< ಯೋಬನು 27 >
1 ೧ ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,
Ayuba kuwa ya ci gaba da magana,
2 ೨ “ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!
“Na rantse da Allah mai rai, wanda ya danne mini gaskiyata, Maɗaukaki, wanda ya sa nake cikin ɗacin rai.
3 ೩ ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,
Muddin ina da rai a cikina kuma numfashin Allah yana cikin hancina,
4 ೪ ನನ್ನ ತುಟಿಗಳು ಅನ್ಯಾಯವನ್ನು ನುಡಿಯುವುದೇ ಇಲ್ಲ, ನನ್ನ ನಾಲಿಗೆಯು ಎಂದಿಗೂ ಮೋಸದ ಮಾತುಗಳನ್ನಾಡುವುದಿಲ್ಲ.
bakina ba zai faɗi mugun abu ba, harshena kuma ba zai yi ƙarya ba.
5 ೫ ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.
Ba zan taɓa yarda cewa kuna da gaskiya ba; har in mutu, ba zan daina kāre mutuncina ba.
6 ೬ ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.
Zan ci gaba da adalcina, ba zan fasa ba; lamirina ba zai taɓa yashe ni ba, dukan kwanakin raina.
7 ೭ ನನ್ನ ಹಗೆಗೆ ದುಷ್ಟನ ಗತಿಯಾಗಲಿ, ನನ್ನ ವಿರುದ್ಧವಾಗಿ ಎದ್ದವನು ಅ ನೀತಿವಂತನ ಗತಿಯನ್ನು ಕಾಣಲಿ!
“Bari maƙiyana su zama kamar mugaye, masu gāba da ni kuma su zama kamar marasa adalci.
8 ೮ ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
Gama wane bege marar tsoron Allah yake da shi, lokacin da aka datse shi, lokacin da Allah ya ɗauke ransa?
9 ೯ ಅವನಿಗೆ ಶ್ರಮೆ ಬರಲು, ದೇವರು ಅವನ ಮೊರೆಯನ್ನು ಆಲೈಸುವನೋ?
Ko Allah yana sauraron kukansa lokacin da ƙunci ya auko masa?
10 ೧೦ ಅವನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ಆತನನ್ನು ಸರ್ವದಾ ಪ್ರಾರ್ಥಿಸುವನೇ?
Ko zai sami farin ciki daga Maɗaukaki? Ko zai yi kira ga Allah a kowane lokaci?
11 ೧೧ ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ; ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.
“Zan koya muku game da ikon Allah; ba zan ɓoye hanyoyin Maɗaukaki ba.
12 ೧೨ ಇಗೋ, ನೀವೆಲ್ಲರು ಸ್ವತಃ ನೋಡಿದ್ದೀರಿ; ಏಕೆ ಇಂಥ ವ್ಯರ್ಥವಾದ ಆಲೋಚನೆಗಳನ್ನು ಮಾಡಿಕೊಳ್ಳುತ್ತೀರಿ?
Duk kun ga wannan ku da kanku saboda haka me ya sa kuke maganganun nan marasa ma’ana?
13 ೧೩ ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ಹಿಂಸಿಸುವವನಿಗೆ ಸರ್ವಶಕ್ತನಾದ ದೇವರಿಂದ ಸಿಕ್ಕುವ ಸ್ವಾಸ್ತ್ಯವೂ ಹೀಗಿರುತ್ತದೆ.
“Ga abin da mugaye za su samu gādon da azzalumi zai samu daga Maɗaukaki.
14 ೧೪ ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.
Kome yawan’ya’yansa, takobi za tă gama da su; zuriyarsa ba za su taɓa samun isashen abinci ba.
15 ೧೫ ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.
Waɗanda suka tsira annoba za tă kashe su, kuma gwaurayensu ba za su yi kukan mutuwarsu ba.
16 ೧೬ ಅವನು ಬೆಳ್ಳಿಯನ್ನು ಧೂಳಿನ ಹಾಗೆ ಹೇರಳವಾಗಿ ಕೂಡಿಸಿಟ್ಟು, ವಸ್ತ್ರಗಳನ್ನು ಮಣ್ಣಿನಂತೆ ವಿಶೇಷವಾಗಿ ಸಿದ್ಧಮಾಡಿಕೊಂಡರೂ,
Ko da yake ya tara azurfa kamar ƙasa, tufafi kuma kamar tarin ƙasa,
17 ೧೭ ಆ ವಸ್ತ್ರಗಳನ್ನು ನೀತಿವಂತರು ಧರಿಸಿಕೊಳ್ಳುವರು. ಆ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.
abin da ya tara masu adalci za su sa marasa laifi za su raba azurfarsa.
18 ೧೮ ಅವನು ಕಟ್ಟಿಕೊಂಡ ಮನೆಯು ಜೇಡರ ಹುಳದ ಗೂಡಿನಂತೆಯೂ, ಕಾವಲುಗಾರನು ಹಾಕಿಕೊಂಡ ಗುಡಿಸಿಲಂತೆಯೂ ದುರ್ಬಲವಾಗಿರುವುದು.
Gidan da ya gina kamar gidan gizo-gizo, kamar bukkar mai tsaro.
19 ೧೯ ಅವನು ಧನಿಕನಾಗಿ ನಿದ್ರಿಸಿದರೂ ಮತ್ತೆ ನಿದ್ರೆಯನ್ನು ಕಾಣದೆ ಹೋಗುವನು, ತನ್ನ ಕಣ್ಣನ್ನು ತೆರೆಯುತ್ತಲೇ ಎಲ್ಲವೂ ಮಾಯವಾಗುತ್ತದೆ.
Attajiri zai kwanta, amma daga wannan shi ke nan; lokacin da zai buɗe idanunsa, kome ya tafi.
20 ೨೦ ವಿಪತ್ತಿನ ಹೊಳೆಗಳು ಅವನನ್ನು ಹಿಂದಟ್ಟಿ ಹಿಡಿಯುವವು, ರಾತ್ರಿಯಲ್ಲಿ ಬಿರುಗಾಳಿಯು ಅವನನ್ನು ಅಪಹರಿಸುವುದು.
Tsoro zai kwashe shi kamar ambaliyar ruwa; Da dare iska za tă tafi da shi.
21 ೨೧ ಮೂಡಣ ಗಾಳಿಯು ಕೊಚ್ಚಿಕೊಂಡು ಹೋಗುವುದರಿಂದ ಅವನು ಹಾರಿ ಹೋಗುವನು, ಅದು ಅವನನ್ನು ಬಡಿದು ಅವನ ಸ್ಥಳದಿಂದ ದೂರಮಾಡುವುದು.
Iskar gabas za tă tafi da shi; shi ke nan ya ƙare; za tă share shi daga wurinsa.
22 ೨೨ ಆ ಗಾಳಿಯು ಕರುಣೆ ಇಲ್ಲದೆ ಅವನ ಮೇಲೆ ತನ್ನ ಬಾಣಗಳನ್ನು ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇ ಬೇಕೆಂದಿರುವನು.
Za tă murɗe shi ba tausayi, lokacin da yake guje wa ikon iskar.
23 ೨೩ ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”
Zai tafa hannu yă yi tsaki yă kawar da shi daga wurinsa.”