< ಯೋಬನು 25 >
1 ೧ ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,
Y respondió Baldad Sujita, y dijo:
2 ೨ “ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.
El señorío y el temor están con él: él hace paz en sus alturas.
3 ೩ ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?
¿Tienen sus ejércitos número? ¿y sobre quién no está su luz?
4 ೪ ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
¿Y cómo se justificará el hombre con Dios? ¿y cómo será limpio el que nace de mujer?
5 ೫ ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
He aquí, que ni aun hasta la luna será resplandeciente: ni las estrellas son limpias delante de sus ojos.
6 ೬ ಹೀಗಿರುವಲ್ಲಿ ನರಹುಳವು ಅಶುದ್ಧವಾದದ್ದು! ನರಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!”
¿Cuánto más el gusano del hombre, e hijo de hombre gusano?