< ಯೋಬನು 29 >
1 ೧ ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,
addidit quoque Iob adsumens parabolam suam et dixit
2 ೨ “ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!
quis mihi tribuat ut sim iuxta menses pristinos secundum dies quibus Deus custodiebat me
3 ೩ ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.
quando splendebat lucerna eius super caput meum et ad lumen eius ambulabam in tenebris
4 ೪ ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.
sicut fui in diebus adulescentiae meae quando secreto Deus erat in tabernaculo meo
5 ೫ ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.
quando erat Omnipotens mecum et in circuitu meo pueri mei
6 ೬ ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
quando lavabam pedes meos butyro et petra fundebat mihi rivos olei
7 ೭ ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ
quando procedebam ad portam civitatis et in platea parabant cathedram mihi
8 ೮ ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.
videbant me iuvenes et abscondebantur et senes adsurgentes stabant
9 ೯ ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.
principes cessabant loqui et digitum superponebant ori suo
10 ೧೦ ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು.
vocem suam cohibebant duces et lingua eorum gutturi suo adherebat
11 ೧೧ ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
auris audiens beatificabat me et oculus videns testimonium reddebat mihi
12 ೧೨ ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
quod liberassem pauperem vociferantem et pupillum cui non esset adiutor
13 ೧೩ ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.
benedictio perituri super me veniebat et cor viduae consolatus sum
14 ೧೪ ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.
iustitia indutus sum et vestivit me sicut vestimento et diademate iudicio meo
15 ೧೫ ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.
oculus fui caeco et pes claudo
16 ೧೬ ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.
pater eram pauperum et causam quam nesciebam diligentissime investigabam
17 ೧೭ ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.
conterebam molas iniqui et de dentibus illius auferebam praedam
18 ೧೮ ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.
dicebamque in nidulo meo moriar et sicut palma multiplicabo dies
19 ೧೯ ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.
radix mea aperta est secus aquas et ros morabitur in messione mea
20 ೨೦ ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ.
gloria mea semper innovabitur et arcus meus in manu mea instaurabitur
21 ೨೧ ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.
qui me audiebant expectabant sententiam et intenti tacebant ad consilium meum
22 ೨೨ ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,
verbis meis addere nihil audebant et super illos stillabat eloquium meum
23 ೨೩ ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.
expectabant me sicut pluviam et os suum aperiebant quasi ad imbrem serotinum
24 ೨೪ ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.
si quando ridebam ad eos non credebant et lux vultus mei non cadebat in terram
25 ೨೫ ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”
si voluissem ire ad eos sedebam primus cumque sederem quasi rex circumstante exercitu eram tamen maerentium consolator