< ಯೋಬನು 22 >
1 ೧ ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
၁တဖန် တေမန်အမျိုးသား ဧလိဖတ်မြွက်ဆိုသည် ကား၊
2 ೨ “ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.
၂လူသည် မိမိပညာအားဖြင့် မိမိအကျိုးကို ပြုစုသကဲ့သို့ ဘုရားသခင်၌ ကျေးဇူးပြုနိုင်သလော။
3 ೩ ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
၃သင်၏ဖြောင့်မတ်ခြင်းအားဖြင့်၊ အနန္တတန်ခိုး ရှင်သည် ကျေးဇူးရှိတော်မူသလော။ သင်၏အကျင့်၌ အပြစ်မပါကြောင်းကို ထင်ရှားစေသောအားဖြင့် အကျိုး စီးပွါးရှိတော်မူသလော။
4 ೪ ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
၄သင့်ကိုကြောက်ရွံ့သောကြောင့် ဆုံးမပေးတော် မူမည်လော။ သင်နှင့်တရားတွေ့တော်မူမည်လော။
5 ೫ ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?
၅သင်ပြုသော ဒုစရိုက်သည် အလွန်ကြီးသည် မဟုတ်လော။ သင့်အပြစ်တို့သည် မရေတွက်နိုင်အောင် များပြားသည်မဟုတ်လော။
6 ೬ ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.
၆သင်သည်ညီအစ်ကိုပေါင်ထားသော ဥစ္စာကို မတရားသဖြင့် ခံယူပြီ။ ဆင်းရဲသောသူတို့၏ အဝတ်ကို လည်း ချွတ်ယူပြီ။
7 ೭ ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.
၇မောသောသူသောက်ဘို့ ရေကိုမပေး။ ငတ်မွတ်သောသူကိုမကျွေး။
8 ೮ ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ.
၈အားကြီးသောသူမူကားမြေကို ပိုင်ရ၏။ ဂုဏ်အသရေရှိသော သူသည် နေရသောအခွင့်ကိုရ၏။
9 ೯ ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.
၉သင်သည် မုတ်ဆိုးမတို့ကို လက်ချည်းလွှတ်လိုက်၍၊ မိဘမရှိသော သူငယ်တို့၏လက်ကိုချိုးပြီ။
10 ೧೦ ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.
၁၀ထိုကြောင့် ကျော့ကွင်းနှင့် ကျော့မိပြီ၊ ထိတ်လန့်သောစိတ်နှင့် ပင်ပန်းရ၏။
11 ೧೧ ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.
၁၁မမြင်နိုင်သောမှောင်မိုက်သည် ညှဉ်းဆဲ၍၊ ပြင်းစွာစီးသောရေသည် လွှမ်းမိုးရ၏။
12 ೧೨ ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!
၁၂ဘုရားသခင်သည် ကောင်းကင်ဘဝဂ်ပေါ်မှာ ရှိတော်မူသည်မဟုတ်လော။ ကြယ်တို့သည် အဘယ်မျှ လောက်မြင့်ကြသည်တကား။
13 ೧೩ ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
၁၃သို့ဖြစ်၍သင်က၊ ဘုရားသခင်သည် အဘယ်သို့ သိတော်မူမည်နည်း။ ထူသောတိမ်တိုက်ကွယ်လျက်နှင့် စီရင်တော်မူနိုင်မည်လော။
14 ೧೪ ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.
၁၄မမြင်နိုင်အောင် ထူထပ်သောတိမ်တို့သည် ကိုယ်တော်ကို လွှမ်းမိုးကြ၏။ ကောင်းကင်စကြဝဠာ ထိပ်ပေါ်မှာ လှည့်လည်တော်မူသည်ဟု ဆိုတတ်၏။
15 ೧೫ ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
၁၅ကာလအချိန်မစေ့မှီ ဖျက်ဆီးခြင်း၊ ရေလွှမ်းမိုး၍၊
16 ೧೬ ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.
၁၆အခြေအမြစ်ပယ်ရှင်းခြင်းကို ခံရသောသူတည်းဟူသော ဘုရားသခင်အား ငါတို့ထံမှ ထွက်သွားလော့ဟူ ၍၎င်း၊ အနန္တတန်ခိုးရှင်သည် ငါ့တို့အဘို့အဘယ်သို့ ပြုနိုင်သနည်းဟူ၍၎င်း၊
17 ೧೭ ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
၁၇ဆိုတတ်သော အဓမ္မ လူတို့လိုက်ဘူး သောလမ်းဟောင်းကို သင်သည်လိုက်ဦးမည်လော။
18 ೧೮ ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
၁၈သို့ရာတွင် ဘုရားသခင်သည် သူတို့အိမ်ကို ကောင်းသောအရာနှင့် ပြည့်စေတော်မူ၏။ မတရားသော သူတို့၏ အကြံအစည်ကို ငါသည် ဝန်မခံ။
19 ೧೯ ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.
၁၉ဖြောင့်မတ်သောသူတို့သည် ကြည့်မြင်၍ ဝမ်းမြောက်ကြ၏။ အပြစ်ကင်းသောသူတို့သည် ထိုအဓမ္မလူ တို့ကို ကဲ့ရဲ့တတ်ကြ၏။
20 ೨೦ ‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
၂၀အကယ်စင်စစ်ငါတို့ရန်သူသည် ပျက်စီးလေပြီ။ သူ၏စည်းစိမ်ကို မီးလောင်လေပြီဟု ဆိုရကြ၏။
21 ೨೧ ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.
၂၁ဘုရားသခင်နှင့် အကျွမ်းဝင်၍ မိဿဟာယဖွဲ့လော့။ ထိုသို့ပြုမှ ကောင်းစားခြင်းသို့ ရောက်ရလိမ့်မည်။
22 ೨೨ ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.
၂၂နှုတ်တော်ထွက်တရားကို ခံယူ၍ စကားတော်ကို နှလုံး၌သွင်းပါလော့။
23 ೨೩ ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
၂၃အနန္တတန်ခိုးရှင်ထံတော်သို့ ပြန်လာလျှင်၊ တည်ဆောက်ခြင်းရှိလိမ့်မည်။ သင့်အိမ်မှဒုစရိုက်ကို ပယ်ရှား လျှင်၊
24 ೨೪ ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.
၂၄ရွှေကိုမြေမှုန့်ကဲ့သို့၎င်း၊ ဩဖိရရွှေကို မြစ်၌ ရှိသောကျောက်စရစ် ကဲ့သို့၎င်းသိုထားရလိမ့်မည်။
25 ೨೫ ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
၂၅ထိုအခါအနန္တတန်ခိုးရှင်သည် သင်၌ရွှေရတနာ၊ သင်သုံးရသော ငွေဘဏ္ဍာဖြစ်တော်မူလိမ့်မည်။
26 ೨೬ ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.
၂၆သင်သည်အနန္တတန်ခိုးရှင်၌ မွေ့လျော်၍၊ ဘုရားသခင်ကို ဖူးမြော်ရသောအခွင့်ရှိလိမ့်မည်။
27 ೨೭ ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
၂၇သင်ဆုတောင်းသောအခါ နားထောင်တော်မူ မည်။ သစ္စာဂတိထားသည်အတိုင်း၊ သစ္စာဝတ်ဖြေရသော အခွင့်ရှိလိမ့်မည်။
28 ೨೮ ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.
၂၈သင်ကြံစည်သောအကြံအစည်သည် ထမြောက် ၍၊ သင်သွားသောလမ်း၌ ရောင်ခြည်ထွန်းလိမ့်မည်။
29 ೨೯ ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.
၂၉သူတပါးတို့သည် နှိမ့်ချခြင်းကိုခံရသောအခါ၊ သင်ကချီးမြှောက်သောအခွင့်ရှိသည်ဟု ဆိုရလိမ့်မည်။ စိတ်နှိမ့်ချသောသူကို ကယ်တင်တော်မူလိမ့်မည်။
30 ೩೦ ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”
၃၀အပြစ်မကင်းသောသူကိုပင် ကယ်နှုတ်တော်မူလိမ့်မည်။ သင်ပြုသောအမှု သန့်ရှင်းသောအားဖြင့် သူသည်ကယ်တင်ခြင်းသို့ ရောက်လိမ့်မည်ဟုမြွက်ဆို၏။