौन उसकी राह को उसके मुँह पर बयान करेगा? और उसके किए का बदला कौन उसे देगा?
32 ೩೨ ಅವನನ್ನು ಮೆರವಣಿಗೆಯಿಂದ ಸಮಾಧಿಗೆ ತೆಗೆದುಕೊಂಡು ಹೋಗುವರು; ಅವನ ಗೋರಿಗೆ ಕಾವಲಿಡುವರು.
तोभी वह क़ब्र में पहुँचाया जाएगा, और उसकी क़ब्र पर पहरा दिया जाएगा।
33 ೩೩ ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
वादी के ढेले उसे पसंद हैं; और सब लोग उसके पीछे चले जाएँगे, जैसे उससे पहले बेशुमार लोग गए।
34 ೩೪ ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವುದು ಮಿತ್ರ ದ್ರೋಹವೇ.”
इसलिए तुम क्यूँ मुझे झूठी तसल्ली देते हो, जिस हाल कि तुम्हारी बातों में झूँठ ही झूँठ है।

< ಯೋಬನು 21 >