< ಯೋಬನು 28 >

1 “ಬೆಳ್ಳಿ ಸಿಕ್ಕುವ ಗಣಿಯೂ, ಚಿನ್ನದ ಅದುರು ದೊರಕುವ ಸ್ಥಳವೂ ಉಂಟಷ್ಟೆ.
כִּ֤י יֵ֣שׁ לַכֶּ֣סֶף מוֹצָ֑א וּ֝מָק֗וֹם לַזָּהָ֥ב יָזֹֽקּוּ׃
2 ಮಣ್ಣಿನೊಳಗಿಂದ ಕಬ್ಬಿಣವನ್ನು ತೆಗೆಯುವರು, ಕಲ್ಲನ್ನು ಕರಗಿಸಿ ತಾಮ್ರವನ್ನು ಪಡೆಯುವರು.
בַּ֭רְזֶל מֵעָפָ֣ר יֻקָּ֑ח וְ֝אֶ֗בֶן יָצ֥וּק נְחוּשָֽׁה׃
3 ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
קֵ֤ץ ׀ שָׂ֤ם לַחֹ֗שֶׁךְ וּֽלְכָל־תַּ֭כְלִית ה֣וּא חוֹקֵ֑ר אֶ֖בֶן אֹ֣פֶל וְצַלְמָֽוֶת׃
4 ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು, ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
פָּ֤רַץ נַ֨חַל ׀ מֵֽעִם־גָּ֗ר הַֽנִּשְׁכָּחִ֥ים מִנִּי־רָ֑גֶל דַּ֖לּוּ מֵאֱנ֣וֹשׁ נָֽעוּ׃
5 ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.
אֶ֗רֶץ מִמֶּ֥נָּה יֵֽצֵא־לָ֑חֶם וְ֝תַחְתֶּ֗יהָ נֶהְפַּ֥ךְ כְּמוֹ־אֵֽשׁ׃
6 ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.
מְקוֹם־סַפִּ֥יר אֲבָנֶ֑יהָ וְעַפְרֹ֖ת זָהָ֣ב לֽוֹ׃
7 ಆ ದಾರಿಯು ಯಾವ ಹದ್ದಿಗೂ ತಿಳಿಯದು, ಗಿಡಗದ ಕಣ್ಣಿಗೂ ಬಿದ್ದಿಲ್ಲ.
נָ֭תִיב לֹֽא־יְדָ֣עוֹ עָ֑יִט וְלֹ֥א שְׁ֝זָפַ֗תּוּ עֵ֣ין אַיָּֽה׃
8 ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.
לֹֽא־הִדְרִיכֻ֥הוּ בְנֵי־שָׁ֑חַץ לֹֽא־עָדָ֖ה עָלָ֣יו שָֽׁחַל׃
9 ಮನುಷ್ಯನು ಕಗ್ಗಲ್ಲಿನ ಮೇಲೆ ಕೈಮಾಡಿ ಬೆಟ್ಟಗಳನ್ನು ಬುಡದ ತನಕ ಕೆಡವಿಬಿಡುವನು.
בַּֽ֭חַלָּמִישׁ שָׁלַ֣ח יָד֑וֹ הָפַ֖ךְ מִשֹּׁ֣רֶשׁ הָרִֽים׃
10 ೧೦ ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುವನು; ಅವನ ಕಣ್ಣು ಅಮೂಲ್ಯ ಪದಾರ್ಥಗಳನ್ನೆಲ್ಲಾ ಕಾಣುವುದು.
בַּ֭צּוּרוֹת יְאֹרִ֣ים בִּקֵּ֑עַ וְכָל־יְ֝קָ֗ר רָאֲתָ֥ה עֵינֽוֹ׃
11 ೧೧ ನೀರಿನ ಒರತೆಗಳನ್ನು ಹುಡುಕಿ ಹೊರತರುತ್ತಾನೆ, ಮರೆಯಾಗಿದ್ದ ವಸ್ತುವನ್ನು ಬೆಳಕಿಗೆ ತರುವನು.
מִ֭בְּכִי נְהָר֣וֹת חִבֵּ֑שׁ וְ֝תַעֲלֻמָ֗הּ יֹ֣צִא אֽוֹר׃ פ
12 ೧೨ ಜ್ಞಾನವಾದರೋ ಎಲ್ಲಿ ಸಿಕ್ಕೀತು? ವಿವೇಕವು ದೊರೆಯುವ ಸ್ಥಳವೆಲ್ಲಿ?
וְֽ֭הַחָכְמָה מֵאַ֣יִן תִּמָּצֵ֑א וְאֵ֥י זֶ֝ה מְק֣וֹם בִּינָֽה׃
13 ೧೩ ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಭೂಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
לֹא־יָדַ֣ע אֱנ֣וֹשׁ עֶרְכָּ֑הּ וְלֹ֥א תִ֝מָּצֵ֗א בְּאֶ֣רֶץ הַֽחַיִּֽים׃
14 ೧೪ ಭೂಮಿಯ ಕೆಳಗಣ ಸಾಗರವು ನನ್ನಲ್ಲಿ ಇಲ್ಲ ಎನ್ನುವುದು, ಸಮುದ್ರವು, ತನ್ನ ಹತ್ತಿರ ಇಲ್ಲ ಎಂದು ಹೇಳುವುದು.
תְּה֣וֹם אָ֭מַר לֹ֣א בִי־הִ֑יא וְיָ֥ם אָ֝מַ֗ר אֵ֣ין עִמָּדִֽי׃
15 ೧೫ ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವುದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವುದು ಅಶಕ್ಯ.
לֹא־יֻתַּ֣ן סְג֣וֹר תַּחְתֶּ֑יהָ וְלֹ֥א יִ֝שָּׁקֵ֗ל כֶּ֣סֶף מְחִירָֽהּ׃
16 ೧೬ ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.
לֹֽא־תְ֭סֻלֶּה בְּכֶ֣תֶם אוֹפִ֑יר בְּשֹׁ֖הַם יָקָ֣ר וְסַפִּֽיר׃
17 ೧೭ ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?
לֹא־יַעַרְכֶ֣נָּה זָ֭הָב וּזְכוֹכִ֑ית וּתְמ֖וּרָתָ֣הּ כְּלִי־פָֽז׃
18 ೧೮ ಜ್ಞಾನವಿರುವಲ್ಲಿ ಹವಳವೂ, ಸ್ಫಟಿಕವೂ ನೆನಪಿಗೆ ಬರುವುದಿಲ್ಲ. ಮುತ್ತುಗಳನ್ನು ಸಂಪಾದಿಸುವುದಕ್ಕಿಂತಲೂ ಜ್ಞಾನವನ್ನು ಸಂಪಾದಿಸುವುದು ಕಷ್ಟ!
רָאמ֣וֹת וְ֭גָבִישׁ לֹ֣א יִזָּכֵ֑ר וּמֶ֥שֶׁךְ חָ֝כְמָ֗ה מִפְּנִינִֽים׃
19 ೧೯ ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.
לֹֽא־יַ֭עַרְכֶנָּה פִּטְדַת־כּ֑וּשׁ בְּכֶ֥תֶם טָ֝ה֗וֹר לֹ֣א תְסֻלֶּֽה׃ פ
20 ೨೦ ಹೀಗಿರಲು ಜ್ಞಾನವು ಎಲ್ಲಿಂದ ಬರುವುದು? ವಿವೇಕವು ಯಾವ ಸ್ಥಳದಲ್ಲಿ ದೊರಕೀತು?
וְֽ֭הַחָכְמָה מֵאַ֣יִן תָּב֑וֹא וְאֵ֥י זֶ֝֗ה מְק֣וֹם בִּינָֽה׃
21 ೨೧ ಅದು ಎಲ್ಲಾ ಜೀವಿಗಳ ದೃಷ್ಟಿಗೆ ಅಗೋಚರವಾಗಿದೆ, ಆಕಾಶದ ಪಕ್ಷಿಗಳಿಗೆ ಮರೆಯಾಗಿದೆ.
וְֽ֭נֶעֶלְמָה מֵעֵינֵ֣י כָל־חָ֑י וּמֵע֖וֹף הַשָּׁמַ֣יִם נִסְתָּֽרָה׃
22 ೨೨ ನಾಶನವೂ, ಮೃತ್ಯುವೂ, ‘ಅದರ ಸುದ್ದಿ ಮಾತ್ರ ನಮ್ಮ ಕಿವಿಗೆ ಬಿದ್ದಿದೆ’ ಎಂದು ಹೇಳುವವು.
אֲבַדּ֣וֹן וָ֭מָוֶת אָ֣מְר֑וּ בְּ֝אָזְנֵ֗ינוּ שָׁמַ֥עְנוּ שִׁמְעָֽהּ׃
23 ೨೩ ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.
אֱ֭לֹהִים הֵבִ֣ין דַּרְכָּ֑הּ וְ֝ה֗וּא יָדַ֥ע אֶת־מְקוֹמָֽהּ׃
24 ೨೪ ಆತನೊಬ್ಬನೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವನಾಗಿದ್ದಾನೆ.
כִּי־ה֭וּא לִקְצוֹת־הָאָ֣רֶץ יַבִּ֑יט תַּ֖חַת כָּל־הַשָּׁמַ֣יִם יִרְאֶֽה׃
25 ೨೫ ಆತನು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ ನೀರುಗಳನ್ನು ತಕ್ಕ ಪರಿಮಾಣಗಳಿಂದ ಅಳತೆಮಾಡಿದನು.
לַעֲשׂ֣וֹת לָר֣וּחַ מִשְׁקָ֑ל וּ֝מַ֗יִם תִּכֵּ֥ן בְּמִדָּֽה׃
26 ೨೬ ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ,
בַּעֲשֹׂת֣וֹ לַמָּטָ֣ר חֹ֑ק וְ֝דֶ֗רֶךְ לַחֲזִ֥יז קֹלֽוֹת׃
27 ೨೭ ಜ್ಞಾನವನ್ನು ಕಂಡು ಲಕ್ಷಿಸಿದನು, ಅದನ್ನು ಸ್ಥಾಪಿಸಿದ್ದಲ್ಲದೆ ವಿಮರ್ಶೆಮಾಡಿದನು.
אָ֣ז רָ֭אָהּ וַֽיְסַפְּרָ֑הּ הֱ֝כִינָ֗הּ וְגַם־חֲקָרָֽהּ׃
28 ೨೮ ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
וַיֹּ֤אמֶר ׀ לָֽאָדָ֗ם הֵ֤ן יִרְאַ֣ת אֲ֭דֹנָי הִ֣יא חָכְמָ֑ה וְס֖וּר מֵרָ֣ע בִּינָֽה׃ ס

< ಯೋಬನು 28 >