< ಯೋಬನು 24 >
1 ೧ “ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?
Czemuż od Wszechmocnego nie są zakryte czasy? a którzy go znają, nie widzą dni jego?
2 ೨ ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.
Niezbożni granice przenoszą, trzody zabierają i pasą.
3 ೩ ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
Osła sierotek zajmują, a wołu od wdowy w zastawie biorą.
4 ೪ ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.
Spychają ubogich z drogi; spólnie się muszą nędzni kryć na ziemi.
5 ೫ ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು.
Oto jako leśne osły w puszczach wychodzą na robotę swoję, wstawając rano na łupiestwo; pustynia jest chlebem ich, i dzieci ich.
6 ೬ ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.
Na polu ubogiego pożynają zboże, a niepobożni z winnic zbierają.
7 ೭ ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.
Nagich nocować przymuszają bez odzienia, którzy się nie mają czem nakryć na zimnie.
8 ೮ ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.
Powodzią gór zmaczani bywają, nie mając mieszkania przytulają się do skały.
9 ೯ ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
Porywają sierotkę od piersi, a od ubogiego biorą zastaw.
10 ೧೦ ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.
Nagiemu dopuszczają chodzić bez odzienia, a o głodzie chowają tych, którzy ich snopy noszą.
11 ೧೧ ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.
A ci, którzy między murami ich wyciskają oliwę i prasy tłoczą, pragną.
12 ೧೨ ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.
Ludzie w mieście wzdychają, a dusze zabitych wołają, a Bóg temu wstrętu nie czyni.
13 ೧೩ ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.
Cić to są, którzy się sprzeciwiają światłości, a nie znają dróg jej, ani stanęli na ścieszkach jej.
14 ೧೪ ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.
Raniuczko wstaje mężobójca, zabija ubogiego i niedostatecznego, a w nocy jest jako złodziej.
15 ೧೫ ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.
Oko cudzołożnika pilnuje zmierzku, mówiąc: Nie ujrzy mię nikt; i zakrywa oblicze swe.
16 ೧೬ ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.
Podkopywają w ciemności domy, które sobie naznaczyli, i nienawidzą światła.
17 ೧೭ ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.
Ale zaranek jest im jako cień śmierci; jeźli ich kto pozna, przypada na nich strach cienia śmierci.
18 ೧೮ (ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.
Lekkimi są na wodach; przeklęty dział ich na ziemi; nie patrzą na drogę wolną.
19 ೧೯ ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. (Sheol )
Jako susza i gorącość trawią wody śnieżne, tak grób grzeszników. (Sheol )
20 ೨೦ ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.
Zapomina go żywot matki jego, a robak słodkość z niego czuje; niemasz więcej pamiątki jego, a nieprawość połamana jest jako drzewo.
21 ೨೧ ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).
Roztrąca niepłodną, która nierodziła, a wdowie nie czyni dobrze.
22 ೨೨ ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.
Pociąga też mocarzy możnością swoją: a gdy na nich powstał, zwątpili o żywocie swoim.
23 ೨೩ ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.
Daje mu Bóg, na czemby bezpiecznie spolegać mógł: wszakże oczy jego patrzą na drogi ich.
24 ೨೪ ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.
Na chwilę wywyższeni są, alić ich niemasz; zniżeni i ściśnieni będą jako inni wszyscy, a jako wierzch kłosa ścięci będą.
25 ೨೫ ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?”
A jeźli nie tak jest, gdzież jest ten, coby mi zadał kłamstwo, a coby obrócił wniwecz słowa moje?