< ಯೋಬನು 23 >
2 ೨ “ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?
直到今天,我還是痛苦的哀訴,他沉重的手掌,使我不得不呻吟。
3 ೩ ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
惟願我知道怎樣能尋到天主,能達到他的寶座前,
4 ೪ ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.
好將我的案情向他陳訴,因為我口中滿了證詞!
5 ೫ ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.
唯願我知道他答覆我的話,明瞭他向我說什麼!
6 ೬ ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.
他豈能靠強力同我爭辯﹖決不,他必留神聽我。
7 ೭ ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.
如此,他會分辨出同他爭論的是個正直人,也許我可永久不再受裁判!
8 ೮ ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
可是我往東行,他不在那裏;我往西行,也找不到他;
9 ೯ ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.
往北找,也看不見他;往南去,也見不到他。
10 ೧೦ ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
他洞悉我所有的行動。他若試驗我,我必如純金出現。
11 ೧೧ ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.
我的腳緊隨著他的足跡,謹守他的道,總沒有偏離。
12 ೧೨ ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
他所發的命令,我總沒有違背;他口中的訓言,我常保存在心中。
13 ೧೩ ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
但他所決定的,誰能變更﹖他所樂意的,必要實行。
14 ೧೪ ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.
他為我注定的,必要完成;類似的事,還有很多。
15 ೧೫ ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.
因此,為了他,我很驚慌,一想起來就害怕。
16 ೧೬ ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.
天主使我的心沮喪,全能者使我恐怖。
17 ೧೭ ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”
因為我雖面臨黑暗,幽暗雖遮蓋我的面,我仍不喪氣。