< ಯೋಬನು 26 >
1 ೧ ಆಗ ಯೋಬನು ಹೀಗೆ ಉತ್ತರಕೊಟ್ಟನು,
Then Job answered and said:
2 ೨ “ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.
How hast thou helped the weak, And strengthened the feeble arm!
3 ೩ ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!
How hast thou counselled the ignorant, And revealed wisdom in fulness!
4 ೪ ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”
For whom hast thou uttered these words? And whose spirit spake through thee?
5 ೫ ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.
Before Him the shades tremble Beneath the waters and their inhabitants.
6 ೬ ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol )
The under-world is naked before him, And destruction is without covering. (Sheol )
7 ೭ ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.
He stretcheth out the north over empty space, And hangeth the earth upon nothing.
8 ೮ ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.
He bindeth up the waters in his thick clouds, And the cloud is not rent under them.
9 ೯ ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
He covereth the face of his throne, And spreadeth his clouds upon it.
10 ೧೦ ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.
He hath drawn a circular bound upon the waters, To the confines of light and darkness.
11 ೧೧ ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.
The pillars of heaven tremble And are confounded at his rebuke.
12 ೧೨ ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.
By his power he stilleth the sea, Yea, by his wisdom he smiteth its pride.
13 ೧೩ ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.
By his spirit he hath garnished the heavens; His hand hath formed the fleeing Serpent.
14 ೧೪ ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”
Lo! these are but the borders of his works; How faint the whisper we have heard of him! But the thunder of his power who can understand?